Asianet Suvarna News Asianet Suvarna News

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಶೀಘ್ರದಲ್ಲೇ ಕೈ ಸೇರಲಿದೆ ಬಾಕಿ ತುಟ್ಟಿ ಭತ್ಯೆ

*18 ತಿಂಗಳಿಂದ ಬಾಕಿಯಿರುವ ತುಟ್ಟಿ ಭತ್ಯೆ ಹಾಗೂ ತುಟ್ಟಿ ಪರಿಹಾರ 
*ಶೀಘ್ರದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ
*ಮೂರು ಕಂತುಗಳಲ್ಲಿ ನೌಕರರಿಗೆ ನೀಡಲು ಚಿಂತನೆ
 

7th Pay Commission Big update on 18 months DA arrears to be given in 3 installments
Author
First Published Nov 4, 2022, 5:08 PM IST

ನವದೆಹಲಿ (ನ.4): ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನುಇತ್ತೀಚೆಗಷ್ಟೇ ಶೇ.4ರಷ್ಟು ಹೆಚ್ಚಳ ಮಾಡಲಾಗಿತ್ತು. ಆದರೆ,  18 ತಿಂಗಳಿಂದ ಬಾಕಿಯಿರುವ ತುಟ್ಟಿ ಭತ್ಯೆ (ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ನೀಡಿರಲಿಲ್ಲ, ಇದು ನೌಕರರಿಗೆ ಬೇಸರ ಮೂಡಿಸಿತ್ತು. ಆದರೆ, ಇದೀಗ ಬಾಕಿ ಉಳಿದಿರುವ ತುಟ್ಟಿ ಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು ಮೂರು ಕಂತುಗಳಲ್ಲಿ ನೌಕರರಿಗೆ ನೀಡಲು ಸರ್ಕಾರ ಉದ್ದೇಶಿಸಿರುವ ಬಗ್ಗೆ ವರದಿಯಾಗಿದೆ. 2020ರ ಜನವರಿಯಿಂದ 2021ರ ಜೂನ್ ವರೆಗಿನ ಬಾಕಿಯಿರುವ ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರ ನೀಡುವ ವಿಷಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗದೆ ಬಾಕಿ ಉಳಿದಿತ್ತು. ಈಗ ಈ ವಿಚಾರ ಶೀಘ್ರದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ ಮೂರನೇ ದರ್ಜೆ ನೌಕರರಿಗೆ ತುಟ್ಟಿ ಭತ್ಯೆ ಬಾಕಿ 11,880ರೂ.ನಿಂದ 37,554ರೂ. ತನಕ ಅಂದಾಜಿಸಲಾಗಿದೆ. ಇನ್ನು 13  ಹಾಗೂ 14ನೇ ದರ್ಜೆ ನೌಕರರ ತುಟ್ಟಿ ಭತ್ಯೆ 1,44,200 ರೂ.ನಿಂದ  2,18,200ರೂ. ತನಕವಿದೆ ಎಂದು ಅಂದಾಜಿಸಲಾಗಿದೆ. ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆದ ಬಳಿಕ ಈ ಮೊತ್ತದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. 

ಕೇಂದ್ರ ಸರ್ಕಾರಿ ನೌಕರರು ಹಾಗೂ  ಪಿಂಚಣಿದಾರರ ತುಟ್ಟಿಭತ್ಯೆ (DA) ಹಾಗೂ ತುಟ್ಟಿ ಪರಿಹಾರವನ್ನು (DR) ಶೇ.4ರಷ್ಟು ಏರಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಸೆಪ್ಟೆಂಬರ್ 28ರಂದು ಒಪ್ಪಿಗೆ ನೀಡಿತ್ತು. ಪರಿಣಾಮ ಕೇಂದ್ರ ಸರ್ಕಾರಿ ನೌಕರರ ಡಿಎ ಮೂಲವೇತನದ ಶೇ.38ಕ್ಕೆ ಏರಿಕೆಯಾಗಿತ್ತು. ಸರ್ಕಾರದ ಈ ನಿರ್ಧಾರದಿಂದ ಸುಮಾರು 47.68 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಿದೆ.  ನಾಗರಿಕ ಸೇವೆ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳಿಗೆ ಕೂಡ ಇದರ ಪ್ರಯೋಜನ ದೊರಕಿದೆ. ಪರಿಷ್ಕೃತ ತುಟ್ಟಿ ಭತ್ಯೆ ಜುಲೈ 1ರಿಂದಲೇ ಅನ್ವಯವಾಗಿದೆ. 

ಜಗತ್ತಿನ ಬಲಿಷ್ಠ ಆರ್ಥಿಕತೆಗಳಿಗಿಂತ ಭಾರತದಲ್ಲಿ ಹಣದುಬ್ಬರ ಕಡಿಮೆ; ಹಾಗಾದ್ರೆ ಯಾವ ರಾಷ್ಟ್ರಗಳಲ್ಲಿ ಹೆಚ್ಚಿದೆ?

