ಸ್ವಿಸ್ ಬ್ಯಾಂಕ್ ಭಾರತೀಯರ ಹಣದ ವಿರುದ್ಧ ಕ್ರಮದ ಭರವಸೆಸ್ವಿಸ್ ಸರ್ಕಾರದಿಂದ ಮಾಹಿತಿ ಪಡೆಯುತ್ತಿರುವ ಕೇಂದ್ರಹಣಕಾಸು ಸಚಿವ ಪಿಯೂಷ್ ಗೋಯಲ್ ಮಾಹಿತಿತಪ್ಪಿತಸ್ಥರ ವಿರುದ್ದ ಕಠಿಣ ಕ್ರಮದ ಭರವಸೆ

ನವದೆಹಲಿ(ಜೂ.29): 2017ರಲ್ಲಿ ಸ್ವಿಸ್ ಬ್ಯಾಂಕ್‌ನಲ್ಲಿರುವ ಭಾರತೀಯರ ಹಣ ಶೇ.50ರಷ್ಟು(7 ಸಾವಿರ ಕೋಟಿ) ಹೆಚ್ಚಳವಾಗಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಭಾರತ, ಸ್ವಿಡ್ಜರ್‌ಲ್ಯಾಂಡ್ ಬ್ಯಾಂಕ್ ಗಳಲ್ಲಿ ಭಾರತೀಯರು ಹೊಂದಿರುವ ಖಾತೆಗಳ ವಿವರ ಪಡೆಯುತ್ತಿದೆ ಗೋಯಲ್ ಮಾಹಿತಿ ನೀಡಿದ್ದಾರೆ. ಸ್ವಿಡ್ಜರ್ ಲ್ಯಾಂಡ್ ಸರ್ಕಾರ ಜನವರಿ 1, 2018ರಿಂದ ಡಿಸೆಂಬರ್ 31, 2018ರ ವರೆಗೆ ಭಾರತೀಯರ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು 2019ರಲ್ಲಿ ನೀಡಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

Scroll to load tweet…

ಇದೇ ವೇಳೆ ಸ್ವಿಸ್ ಬ್ಯಾಕ್‌ಗಳಲ್ಲಿ ಭಾರತೀಯರ ಠೇವಣಿ ಶೇ.50ರಷ್ಟು ಹೆಚ್ಚಳವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತು ಹಣಕಾಸು ಇಲಾಖೆ ಮಾಹಿತಿ ಕಲೆ ಹಾಕುತ್ತಿದ್ದು, ಅದು ಕಪ್ಪು ಹಣವೇ ಅಥವಾ ಅಕ್ರಮ ವರ್ಗಾವಣೆಯೇ ಎಂಬುದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ವಿದೇಶದಲ್ಲಿರುವ ಕಪ್ಪು ಹಣದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ ನಂತರ ಸ್ವಿಸ್ ಬ್ಯಾಂಕ್‌ಗಳಲ್ಲಿನ ಭಾರತೀಯರ ಠೇವಣಿ ಸತತ ಮೂರು ವರ್ಷಗಳಿಂದ ಇಳಿಕೆಯಾಗಿತ್ತು. ಆದರೆ ಕಳೆದ ವರ್ಷ ದಿಢೀರ್ ಶೇ.50ರಷ್ಟು ಹೆಚ್ಚಾಗಿದೆ.