Asianet Suvarna News Asianet Suvarna News

ಬಿಬಿಎಂಪಿ 2024-25ನೇ ಸಾಲಿನ ಬಜೆಟ್ ಸಿದ್ಧತೆ; ಈಗ್ಲಾದ್ರೂ ನೆರವೇರುತ್ತಾ ವಿವಿಧ ಇಲಾಖೆಗಳ ಸಮನ್ವಯತೆ!

ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬಿಬಿಎಂಪಿ 2024-25ನೇ ಸಾಲಿನ ಬಜೆಟ್‌ನಲ್ಲಿಯಾದರೂ ಪಾಲಿಕೆ ವ್ಯಾಪ್ತಿಯಲ್ಲಿನ ಇಲಾಖೆಗಳ ಸಮನ್ವಯತೆ ತರುವಂತೆ ಜನಪ್ರತಿನಿಧಗಳು ಸಲಹೆ ನೀಡಿದ್ದಾರೆ.

DCM DK Shivakumar did Bengalureans Representatives meeting for BBMP 2024 25 budget preparation sat
Author
First Published Jan 29, 2024, 11:15 PM IST

ಬೆಂಗಳೂರು (ಜ.29): ರಾಜ್ಯದ ಅತಿ ದೊಡ್ಡ ಸ್ಥಳೀಯ ಆಡಳಿತ ಸಂಸ್ಥೆಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಕಳೆದ 10 ವರ್ಷಗಳಿಂದ ವಿವಿಧ ಇಲಾಖೆಗಳ (ಬಿಡಿಎ, ಬಿಡಬ್ಲ್ಯೂಎಸ್‌ಎಸ್‌ಬಿ, ಬೆಸ್ಕಾಂ, ಇತರೆ..) ಸಮನ್ವಯತೆ ಭರವಸೆಯನ್ನು ಸರ್ಕಾರ ಹೇಳುತ್ತಲೇ ಬಂದಿವೆ. ಆದರೆ, ಈಗಾಗಲೇ ಮಹಾನಗರ ಪಾಲಿಕೆ ಸದಸ್ಯರಿಲ್ಲದೇ (ಕಾರ್ಪೋರೇಟರ್ಸ್) ನಾಲ್ಕು ವರ್ಷಗಳನ್ನು ಕಳೆದ ಬಿಬಿಎಂಪಿ 2024-25ನೇ ಸಾಲಿನ ಬಜೆಟ್‌ ಮಂಡಿಸಲು ಸಿದ್ಧತೆ ಮಾಡಿಕೊಂಡಿದೆ. ಬಜೆಟ್‌ ಸಲಹೆಯಾಗಿ ಪಾಲಿಕೆ ವ್ಯಾಪ್ತಿಯಲ್ಲಿನ ಇಲಾಖೆಗಳ ಸಮನ್ವಯತೆ ಮಾಡುವಂತೆ ಸಾರ್ವಜನಿಕರು ಮತ್ತು ಸ್ಥಳೀಯ ಜನಪ್ರತಿಗಳು ಸಲಹೆಯನ್ನು ನೀಡಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬಿಬಿಎಂಪಿ 2024-25ನೇ ಸಾಲಿನ ಬಜೆಟ್‌ ಕುರಿತು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಬೆಂಗಳೂರಿನ ಎಲ್ಲ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿ ಸಲಹೆ ನೀಡಲು ಅವಕಾಶ ನೀಡಲಾಗಿತ್ತು. ಈ ವೇಳೆ ಕಳೆದ 10 ವರ್ಷಗಳಿಂದ ಕೇವಲ ಭರವಸೆ ಹಾಗೂ ಘೋಷಣೆಯಾಗಿಯೇ ಉಳಿದಿರುವ ಬಿಬಿಎಂಪಿ ವ್ಯಾಪ್ತಿಯೊಳಗಿನ ಎಲ್ಲ ಇಲಾಖೆಗಳನ್ನು ಸಮನ್ವಯಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸುವಂತೆ ಸಲಹೆಯನ್ನು ನೀಡಿದ್ದಾರೆ.

ಬಿಡಿಎ ಅಧ್ಯಕ್ಷರಾಗಿ ಮೊದಲು ಈ ಕೆಲಸ ಮಾಡೋದಾಗಿ ಶಪಥ ಮಾಡಿದ ಶಾಸಕ ಎನ್.ಎ.ಹ್ಯಾರಿಸ್!

