Asianet Suvarna News Asianet Suvarna News

ಎಲೆಕ್ಟ್ರಿಕ್ ಸ್ಕೂಟರ್ಗಳಲ್ಲಿ ಬೆಂಕಿ ಅವಘಡ: ನಿರ್ಲಕ್ಷ್ಯ ತೋರಿದ ಕಂಪನಿ ವಿರುದ್ಧ ಕಠಿಣ ಕ್ರಮ: ನಿತಿನ್ ಗಡ್ಕರಿ

ಕಳೆದ ಕೆಲ ದಿನಗಳಲ್ಲಿ ದೇಶಾದ್ಯಂತ ಎಲೆಕ್ಟ್ರಿಕ್‌ ವಾಹನಗಳಲ್ಲಿ ಬೆಂಕಿ ಅನಾಹುತಗಳು ಹೆಚ್ಚುತ್ತಿರುವ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿರುವುದಾಗಿ ತಿಳಿಸಿರುವ ಗಡ್ಕರಿ, ಇಂತಹ ಕಂಪನಿಗಳ ವಿರುದ್ಧ ದೊಡ್ಡ ಪ್ರಮಾಣದ ದಂಡ ವಿಧಿಸುವುದಾಗಿ ತಿಳಿಸಿದ್ದಾರೆ.

Heavy Penalty will be imposed on faulty electric vehicle manufacturers: Nitin Gadkari
Author
Bangalore, First Published Apr 23, 2022, 9:37 AM IST

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಲ್ಲಿ (EV) ಬೆಂಕಿ ಅವಘಡಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ, ಲೋಪದೋಷವಿರುವ ಉತ್ಪನ್ನಗಳನ್ನು ತಯಾರಿಸುವ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಬೆಂಕಿ ಅವಘಡದ ಯಾವುದೇ ಘಟನೆಗಳಲ್ಲಿ ಕಂಪನಿಗಳು ತಮ್ಮ ಉತ್ಪನ್ನಗಳನ್ನು ತಯಾರಿಸುವಲ್ಲಿ ಸುರಕ್ಷತೆಯ ಮಾನದಂಡ ಅನುಸರಿಸುವಲ್ಲಿ ನಿರ್ಲಕ್ಷ್ಯ ತೋರಿರುವುದು ಕಂಡುಬಂದಲ್ಲಿ, ಅಂತಹ ಕಂಪನಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕಳೆದ ಕೆಲ ದಿನಗಳಲ್ಲಿ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳಲ್ಲಿ ಬೆಂಕಿ ಅನಾಹುತಗಳು ಹೆಚ್ಚುತ್ತಿರುವ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿರುವುದಾಗಿ ತಿಳಿಸಿರುವ ಗಡ್ಕರಿ, ಇಂತಹ ಕಂಪನಿಗಳ ವಿರುದ್ಧ ದೊಡ್ಡ ಪ್ರಮಾಣದ ದಂಡ ವಿಧಿಸುವುದಾಗಿ ತಿಳಿಸಿದ್ದಾರೆ.

ದೇಶದ ಪ್ರಮುಖ ಎಲೆಕ್ಟ್ರಿಕ್ ಕಂಪನಿಗಳಾದ ಓಲಾ ಎಲೆಕ್ಟ್ರಿಕ್ (Ola Electric), ಪ್ಯೂರ್ ಇವಿ (Pure EV) ಸೇರಿದಂತೆ ಹಲವು ಎಲೆಕ್ಟ್ರಿಕ್ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಈಗಾಗಲೇ ವರದಿಯಾಗಿವೆ. ಈ ಘಟನೆಗಳನ್ನು ಸರ್ಕಾರ ಗಂಬೀರವಾಗಿ ಪರಿಗಣಿಸುತ್ತಿರುವುದು ತಿಳಿಯುತ್ತಿದ್ದಂತೆ ಹಲವು ದ್ವಿಚಕ್ರ ವಾಹನಗಳ ತಯಾರಕ ಕಂಪನಿಗಳ ಮಾಲೀಕರು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದರಲ್ಲಿ ಓಲಾ ಎಲೆಕ್ಟ್ರಿಕ್ನ ಭವೀಶ್ ಅಗರ್ವಾಲ್ ಹಾಗೂ ಬೌನ್ಸ್ನ ವಿವೇಕಾನಂದ ಹಳ್ಳೆಕೆರೆ ಕೂಡ ಸೇರಿದ್ದಾರೆ. 

ಇದಾದ ನಂತರ ಸಚಿವರು ಈ ಗಂಭೀರ ಸಂದೇಶ ರವಾನಿಸಿದ್ದಾರೆ. ತಮ್ಮ ಟ್ವೀಟ್ನಲ್ಲಿ ಅವರು “ಕಳೆದ ಎರಡು ತಿಂಗಳಲ್ಲಿ ಹಲವು ಎಲೆಕ್ಟ್ರಿಕ್ ದ್ಚಿಚಕ್ರಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ವರದಿಯಾಗಿದೆ. ಈ ಘಟನೆಗಳಲ್ಲಿ ಹಲವರು ತಮ್ಮ ಜೀವ ಕಳೆದುಕೊಂಡಿರುವುದು ಮತ್ತು ಗಾಯಗೊಂಡಿರುವುದು ದುರದೃಷ್ಟಕರ ” ಎಂದಿದ್ದಾರೆ.
“ಈ ಘಟನೆಗಳ ತನಿಖೆಗೆ ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ ಮತ್ತು ಅವರಿಗೆ ಪರಿಹಾರ ಕ್ರಮಗಳನ್ನು ಶಿಫಾರಸು ಮಾಡುವಂತೆ ಕೂಡ ಸೂಚಿಸಿದ್ದೇವೆ. ಈ ವರದಿಗಳ ಆಧಾರದ ಮೇಲೆ, ನಾವು ಲೋಪ ಎಸಗಿರುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಶೀಘ್ರದಲ್ಲೇ ನಾವು ಎಲೆಕ್ಟ್ರಿಕ್ ವಾಹನಗಳಿಗೆ ಗುಣಮಟ್ಟದ ಮಾನದಂಡಗಳನ್ನು ಕೂಡ ಬಿಡುಗಡೆಗೊಳಿಸಲಿದ್ದೇವೆ” ಎಂದಿದ್ದಾರೆ.

