ಬೆಂಗಳೂರು: ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎಂ.ನಾಗರಾಜ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಈ ಬಗ್ಗೆ ನೇಮಕಾತಿ ಆದೇಶ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜಾಜಿನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮಾಡುವಂತೆ ಎಂ.ನಾಗರಾಜ್ ಅವರಿಗೆ ನೇಮಕಾತಿ ಆದೇಶದಲ್ಲಿ ಸಲಹೆ ನೀಡಿದ್ದಾರೆ.