Union Budget 2022: 75 ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ: ಅಂಚೆ ಕಚೇರಿಗಳಲ್ಲಿ 100% ಕೋರ್ ಬ್ಯಾಂಕಿಂಗ್!

ಸ್ವಾತಂತ್ರ್ಯದ 75 ವರ್ಷಗಳನ್ನು ಆಚರಿಸಲು, ದೇಶದ 75 ಜಿಲ್ಲೆಗಳಲ್ಲಿ ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕುಗಳಿಂದ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು  ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

Digital Banking Units to Be Set Up in 75 Districts post offices to Have core banking system mnj

ನವದೆಹಲಿ (ಫೆ. 01): ಭಾರತೀಯ ರಿಸರ್ವ್ ಬ್ಯಾಂಕ್ 2022-23 ರಿಂದ  ಡಿಜಿಟಲ್ ರೂಪಾಯಿಯನ್ನು (Digital Rupee) ಪರಿಚಯಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಗಳವಾರ ಸಂಸತ್ತಿನ ಕೇಂದ್ರ ಬಜೆಟನ್‌ನಲ್ಲಿ ಘೋಷಿಸಿದರು, ಜೊತೆಗೆ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಶೆಡ್ಯೂಲ್ ವಾಣಿಜ್ಯ ಬ್ಯಾಂಕ್‌ಗಳು ಸ್ಥಾಪಿಸಲಿವೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವಾಲಯದ ಬಿಡುಗಡೆಯ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ, ಡಿಜಿಟಲ್ ಬ್ಯಾಂಕಿಂಗ್, ಡಿಜಿಟಲ್ ಪಾವತಿಗಳು ಮತ್ತು ಫಿನ್‌ಟೆಕ್ (Fintech) ಆವಿಷ್ಕಾರಗಳು ದೇಶದಲ್ಲಿ ಕ್ಷಿಪ್ರಗತಿಯಲ್ಲಿ ಬೆಳೆದಿವೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಗ್ರಾಹಕ ಸ್ನೇಹಿ ರೀತಿಯಲ್ಲಿ ದೇಶದ ಮೂಲೆ ಮೂಲೆಗಳನ್ನು ತಲುಪಲು ಸರ್ಕಾರವು ನಿರಂತರವಾಗಿ ಅವುಗಳನ್ನು ಪ್ರೋತ್ಸಾಹಿಸುತ್ತಿದೆ ಎಂದು ಸೀತಾರಾಮನ್ ಹೇಳಿದರು. 

ಈ ಬಗ್ಗೆ ಮಾತನಾಡಿದ ವಿತ್ತ ಸಚಿವೆ, ನಮ್ಮ ಸ್ವಾತಂತ್ರ್ಯದ 75 ವರ್ಷಗಳನ್ನು ಆಚರಿಸಲು, ದೇಶದ 75 ಜಿಲ್ಲೆಗಳಲ್ಲಿ ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕುಗಳಿಂದ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು (DBU) ಸ್ಥಾಪಿಸಲು ಉದ್ದೇಶಿಸಲಾಗಿದೆ. ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (CBDC) ಡಿಜಿಟಲ್ ಆರ್ಥಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Budget 2022 LIVE ಇಲ್ಲಿ ವಿಕ್ಷೀಸಿ!

ಆರ್‌ಬಿಐ ಡಿಜಿಟಲ್‌ ಕರೆನ್ಸಿ ಮೂಲಕ ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಮಾದರಿಯಲ್ಲಿ ನಮ್ಮದೇ ಆದೇ ಆದ ಡಿಜಿಟಲ್‌ ಕರೆನ್ಸಿ ಜಾರಿಗೊಳಿಸಲು ಸಾಧ್ಯವಾಗಲಿದೆ. "ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು ಡಿಜಿಟಲ್ ರೂಪಾಯಿಯನ್ನು ನೀಡಲಾಗುತ್ತದೆ. ಇದನ್ನು 2022-23 ರಿಂದ ಆರ್‌ಬಿಐ ಬಿಡುಗಡೆ ಮಾಡುತ್ತದೆ. ಇದು ಆರ್ಥಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ" ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.  

