ಬಸವಕಲ್ಯಾಣ: 24/7 ನೀರು ಯೋಜನೆಯ ಕಾಮಗಾರಿ ತಿಂಗಳೊಳಗೆ ಪೂರ್ಣಗೊಳಿಸಿ
ನಿರಂತರ ನೀರು ಯೋಜನೆ ಕಾಮಗಾರಿತಿಂಗಳಲ್ಲಿ ಪೂರ್ಣಗೊಳಿಸಲುಅಧೀಕಾರಿಗಳಿಂದ ಭರವಸೆ|ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಿ| ಒಂದು ವೇಳೆ ಅಭಿವೃದ್ಧಿ ಕೆಲಸಗಳಿಗೆ ನಿರ್ಲಕ್ಷ್ಯತೆ ಮಾಡಿದ್ದರೆ ಕ್ರಮ ಜರುಗಿಸಲಾಗುವುದು| ನಗರದ ಎಲ್ಲ ವಾರ್ಡ್‌ಗಳಲ್ಲಿ ಸಮರ್ಪಕ ಕುಡಿಯುವ ನೀರು ಪುರೈಕೆ, ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ ನೀಡಿ| ಜನರಿಗೆ ಅಶುದ್ಧ ನೀರು ಪೂರೈಕೆಯಾಗಿ ವಾಂತಿ ಬೇಧಿ, ಡೆಂಘೀ ಸೇರಿ ವಿವಿಧ ಸಾಂಕ್ರಾಮಿಕ ಕಾಯಿಲೆಗಳು ಬಂದರೆ ಯಾರು ಹೊಣೆ| ನಗರಸಭೆಯ ಎಲ್ಲ ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು|
ಬಸವಕಲ್ಯಾಣ[ಅ.24]: ನಗರದಲ್ಲಿ 24/7 ನಿರಂತರ ನೀರು ಯೋಜನೆಯ ಕಾಮಗಾರಿಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ಬಿ.ನಾರಾಯಣರಾವ ಸೂಚಿಸಿದ್ದಾರೆ.
ನಗರಸಭೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ವಾರ್ಡ್‌ಗಳಲ್ಲಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ನಗರದ ಎಲ್ಲ ವಾರ್ಡ್‌ಗಳಲ್ಲಿ ಸಮರ್ಪಕ ಕುಡಿಯುವ ನೀರು ಪುರೈಕೆ, ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಅಭಿವೃದ್ಧಿ ಕೆಲಸಗಳಿಗೆ ನಿರ್ಲಕ್ಷ್ಯತೆ ಸಹಿಸಲಾಗದು ಎಂದು ಎಚ್ಚರಿಕೆ ನೀಡಿದರು.
ನಗರಕ್ಕೆ ದಿನದ 24/7 ಗಂಟೆಗಳ ಕಾಲ ನಿರಂತರ ನೀರು ಪೂರೈಸುವ ಸಂಬಂಧ ರಾಜ್ಯ ಸರ್ಕಾರದಿಂದ ಮಹತ್ವದ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ. ಆದರೆ ಕಾಮಗಾರಿ ಆರಂಭವಾಗಿ ಹಲವು ವರ್ಷಗಳೇ ಗತಿಸಿದರು ಕಾಮಗಾರಿ ಪೂರ್ಣಗೊಂಡು ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ. ಯೋಜನೆಯಡಿ ಪೈಪ್‌ಲೈನ್‌ಗಾಗಿ ಹಲವಡೆ ತಗ್ಗು ತೊಡಿ ಹಾಗೆ ಬಿಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯತನವೆ ಇದಕ್ಕೆ ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ನಿರಂತರ ನೀರು ಪೂರೈಕೆ ಯೋಜನೆ ವಿಳಂಬವಾಗುತ್ತಿರುವ ಕಾರಣ ಹಳೆ ವ್ಯವಸ್ಥೆಯಿಂದಲೇ ನಗರಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದ ಜನರಿಗೆ ಅಶುದ್ಧ ನೀರು ಪೂರೈಕೆಯಾಗಿವಾಂತಿ ಬೇಧಿ, ಡೆಂಘೀ ಸೇರಿದಂತೆ ವಿವಿಧ ಸಾಂಕ್ರಾಮಿಕ ಕಾಯಿಲೆಗಳಿಂದ ಜನ ನರಳುವಂತಾಗಿದೆ. ಇದಕ್ಕೆ ಯಾರು ಹೊಣೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಿರಂತರ ನೀರು ಪೂರೈಕೆ ಕಾಮಗಾರಿ ಶೀಘ್ರಪೂರ್ಣಗೊಳಿಸಬೇಕು ಎಂದು ಸಂಬಂಧಿತರಿಗೆ ಅನೇಕ ಬಾರಿ ಸೂಚಿಸಿದರು ಪ್ರಯೋಜನೆಯಾಗಿಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ಬರುವ ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುತ್ತೆವೆ ಎಂದು ಸಂಬಂಧಿತರು ಲಿಖಿತ ರೂಪದಲ್ಲಿ ಭರವಸೆ ನೀಡಬೇಕು. ಇಲ್ಲವಾದಲ್ಲಿ ನಿಮ್ಮ ವಿರುದ್ಧ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ಪತ್ರ ಬರೆಯಬೇಕಾಗುತ್ತದೆ ಎಂದು ಖಡಕ್ ಆಗಿಯೇ ಹೇಳಿದರು.
ಸಭೆಯಲಿದ್ದ ಯೋಜನೆ ಅನುಷ್ಠಾನಾಧಿಕಾರಿಗಳು ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ನೀರು ಪೂರೈಕೆಗೆ ಚಾಲನೆ ನೀಡಲಾಗುವುದು ಎಂದು ಲಿಖಿತ ರೂಪದಲ್ಲಿಯೇ ಮುಚ್ಚಳಿಕೆ ಪತ್ರ ಬರೆದುಕೊಟ್ಟರು. ನಗರದ ವಿವಿಧ ಬಡಾವಣೆಗಳಲ್ಲಿ ಅಸ್ವಚ್ಛವಾತಾವರಣದಿಂದಾಗಿ ಜನರಿಗೆ ಡೆಂಘೀ ಜ್ವರಹರಡುತ್ತಿದೆ. ನಗರಸಭೆ ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಶಾಸಕರು ಸೂಚಿಸಿದರು.
ಸದಸ್ಯರಾದ ರವೀಂದ್ರ ಗಾಯಕವಾಡ, ಗಫಾರ ಪೇಶ್ ಇಮಾಮ್, ರವೀಂದ್ರಬೋರಾಳೆ, ರಾಮ ಜಾಧವ, ಸಗೀರೋದ್ದಿನ್, ಮೀರ್‌ಅಮಜದ ನವರಂಗ, ಪೌರಾಯುಕ್ತ ಸುರೇಶ ಬಬಲಾದಹಾಗೂ ಸದಸ್ಯರು ಉಪಸ್ಥಿತರಿದ್ದರು.ನಿರಂತರ ಕುಡಿಯುವ ನೀರು ಯೋಜನೆ ಕಾಮಗಾರಿ ಪೂರ್ಣಗೊಳಿಸಲು ನಗರಸಭೆ ಅಧಿಕಾರಿಗಳಿಂದ ಲಿಖಿತ ಮುಚ್ಚಳಿಕೆ ಬರೆಸಿಕೊಂಡ ಶಾಸಕ ಬಿ. ನಾರಾಯಣರಾವ್.