Youth Sector Budget 2022: Aatmanirbhar Bharatನಡಿ 16 ಲಕ್ಷ ಉದ್ಯೋಗ, 5 ವರ್ಷದಲ್ಲಿ 60 ಲಕ್ಷ ಉದ್ಯೋಗ ಸೃಷ್ಠಿಯ ಗುರಿ

 ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಯಡಿ ಮುಂದಿನ 5 ವರ್ಷದಲ್ಲಿ   60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 

Union Budget 2022 to focus on creating more jobs and creating opportunities for the youth gow

ನವದೆಹಲಿ(ಫೆ.1): ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಯಡಿ ಮುಂದಿನ 5 ವರ್ಷದಲ್ಲಿ   60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರು ಇಂದು ತಾವು ಮಂಡಿಸಿದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಕೋವಿಡ್ ಸಂಕಷ್ಟದಲ್ಲಿಯೂ ದೇಶದ ಆರ್ಥಿಕ ಪರಿಸ್ಥಿತಿ ಚೇತರಿಸಿಕೊಳ್ಳುತ್ತಿದೆ. ಈಗಾಗಲೇ ಭಾರತದಲ್ಲಿ ನಿರುದ್ಯೋಗ (Unemployment) ಸಮಸ್ಯೆ ಇದೆ. 2014 ರಿಂದಲೂ ಯುವಕರು ಮತ್ತು ಮಹಿಳೆಯರ ಸಬಲೀಕರಣ ಮಾಡುವುದೇ ನಮ್ಮ ಸರ್ಕಾರದ ಮುಂದಿರುವ ಗುರಿಯಾಗಿದೆ. ಬಡತನದಿಂದ ಮೇಲೆತ್ತಲು ಈ ಉದ್ಯೋಗಗಳು ಅನುಕೂಲವಾಗಲಿದೆ ಎಂದಿದ್ದಾರೆ. 

 ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಯಡಿ ಟರ್ಮಿನಲ್ ನಿರ್ಮಾಣ ಮಾಡಲಾಗುವುದು. ಮೇಕ್ ಇನ್ ಇಂಡಿಯಾ ಮೂಲಕ 60 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್  ಘೋಷಿಸಿದ್ದು, ಇದಕ್ಕಾಗಿ ಮುಂದಿನ ಐದು ವರ್ಷಗಳಲ್ಲಿ 30 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಮಾತ್ರವಲ್ಲ  30 ಲಕ್ಷ ಹೆಚ್ಚುವರಿ ಉದ್ಯೋಗಗಳನ್ನು ಒದಗಿಸುವ ಸಾಮರ್ಥ್ಯ ಭಾರತಕ್ಕಿದೆ  ಎಂದಿದ್ದಾರೆ.

ಆತ್ಮ ನಿರ್ಭರ್ ಭಾರತ್  (Aatmanirbhar Bharat) ಯೋಜನೆಗೆ ದೇಶಾದ್ಯಂತ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗಿದೆ.  ಆತ್ಮ ನಿರ್ಭರ್ ಭಾರತ್ ಯೋಜನೆ ಅಡಿಯಲ್ಲಿ 16 ಲಕ್ಷ ಉದ್ಯೋಗಗಳನ್ನು ನೀಡಲಾಗುವುದು ಎಂದಿದ್ದಾರೆ. ಮುಂಬರುವ ಹಣಕಾಸು ವರ್ಷಕ್ಕೆ ಕೇಂದ್ರದ ಬಜೆಟ್ ಪ್ರಾಥಮಿಕವಾಗಿ ಎರಡು ಪ್ರಮುಖ ವಲಯಗಳ ಮೇಲೆ ಕೇಂದ್ರೀಕರಿಸುತ್ತದೆ ಅವೆಂದರೆ ಮಹಿಳೆಯರು, ವಿದ್ಯಾರ್ಥಿಗಳು, ರೈತರು ಆಧುನೀಕರಣಕ್ಕಾಗಿ ದೊಡ್ಡ ಸಾರ್ವಜನಿಕ ಮೂಲಸೌಕರ್ಯ ಮತ್ತು ಅಭಿವೃದ್ಧಿ, ಪಿಎಂ ಗತಿ ಶಕ್ತಿ ಯೋಜನೆಯು (PM Gati Shakti ) ಆರ್ಥಿಕತೆಯನ್ನು ಮುಂದಕ್ಕೆ ಕರೆದೊಯ್ಯತ್ತದೆ ಮತ್ತು ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳಿಗೆ ಕಾರಣವಾಗುತ್ತದೆ" ಎಂದು ಹಣಕಾಸು ಸಚಿವರು ಹೇಳಿದರು.

