Asianet Suvarna News Asianet Suvarna News

ಜೆಡಿಎಸ್ ಮುಖಂಡ ದೇವೇಗೌಡರಿಂದ ಮಹತ್ವದ ನಿರ್ಧಾರ ಪ್ರಕಟ

ಜೆಡಿಎಸ್ ಮುಖಂಡ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮಹತ್ವದ ನಿರ್ಧಾರವೊಂದನ್ನು ಪ್ರಕಟ ಮಾಡಿದ್ದಾರೆ. ಬಿಬಿಎಂಪಿ ಹಾಗೂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. 

No Alliance With Congress in BBMP Election Says HD Devegowda
Author
Bengaluru, First Published Jan 28, 2019, 7:22 AM IST

ಬೆಂಗಳೂರು :  ಬಿಬಿಎಂಪಿ ಸೇರಿದಂತೆ ರಾಜ್ಯದ 11 ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಪಕ್ಷ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ.

ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ಪಕ್ಷದ ಸಂಘಟನೆ ಹಾಗೂ ಚುನಾವಣೆ ಸಿದ್ಧತೆ ಕುರಿತಂತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ, ಕಲಬುರ್ಗಿ, ತುಮಕೂರು, ಬಳ್ಳಾರಿ, ದಾವಣಗೆರೆ ಹಾಗೂ ವಿಜಯಪುರ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಜೆಡಿಎಸ್‌ ಸ್ಪರ್ಧಿಸಲು ತೀರ್ಮಾನಿಸಲಾಗಿದೆ. ಮೈತ್ರಿ ಸರ್ಕಾರದ ಪಾಲುದಾರ ಪಕ್ಷವಾದ ಕಾಂಗ್ರೆಸ್‌ ಕೂಡ ಏಕಾಂಗಿ ಸ್ಪರ್ಧೆಗೆ ತೀರ್ಮಾನಿಸಿದೆ. ಆದರೆ, ಚುನಾವಣೆ ಬಳಿಕ ಮೇಯರ್‌ ಆಯ್ಕೆ ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಚುನಾವಣೆಯಲ್ಲಿ ಕಾರ್ಯಕರ್ತರ ನಡುವೆ ಹೊಂದಾಣಿಕೆ ಮಾಡಿಕೊಳ್ಳುವುದು ಕಷ್ಟ. ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಲಾಗಿದೆ. ಮುಂಬರುವ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಬಲಪಡಿಸುವುದೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

Follow Us:
Download App:
  • android
  • ios