“ಯಾವುದೇ ಕಂಪನಿ ಉತ್ಪಾದನಾ ಪ್ರಕ್ರಿಯೆಯಲ್ಲಿ ಲೋಪಗಳನ್ನು ಎಸಗಿರುವುದು ಕಂಡುಬಂದಲ್ಲಿ, ಅಂತಹ ಕಂಪನಿಗಳ ವಿರುದ್ಧ ಭಾರಿ ದಂಡ ವಿದಿಸಲಾಗುವುದು ಮತ್ತು ದೋಷವುಳ್ಳ ವಾಹನಗಳನ್ನು ಹಿಂಪಡೆಯುವಂತೆ ಆದೇಶಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ. 
ಇತ್ತೀಚೆಗೆ ಪುಣೆಯಲ್ಲಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿಯಾಗಿರುವ ಕುರಿತು ತನಿಖೆ ನಡೆಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಅಗ್ನಿ ಸ್ಫೋಟಕ ಮತ್ತು ಪರಿಸರ ಸುರಕ್ಷತಾ ಕೇಂದ್ರ (ಸಿಎಫ್ಇಇಎಸ್)ಗೆ ನಿರ್ದೇಶಿಸಿದೆ.

ಇದನ್ನೂ ಓದಿ: Ola Scooter Accident ಓಲಾ ಸ್ಕೂಟರ್ ಅಪಘಾತ, ಮಾಲೀಕನ ಆರೋಪ ತಳ್ಳಿ ಹಾಕಿ ಸಾಕ್ಷಿ ನೀಡಿದ ಕಂಪನಿ!

ಏಪ್ರಿಲ್ 16ರಂದು ತಮಿಳುನಾಡಿನ ಒಕಿನಾವ ಡೀಲರ್ಶಿಪ್ನಲ್ಲಿ ಬೆಂಕಿ ಅವಘಡ ಕಾಣಿಸಿಕೊಂಡಿತ್ತು. ಇದಕ್ಕೆ ಕಾರಣ ಅಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಎಂದು ಗುರುತಿಸಲಾಗಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ,  ಡೀಲರ್ಶಿಪ್ನಲ್ಲಿ ಉಂಟಾಗಿರುವ ಹಾನಿಯ ಕುರಿತು ಇನ್ನೂ ಅಂದಾಜಿಸಲಾಗಿಲ್ಲ. 
ಕಳೆದ ತಿಂಗಳು, ಪುಣೆಯಲ್ಲಿ ಓಲಾ ಎಲೆಕ್ಟ್ರಿಕ್ (Ola electric) ಸ್ಕೂಟರ್ಗೆ ಬೆಂಕಿ ಹತ್ತಿಕೊಂಡ ನಂತರ, ಕೇಂದ್ರ ಸರ್ಕಾರ ಘಟನೆಯ ಕುರಿತು ಸಮಗ್ರ ತನಿಖೆಗೆ ಆದೇಶಿಸಿದೆ. ಅಗ್ನಿ ಸ್ಫೋಟಕ ಮತ್ತು ಪರಿಸರ ಸುರಕ್ಷತೆ (ಸಿಎಫ್ಇಇಎಸ್-CFEES))ಗೆ ಈ ಜವಾಬ್ದಾರಿ ವಹಿಸಲಾಗಿದೆ. ಘಟನೆಗೆ ಕಾರಣವಾದ ಸನ್ನಿವೇಶಗಳನ್ನು ಪತ್ತೆ ಹಚ್ಚುವ ಜೊತೆಗೆ, ಇದಕ್ಕೆ ಪರಿಹಾರ ಕ್ರಮಗಳನ್ನು ಸೂಚಿಸುವಂತೆ ರಸ್ತೆ ಸಾರಿಗೆ ಸಚಿವಾಲಯ ಸೂಚನೆ ನೀಡಿದೆ.

ಇದನ್ನೂ ಓದಿ: ಪ್ಯೂರ್ ಇವಿ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಮತ್ತೊಂದು ಬೆಂಕಿ ಅವಘಡ

ಏಪ್ರಿಲ್ 9ರಂದು ಮತ್ತೊಂದು ಘಟನೆಯಲ್ಲಿ ಮಹಾರಾಷ್ಟ್ರದ ನಾಸಿಕ್ನಲ್ಲಿನ ಜಿತೇಂದ್ರ ನ್ಯೂ ಇವಿ (Jitendra new EV) ಟೆಕ್ನ ಕಾರ್ಖಾನೆ ಗೇಟ್ ಬಳಿ ವಾಹನಗಳನ್ನು ಸಾಗಿಸುವಾಗ ದ್ವಿಚಕ್ರ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. 

Follow Us:
Download App:
  • android
  • ios