ಕೇಂದ್ರ ಸರ್ಕಾರ ತನ್ನ ನೌಕರರ ತುಟ್ಟಿ ಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು (ಡಿಆರ್) ಪ್ರತಿ ವರ್ಷ ಜನವರಿ 1 ಮತ್ತು ಜುಲೈ 1 ರಂದು ಪರಿಷ್ಕರಿಸುತ್ತದೆ. ಆದರೆ, ಈ ನಿರ್ಧಾರವನ್ನು ಮಾತ್ರ ಸರ್ಕಾರ ಮಾರ್ಚ್ ಮತ್ತು ಸೆಪ್ಟೆಂಬರ್ ನಲ್ಲಿ ಪ್ರಕಟಿಸುತ್ತದೆ. 

ಡಿಎ ಪರಿಷ್ಕರಣೆಗೆ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (ಎಐಸಿಪಿಐ) ಮಾನದಂಡವಾಗಿದ್ದು,ಅದರ ಆಧಾರದಲ್ಲೇ ಪರಿಷ್ಕರಿಸಲಾಗುತ್ತದೆ. ಈಗ ಎಐಸಿಪಿಐ ಆರ್ ಬಿಐಯ ಸಹನ ಮಟ್ಟಕ್ಕಿಂತ ಮೇಲಿದೆ. ಸದ್ಯ ಚಿಲ್ಲರೆ ಹಣದುಬ್ಬರ ಆರ್ ಬಿಐ ಸಹನ ಮಟ್ಟವಾದ ಶೇ.2-6ಕ್ಕಿಂತ ಹೆಚ್ಚಿದೆ. ಹೀಗಾಗಿ ತುಟ್ಟಿ ಭತ್ಯೆಯನ್ನು ಶೇ. 4ರಷ್ಟು ಹೆಚ್ಚಿಸಲಾಗಿದೆ. ಈ ವರ್ಷದ ಮಾರ್ಚ್ ನಲ್ಲಿ ಕೇಂದ್ರ ಸಚಿವ ಸಂಪುಟ ಡಿಎಯನ್ನು ಶೇ.3ಕ್ಕೆ ಏರಿಕೆ ಮಾಡಲು ಒಪ್ಪಿಗೆ ನೀಡಿತ್ತು. ಪರಿಣಾಮ ಡಿಎ ಮೂಲವೇತನದ ಶೇ.34ಕ್ಕೆ ಹೆಚ್ಚಳವಾಗಿತ್ತು.ತುಟ್ಟಿ ಭತ್ಯೆ ಅಥವಾ ಡಿಎ ಅನ್ನು ಸರ್ಕಾರಿ ನೌಕರರಿಗೆ ನೀಡಿದ್ರೆ, ತುಟ್ಟಿ ಭತ್ಯೆಯನ್ನು (DR) ಪಿಂಚಣಿದಾರರಿಗೆ ನೀಡಲಾಗುತ್ತದೆ.

ಅಂಚೆ ಇಲಾಖೆ ಈ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ 5 ವರ್ಷಕ್ಕೆ 14ಲಕ್ಷ ರೂ. ರಿಟರ್ನ್ಸ್!

ಕೋವಿಡ್ -19 ಕಾರಣದಿಂದ ಸೃಷ್ಟಿಯಾದ ಹೆಚ್ಚುವರಿ ವೆಚ್ಚಗಳನ್ನು ಭರಿಸಲು ಕೇಂದ್ರ ಸರ್ಕಾರ ಡಿಎ (DA) ಹಾಗೂ ಡಿಆರ್ (DR) ದರ ಹೆಚ್ಚಳದ ಮೂರು ಕಂತುಗಳನ್ನು ತಡೆ ಹಿಡಿದಿತ್ತು. 2020ರ ಜನವರಿ 1, 2020ರ ಜುಲೈ 1 ಹಾಗೂ 2021ರ ಜನವರಿ 1ರ ಡಿಎ ಹಾಗೂ ಡಿಆರ್ ಕಂತುಗಳನ್ನು ಸರ್ಕಾರ ತಡೆ ಹಿಡಿದಿತ್ತು. 2021ರ ಜುಲೈನಲ್ಲಿ ಡಿಎ ಹಾಗೂ ಡಿಆರ್ ಹೆಚ್ಚಳದ ಮೇಲಿನ ತಡೆಯನ್ನು ಹಿಂಪಡೆದ ಸರ್ಕಾರ, ಆ ಬಳಿಕ ಒಟ್ಟು ಮೂರು ಬಾರಿ ಡಿಎ ಹಾಗೂ ಡಿಆರ್ ಭತ್ಯೆಗಳಲ್ಲಿ ಹೆಚ್ಚಳ ಮಾಡಿತ್ತು. 
 

Follow Us:
Download App:
  • android
  • ios