Big News: ಬ್ಯಾಂಕ್‌ ಉದ್ಯೋಗಿಗಳಿಗೆ ಬಂಪರ್‌ ನ್ಯೂಸ್‌, ಶೇ.17ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಗೆ, ತಿಂಗಳ ಎಲ್ಲಾ ಶನಿವಾರ ರಜೆ?

indian bank association ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಶುಕ್ರವಾರ ವಾರ್ಷಿಕ ಶೇ.17ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿವೆ.

17 Percent Annual Wage Hike Announced for Bank Employees 5 Day Work Week on the list san

ನವದೆಹಲಿ (ಮಾ.9): ಕೇಂದ್ರ ಸರಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳವನ್ನು ಮೋದಿ ಸರಕಾರ ಘೋಷಿಸಿದ ಒಂದು ದಿನದ ನಂತರ, ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಶುಕ್ರವಾರ ಶೇ.17ರಷ್ಟು ವಾರ್ಷಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿವೆ. ಈ ಕ್ರಮದಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ವಾರ್ಷಿಕವಾಗಿ ಸುಮಾರು 8,284 ಕೋಟಿ ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡಬೇಕಿರುತ್ತದೆ. 8 ಲಕ್ಷ ಬ್ಯಾಂಕ್ ಉದ್ಯೋಗಿಗಳು ವೇತನ ಹೆಚ್ಚಳದಿಂದ ಪ್ರಯೋಜನ ಪಡೆಯಲಿದ್ದಾರೆ, ಇದು ನವೆಂಬರ್ 2022 ರಿಂದ ಅನ್ಚಯವಾಗುವಂತೆ ಜಾರಿಗೆ ಬರಲಿದೆ. ಇನ್ನು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟವು ತಿಂಗಳ ಎಲ್ಲಾ ಶನಿವಾರ ರಜೆಯಾಗಿ ಘೋಷಿಸಲು ಒಪ್ಪಿಗೆ ನೀಡಿದ್ದು, ಆದರೆ, ಇದಕ್ಕೆ ಸರ್ಕಾರದ ಒಪ್ಪಿಗೆ ಹಾಗೂ ಅಧಿಸೂಚನೆಯ ಅಗತ್ಯವಿದೆ ಎಂದು ತಿಳಿಸಿದೆ. ಪರಿಷ್ಕೃತ ಕೆಲಸದ ಸಮಯವು ಸರ್ಕಾರದ ಅಧಿಸೂಚನೆಯ ನಂತರ ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ. "8088 ಅಂಕಗಳಿಗೆ ಅನುಗುಣವಾದ ತುಟ್ಟಿಭತ್ಯೆ ಮತ್ತು ಹೆಚ್ಚುವರಿ ಹೊರೆಯನ್ನು ವಿಲೀನಗೊಳಿಸಿದ ನಂತರ ಹೊಸ ವೇತನ ಶ್ರೇಣಿಗಳನ್ನು ರಚಿಸಲಾಗಿದೆ" ಎಂದು ತಿಳಿಸಲಾಗಿದೆ.

ಹೊಸ ವೇತನ ಇತ್ಯರ್ಥದ ಅಡಿಯಲ್ಲಿ, ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ವೈದ್ಯಕೀಯ ಪ್ರಮಾಣಪತ್ರವನ್ನು ನೀಡದೆ ತಿಂಗಳಿಗೆ ಒಂದು ದಿನ ಅನಾರೋಗ್ಯ ರಜೆ ತೆಗೆದುಕೊಳ್ಳಲು ಅನುಮತಿಸಲಾಗಿದೆ. ಸೇವೆಯಲ್ಲಿದ್ದಾಗ ನೌಕರನ ನಿವೃತ್ತಿಯ ಸಮಯದಲ್ಲಿ/ ಮರಣದ ನಂತರ ಸಂಚಿತ ಸವಲತ್ತು ರಜೆಯನ್ನು 255 ದಿನಗಳವರೆಗೆ ಎನ್‌ಕ್ಯಾಶ್ ಮಾಡಬಹುದು ಎಂದು ಅದು ಹೇಳಿದೆ.

"IBA ಮತ್ತು ಯುಎಫ್‌ಬಿಯು  ಎಐಬಿಓಎ ಎಐಬಿಎಎಸ್‌ಎಂ ಮತ್ತು ಬಿಕೆಎಸ್‌ಎಂ ಬ್ಯಾಂಕ್ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ವೇತನ ಪರಿಷ್ಕರಣೆ ಕುರಿತ 12ನೇ ದ್ವಿಪಕ್ಷೀಯ ಇತ್ಯರ್ಥಕ್ಕೆ 9ನೇ ಜಂಟಿ ಟಿಪ್ಪಣಿ ಮತ್ತು 12ನೇ ಬ್ಯಾಂಕಿಂಗ್ ಇಂಡಸ್ಟ್ರಿಗೆ ಸಹಿ ಹಾಕಿರುವುದರಿಂದ ಇದು ಬ್ಯಾಂಕಿಂಗ್ ಉದ್ಯಮಕ್ಕೆ ಮಹತ್ವದ ಮೈಲಿಗಲ್ಲಾಗಿದೆ.  2022ರ ನವೆಂಬರ್‌ 1 ರಿಂದ ಅನ್ವತವಾಗುವಂತೆ ಜಾರಿಗೆ ಬರಲಿದೆ ಎಂದು IBA ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಮೆಹ್ತಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Breaking News: ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಿಸಿದ ಮೋದಿ ಸರ್ಕಾರ!

ಒಪ್ಪಂದದ ಐತಿಹಾಸಿಕ ಮಹತ್ವವನ್ನು ಒತ್ತಿಹೇಳಿದ  ಭಾರತೀಯ ಬ್ಯಾಂಕ್‌ಗಳ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಮೆಹ್ತಾ ಅವರು ಬ್ಯಾಂಕಿಂಗ್ ಕ್ಷೇತ್ರದ ಭವಿಷ್ಯವನ್ನು ರೂಪಿಸುವಲ್ಲಿ ಅದರ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದರು. ನಿವೃತ್ತಿ ಹೊಂದಿದ ಉದ್ಯೋಗಿಗಳು ಸಹ ಪ್ರಯೋಜನ ಪಡೆಯಲು ಸಿದ್ಧರಾಗಿದ್ದಾರೆ, ಒಪ್ಪಂದದ ಪ್ರಕಾರ ಎಸ್‌ಬಿಐ ಸೇರಿದಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಸಂಬಂಧಿಸಿದ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಅಥವಾ ಕುಟುಂಬ ಪಿಂಚಣಿ ಜೊತೆಗೆ ಮಾಸಿಕ ಎಕ್ಸ್-ಗ್ರೇಷಿಯಾ ಮೊತ್ತವನ್ನು ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ನೌಕರರಿಗೆ ಬಂಪರ್‌ ನ್ಯೂಸ್‌, ಮಾರ್ಚ್‌ನಲ್ಲಿ ಶೇ. 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಸಾಧ್ಯತೆ!

Latest Videos
Follow Us:
Download App:
  • android
  • ios