ಮುಂದುವರೆದು ಬೆಂಗಳೂರಿನ ಸಂಚಾರ ದಟ್ಟಣೆ, ಶುದ್ಧ ಕುಡಿಯುವ ನೀರು, ಘನತ್ಯಾಜ್ಯ ವಿಲೇವಾರಿ, ಅನಧಿಕೃತ ಫ್ಲೆಕ್ಸ್ ಗಳ ಹಾವಳಿ ತಡೆಯುವ ವಿಚಾರವಾಗಿ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಆಸ್ತಿ ತೆರಿಗೆ ಪಾವತಿ ಮಾಡದೇ ಇರುವವರ ಬಗ್ಗೆ ನಿಗಾ ವಹಿಸಿ, ಸರಿಯಾಗಿ ತೆರಿಗೆ ವಸೂಲಿ ಮಾಡಲು ಕ್ರಮವಹಿಸುವ ಬಗ್ಗೆ ತೀರ್ಮಾನಿಸಲಾಯಿತು. ಹಂತಹಂತವಾಗಿ ಬೆಂಗಳೂರು ಸಮಸ್ಯೆ ಗಳ ಪರಿಹಾರ ಮಾಡುವುದು, ಅದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಬಿಡಿಎ, ಜಲ ಮಂಡಲಿ, ಬೆಸ್ಕಾಂ ನಡುವೆ ಸಮನ್ವಯತೆ ಸಾಧಿಸಲು ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು. ಜೊತೆಗೆ, 6 ಟಿಎಂಸಿ ನೀರನ್ನು ಬೆಂಗಳೂರಿಗೆ ಬಳಸಲು ಆದ್ಯತೆ ಮೇಲೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.

ಬೆಂಗಳೂರು ಬಾಲಬ್ರೂಹಿ ಗೆಸ್ಟ್‌ಹೌಸ್ ಇನ್ಮೇಲೆ ಶಾಸಕರ ಅಡ್ಡಾ; ಇದನ್ನು ಕ್ಲಬ್ ಅನ್ನೊಂಗಿಲ್ಲ, ಶಾಸಕಾಂಗ ಸಂಸ್ಥೆ ಅನ್ನಬೇಕು!

ಬಿಬಿಎಂಪಿ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಬಂದ ಪ್ರಮುಖ ಸಲಹೆಗಳು

  • • ಬ್ರಾಂಡ್ ಬೆಂಗಳೂರು ಅಡಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು.
  • • ಆಸ್ತಿ ತೆರಿಗೆ ವಿಚಾರದಲ್ಲಿ ಸರಿಯಾದ ಕ್ರಮಗಳನ್ನು ಜಾರಿಗೆ ತಂದು ಹೆಚ್ಚು ತೆರಿಗೆ ಸಂಗ್ರಹ ಮಾಡವುದು.
  • • ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ಇಲಾಖೆಗಳ ಸಮನ್ವಯತೆಗೆ ತರುವುದು.
  • • ಪಾದಚಾರಿ ಒತ್ತುವರಿಗಳನ್ನು ತೆರವುಗಳಿಸಿ, ಅಭಿವೃದ್ಧಿಪಡಿಸುವ ಮೂಲಕ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು. 
  • • ನಗರದ ರಸ್ತೆಗಳ ಬದಿಯಲ್ಲಿ ಅನಾಥ ವಾಹನಗಳು ರಸ್ತೆ ಬದಿಯಲ್ಲೇ ನಿಂತಿವೆ, ಅದಕ್ಕೆ ಜಾಗಗಳನ್ನು ಗುರುತಿಸಿ ವಾಹನಗಳನ್ನು ತೆರವುಗೊಳಿಸುವುದು.
  • • ಅಕ್ರಮ-ಸಕ್ರಮ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಂಡು ಸಮಸ್ಯೆ ಬಗೆಹರಿಸುವುದು. 
  • • ಆಟದ ಮೈದಾನ, ಕೆರೆ, ಉದ್ಯಾನಗಳಿಗಳಲ್ಲಿ ಬದ್ರತಾ ಸಿಬ್ಬಂದಿ ನಿಯೋಜನೆ ಮಾಡುವುದು ಹಾಗೂ ಸರಿಯಾಗಿ ನಿರ್ವಹಣೆ ಮಾಡುವುದು.
  • • ಕಲ್ಯಾಣ ಕಾರ್ಯಕ್ರಮದಡಿ ಬಡವರ್ಗದ ಜನರಿಗೆ ಅನುಕೂಲ ಮಾಡುವುದು.
  • • ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದು.
  • • ಕಸದ ಸಮಸ್ಯೆ ಬಗೆಹರಿಸುವುದು
  • • ವಿಧಾನಸಭಾ ಕ್ಷೇತ್ರದ ವಿಸ್ತೀರ್ಣ/ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲು ಕ್ರಮ
  • • ಸಂಚಾರ ದಟ್ಟಣೆ ನಿಯಂತ್ರಿಸುವುದು.
  • • ನಗರದಲ್ಲಿ ಮೇಲುಸೇತುವೆ ಮತ್ತು ಮೆಟ್ರೋದ ಡಬ್ಬಲ್ ಡೆಕ್ಕರ್ ವ್ಯವಸ್ಥೆ ಮಾಡಲು ಕ್ರಮ ಕೈಗೊಂಡು, ಅದಕ್ಕೆ ಅನುದಾನ ಮೀಸಲಿಡಬೇಕು
  • • ಬೃಹತ್ ನೀರುಗಾಲುವೆ ಸಮಸ್ಯೆ ಬಗೆಹರಿಸುವುದು
  • • ಬೀದಿ ದೀಪಗಳ ಅಳವಡಿಕೆ ಹಾಗೂ ನಿರ್ವಹಣೆ ಮಾಡುವುದು
  • • ರಸ್ತೆ ಅಭಿವೃದ್ಧಿಗೆ ಸೂಕ್ರ ಕ್ರಮ ತೆಗೆದುಕೊಳ್ಳುವುದು
Follow Us:
Download App:
  • android
  • ios