ಕರ್ನಾಟಕದಲ್ಲಿ ಎಲೆಕ್ಟ್ರಿಕ್‌ ವಾಹನ ಉತ್ಪಾದನೆಗೆ 15,000 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ್‌

ರಾಜ್ಯದಲ್ಲಿ ಪ್ರಸ್ತುತ ಎರಡು ಲಕ್ಷ ವಿದ್ಯುತ್ ಚಾಲಿತ ವಾಹನಗಳು ನೋಂದಣಿಯಾಗಿವೆ. ವಾಹನಗಳ ನೋಂದಣಿಯಲ್ಲಿ ಕರ್ನಾಟಕ ದೇಶಕ್ಕೆ ಮೂರನೇ ಸ್ಥಾನದಲ್ಲಿದೆ. 7 ಒಇಎಂ, ಬಿಡಿಭಾಗಗಳನ್ನು ತಯಾರಿಸುವ 50 ಕಂಪನಿಗಳು, 45 ನವೋದ್ಯಮಗಳು, ಅತ್ಯಧಿಕ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ಈ ಕ್ಷೇತ್ರವು ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ ಹೊಂದಿದೆ. ಮುಂಬರುವ ದಿನಗಳಲ್ಲಿ ಇ.ವಿ.ಗಳು ಮತ್ತಷ್ಟು ಜನಪ್ರಿಯವಾಗಲಿವೆ ಎಂದ ಸಚಿವ ಎಂ.ಬಿ. ಪಾಟೀಲ್‌ 

15000 Crore Investment for Electric Vehicle Production in Karnataka Says MB Patil grg

ಬೆಂಗಳೂರು(ಅ.19):  ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಸಮರ್ಪಕ ನೀತಿ ಜಾರಿಗೊಳಿಸಿದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಈಗಾಗಲೇ 25 ಸಾವಿರ ಕೋಟಿ ರು. ಹೂಡಿಕೆಯನ್ನು ಆಕರ್ಷಿಸಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಇನ್ನೂ 15 ಸಾವಿರ ಕೋಟಿ ರು. ಹೂಡಿಕೆಯಾಗುವ ಸಾಧ್ಯತೆಯಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿರುವ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿ ಆವರಣದಲ್ಲಿ ಡಿಸಿಎಕ್ಸ್‌ ಸಿಸ್ಟಮಸ್ ಲಿಮಿಟೆಡ್‌ ಸಹಯೋಗದಲ್ಲಿ ಸ್ಥಾಪಿಸಿರುವ ಜಾಗತಿಕ ಮಟ್ಟದ ‘ವಿದ್ಯುತ್ ಚಾಲಿತ ವಾಹನಗಳ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರ’ವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಫೋರ್ಬ್ಸ್ ಶ್ರೀಮಂತರ ಪಟ್ಟಿ 2023, ಭಾರತದ ಟಾಪ್‌ 10 ಮಹಿಳಾ ಶ್ರೀಮಂತರಲ್ಲಿ ಬೆಂಗಳೂರಿನ ಏಕೈಕ ಮಹಿಳೆಗೆ ಸ್ಥಾನ!

ಕರ್ನಾಟಕ ಇ.ವಿ. ಕ್ಷೇತ್ರದಲ್ಲಿ ದೇಶಕ್ಕೇ ಪ್ರಥಮ ಸ್ಥಾನದಲ್ಲಿದೆ. ಕರ್ನಾಟಕವು 2017ರಲ್ಲಿ ಇಡೀ ದೇಶದಲ್ಲಿ ಮೊದಲ ಬಾರಿಗೆ ವಿದ್ಯುತ್‌ ಚಾಲಿತ ವಾಹನಗಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮರ್ಪಕ ಜಾರಿಗೊಳಿಸಿತು. 2021ರಲ್ಲಿ ಆ ನೀತಿಯನ್ನು ಜಾಗತಿಕ ಮಟ್ಟದ ಅಗತ್ಯಕ್ಕೆ ಅನುಸಾರ ಪರಿಷ್ಕರಿಸಲಾಯಿತು. ರಾಜ್ಯದ ನೀತಿಯು ಇ.ವಿ. ಬ್ಯಾಟರಿ ಉತ್ಪಾದನೆ, ಬಿಡಿಭಾಗಗಳ ತಯಾರಿಕೆ, ಒಇಎಂ (ಒರಿಜನಲ್ ಎಕ್ವಿಪ್ಮೆಂಟ್ ಮ್ಯಾನುಫ್ಯಾಕ್ಚರರ್ಸ್), ಚಾರ್ಜಿಂಗ್ ಮತ್ತು ಪರೀಕ್ಷಾರ್ಥ ಮೂಲ ಸೌಲಭ್ಯ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೂಡಿಕೆಯಾಗುತ್ತಿದೆ. ಈಗಾಗಲೇ 25 ಸಾವಿರ ಕೋಟಿ ರು. ಹೂಡಿಕೆಯನ್ನು ಈ ಕ್ಷೇತ್ರ ಆಕರ್ಷಿಸಿದ್ದು, ಮುಂದಿನ ದಿನಗಳಲ್ಲಿ ಇನ್ನೂ 15 ಸಾವಿರ ಕೋಟಿ ರು. ಹೂಡಿಕೆಯಾಗುವ ಸಾಧ್ಯವಿದೆ ಎಂದು ಹೇಳಿದರು.