EDUCATION BUDGET 2022: ಶಿಕ್ಷಣಕ್ಕೆ ಸಿಕ್ಕಿದ್ದು ಮಹತ್ವದ ಕೊಡುಗೆ, ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ

ಉದ್ಯೋಗ ಸೃಷ್ಟಿಗೆ ಪಿಎಲ್‍ಐ (Production Linked Incentive) ಯೋಜನೆಯನ್ನು ಸೇರ್ಪಡೆ ಮಾಡಲಿದ್ದೇವೆ ಎಂದು ಸಚಿವೆ ಹೇಳಿದ್ದಾರೆ. PLI ಯೋಜನೆಯು ಔಷಧಗಳು, ವೈದ್ಯಕೀಯ ಸಾಧನಗಳು, ದೊಡ್ಡ ಪ್ರಮಾಣದ ಎಲೆಕ್ಟ್ರಾನಿಕ್ಸ್ ತಯಾರಿಕೆ, ಆಹಾರ ಉತ್ಪನ್ನಗಳು, ಸೌರ EV ಮಾಡ್ಯೂಲ್‌ಗಳು, ಆಟೋಮೊಬೈಲ್‌ಗಳು/ಆಟೋ ಘಟಕಗಳು, ACC ಬ್ಯಾಟರಿ, ಜವಳಿ ಉತ್ಪನ್ನಗಳು ಮುಂತಾದ ಪ್ರಮುಖ ವಲಯಗಳನ್ನು ಒಳಗೊಂಡಿದೆ.

ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (ಎವಿಜಿಸಿ) ವಲಯವು ಯುವಕರಿಗೆ ಉದ್ಯೋಗವನ್ನು ಒದಗಿಸುವ ಅಪಾರ ಸಾಮರ್ಥ್ಯವನ್ನು ಹೊಂದಿದೆ. ಮಾರುಕಟ್ಟೆ ಮತ್ತು ಜಾಗತಿಕ ಬೇಡಿಕೆಗಾಗಿ ದೇಶೀಯ ಸಾಮರ್ಥ್ಯವನ್ನು ಹೆಚ್ಚಿಸಲು ಎಲ್ಲಾ ಪಾಲುದಾರರೊಂದಿಗೆ AVGC ಪ್ರಚಾರ ಕಾರ್ಯಪಡೆಯನ್ನು ಸ್ಥಾಪಿಸಲಾಗುವುದು. ಯುವಕರು ಮುಂದಿನ ದಿನಗಳಲ್ಲಿ ನಿರುದ್ಯೋಗದಿಂದ ಪರದಾಡುವ ಸ್ಥಿತಿ ಬರುವುದಿಲ್ಲ ಎಂಬುದು ಇದರಿಂದ ತಿಳಿಯಲಿದೆ. ಮೇಕ್​​ ಇನ್​ ಇಂಡಿಯಾಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಿತ್ತ ಸಚಿವೆ ಹೇಳಿದ್ದಾರೆ. ಕೊರೊನಾ ಸಾಂಕ್ರಾಮಿಕದ ಬಳಿಕ ಆರ್ಥಿಕ ಸ್ಥಿತಿ ದುರ್ಬಲಗೊಂಡು ನಿರುದ್ಯೋಗ ಸಮಸ್ಯೆ ಏರಿಕೆಯತ್ತ ಸಾಗಿದೆ. ಈ ನಿಟ್ಟಿನಲ್ಲಿ ವಿದ್ಯಾವಂತ ನಿರುದ್ಯೋಗಿಗಳಿಗೆ ಈ ಬಜೆಟ್ ಅಲ್ಪ ಮಟ್ಟಿನ ಸಹಾಯವಾಗಲಿದೆ ಎಂಬುದು ತಜ್ಞರ ನಿಲುವು.

ಬಜೆಟ್ ಲೈವ್ ಅಪ್ಡೇಟ್ಸ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 4ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. 2022-23ರ ಈ ಬಜೆಟ್‌ನಲ್ಲಿ 4 ಕ್ಷೇತ್ರಗಳ ಆಧಾರದಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಕೇಂದ್ರದ ಈ ಬಜೆಟ್‌ನಲ್ಲಿ 4 ಹಂತಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಘೋಷಿಸಲಾಗಿದೆ. ಪಿಎಂ ಗತಿ ಶಕ್ತಿ ಮಿಷನ್, ಸರ್ವರ ಪಾಲ್ಗೊಳ್ಳುವಿಕೆಯಲ್ಲಿ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರಕ್ಕೆ ಉತ್ತೇಜನ, ಬಂಡವಾಳ ಹಿಂತೆಗತಕ್ಕೆ ಆದ್ಯತೆ ಈ 4 ಹಂತಗಳಲ್ಲಿ ಅಭಿವೃದ್ಧಿ ಯೋಜನೆಗೆ ಈ ಬಜೆಟ್‌ನಲ್ಲಿ ಪ್ರಾಧಾನ್ಯತೆ ನೀಡಲಾಗಿದೆ.

Latest Videos
Follow Us:
Download App:
  • android
  • ios