"ಡಿಜಿಟಲ್ ಕರೆನ್ಸಿ ಹೆಚ್ಚು ಪರಿಣಾಮಕಾರಿ ಮತ್ತು ಅಗ್ಗದ ಕರೆನ್ಸಿ ನಿರ್ವಹಣಾ ವ್ಯವಸ್ಥೆಗೆ ಕಾರಣವಾಗುತ್ತದೆ," ಡಿಜಿಟಲ್ ಕರೆನ್ಸಿ ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸುತ್ತದೆ ಎಂದು ಅವರು ಹೇಳಿದರು. ಇದಲ್ಲದೆ, 2022 ರಲ್ಲಿ, 1.5 ಲಕ್ಷ ಅಂಚೆ ಕಚೇರಿಗಳಲ್ಲಿ 100 ಪ್ರತಿಶತದಷ್ಟು ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಬರಲಿದೆ ಎಂದು ಸೀತಾರಾಮನ್ ಘೋಷಿಸಿದರು. ಇದು ಹಣಕಾಸಿನ ಸೇರ್ಪಡೆ ಮತ್ತು ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ಎಟಿಎಂಗಳ ಮೂಲಕ ಖಾತೆಗಳ ನಿರ್ವಹಣೆಯನ್ನು ಸುಲಭಗೊಳಿಸುತ್ತದಲ್ಲದೇ  ಪೋಸ್ಟ್ ಆಫೀಸ್ ಖಾತೆಗಳು ಮತ್ತು ಬ್ಯಾಂಕ್ ಖಾತೆಗಳು ನಡುವೆ ಹಣದ ಆನ್‌ಲೈನ್ ವರ್ಗಾವಣೆಯನ್ನು ಸಹ ಒದಗಿಸುತ್ತದೆ. 

ಇದನ್ನೂ ಓದಿ: Tech Budget 2022: ಶೀಘ್ರದಲ್ಲೇ 5G, ಇ-ಪಾಸ್‌ಪೋರ್ಟ್ ಸೇವೆ: ಭಾರತದ‌ ಪ್ರತಿ ಗ್ರಾಮಕ್ಕೂ ಇಂಟರ್‌ನೆಟ್!

"ಇದು ವಿಶೇಷವಾಗಿ ಗ್ರಾಮೀಣ ಪ್ರದೇಶದ ರೈತರು ಮತ್ತು ಹಿರಿಯ ನಾಗರಿಕರಿಗೆ ಸಹಕಾರಿಯಾಗುತ್ತದೆ, ಪರಸ್ಪರ ಕಾರ್ಯಸಾಧ್ಯತೆ ಮತ್ತು ಆರ್ಥಿಕ ಒಳಗೊಳ್ಳುವಿಕೆಯನ್ನು ಸಕ್ರಿಯಗೊಳಿಸುತ್ತದೆ" ಎಂದು ಅವರು ಹೇಳಿದರು.ಡಿಜಿಟಲ್ ಪಾವತಿಗಳಿಗೆ ಸಂಬಂಧಿಸಿದಂತೆ, ಹಿಂದಿನ ಬಜೆಟ್‌ನಲ್ಲಿ ಘೋಷಿಸಲಾದ ಹಣಕಾಸಿನ ನೆರವು 2022-23 ರಲ್ಲಿ ಕೂಡ ಮುಂದುವರಿಯುತ್ತದೆ ಎಂದು ಹಣಕಾಸು ಸಚಿವರು ಭರವಸೆ ನೀಡಿದರು. "ಇದು ಡಿಜಿಟಲ್ ಪಾವತಿಗಳ ಮತ್ತಷ್ಟು ಅಳವಡಿಕೆಗೆ ಉತ್ತೇಜನ ನೀಡುತ್ತದೆ. ಆರ್ಥಿಕ ಮತ್ತು ಬಳಕೆದಾರ ಸ್ನೇಹಿಯಾಗಿರುವ ಪಾವತಿ ವೇದಿಕೆಗಳ ಬಳಕೆಯನ್ನು ಉತ್ತೇಜಿಸಲು ಸಹ ಗಮನಹರಿಸಲಾಗುವುದು" ಎಂದು ಅವರು ಹೇಳಿದರು.

Latest Videos
Follow Us:
Download App:
  • android
  • ios