ಅಲ್ಲದೆ, ರಾಜ್ಯದಲ್ಲಿ ಪ್ರಸ್ತುತ ಎರಡು ಲಕ್ಷ ವಿದ್ಯುತ್ ಚಾಲಿತ ವಾಹನಗಳು ನೋಂದಣಿಯಾಗಿವೆ. ವಾಹನಗಳ ನೋಂದಣಿಯಲ್ಲಿ ಕರ್ನಾಟಕ ದೇಶಕ್ಕೆ ಮೂರನೇ ಸ್ಥಾನದಲ್ಲಿದೆ. 7 ಒಇಎಂ, ಬಿಡಿಭಾಗಗಳನ್ನು ತಯಾರಿಸುವ 50 ಕಂಪನಿಗಳು, 45 ನವೋದ್ಯಮಗಳು, ಅತ್ಯಧಿಕ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ಈ ಕ್ಷೇತ್ರವು ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ ಹೊಂದಿದೆ. ಮುಂಬರುವ ದಿನಗಳಲ್ಲಿ ಇ.ವಿ.ಗಳು ಮತ್ತಷ್ಟು ಜನಪ್ರಿಯವಾಗಲಿವೆ ಎಂದರು.

ಶಿವರಾತ್ರಿ ಕ್ಷೇತ್ರದ ವೀರಸಿಂಹಾಸನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಸಚಿವ ಎಂ.ಬಿ.ಪಾಟೀಲ್‌ ಅವರು, ಉದ್ಘಾಟನೆಗೊಂಡ ಕೇಂದ್ರದಲ್ಲಿರುವ 3ಡಿ ಎಕ್ಸ್ಪೀರಿಯನ್ಸ್ ಲ್ಯಾಬ್, ಸರ್ವೀಸ್ ಲ್ಯಾಬ್, ಬಿಡಿಭಾಗಗಳ ಲ್ಯಾಬ್ ಸೇರಿದಂತೆ ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ, ಅಲ್ಲಿನ ಸಾಧನ-ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವೀಕ್ಷಿಸಿ, ವಿವರಣೆ ಪಡೆದುಕೊಂಡರು.

ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ದಿನಕ್ಕೆ ಕೇವಲ7ರೂ. ಹೂಡಿಕೆ ಮಾಡಿದ್ರೆ ತಿಂಗಳಿಗೆ 5000ರೂ. ಪಿಂಚಣಿ ಖಚಿತ

ಸುಗಮ, ತ್ವರಿತ, ಸುರಕ್ಷಿತ ಮತ್ತು ಮಾಲಿನ್ಯರಹಿತ ಸಂಚಾರವನ್ನು ಸಾಧ್ಯವಾಗಿಸಲಿವೆ. ಮುಂದಿನ ಒಂದು ದಶಕದಲ್ಲಿ ಸಾಂಪ್ರದಾಯಿಕ ಇಂಧನದ ವಾಹನಗಳು ಕಡಿಮೆಯಾಗಲಿವೆ. ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಈ ಕೇಂದ್ರವು ಗುಣಮಟ್ಟದಿಂದ ಕೂಡಿದ್ದು, ಇದು ತರಬೇತಿ, ಸಂಶೋಧನೆ, ಕೌಶ್ಯಲಾಭಿವೃದ್ಧಿ, ಸಹಭಾಗಿತ್ವ ಮತ್ತು ಪರಿಪೋಷಣೆಗಳಿಗೆ ಉತ್ತಮ ವೇದಿಕೆಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಎಸ್.ಟಿ. ಸೋಮಶೇಖರ್, ಡಿಸಿಎಕ್ಸ್‌ ಸಿಸ್ಟಮ್ಸ್‌ ಲಿಮಿಟೆಡ್‌ ಅಧ್ಯಕ್ಷ ಡಾ.ಎಚ್‌.ಎಸ್‌. ರಾಘವೇಂದ್ರ ರಾವ್‌, ವ್ಯವಸ್ಥಾಪಕ ನಿರ್ದೇಶಕ ಎನ್‌.ಜಿ. ದೀಪಕ್‌ ಹಾಗೂ ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿ ನಿರ್ದೇಶಕ ಬಿ.ಸುರೇಶ್‌ ಮತ್ತಿತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios