ಕೊರೋನಾ ವೈರಸ್‌ ಕಾರಣದಿಂದಾಗಿ ತಡೆಹಿಡಿಯಲಾಗಿದ್ದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆ| ಕೇಂದ್ರ ನೌಕರರ ಬಾಕಿ ತುಟ್ಟಿಭತ್ಯೆ ಜುಲೈನಿಂದ ಬಿಡುಗಡೆ

ನವದೆಹಲಿ(ಮಾ.10): ಕೊರೋನಾ ವೈರಸ್‌ ಕಾರಣದಿಂದಾಗಿ ತಡೆಹಿಡಿಯಲಾಗಿದ್ದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಮೂರು ಕಂತಿನ ತುಟ್ಟಿಭತ್ಯೆ (ಡಿಎ) ಹಾಗೂ ತುಟ್ಟಿ ಭತ್ಯೆ ಪರಿಹಾರ (ಡಿಆರ್‌) ಮೊತ್ತವನ್ನು ಕ್ರಮವಾಗಿ ಜುಲೈನಿಂದ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಮಂಗಳವಾರ ತಿಳಿಸಿದೆ.

ಈ ಕುರಿತು ರಾಜ್ಯಸಭೆಯಲ್ಲಿ ಲಿಖಿತ ಹೇಳಿಕೆ ನೀಡಿರುವ ಹಣಕಾಸು ಖಾತೆ ರಾಜ್ಯಸಚಿವ ಅನುರಾಗ್‌ ಠಾಕೂರ್‌, ಕೊರೋನಾದಿಂದ ಉಂಟಾದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ 2020 ಜ.1, 2020 ಜು.7 ಮತ್ತು 2021 ಜ.1ರಿಂದ ಮೂರು ಕಂತಿನಲ್ಲಿ ಬಿಡುಗಡೆ ಮಾಡಬೇಕಿದ್ದ ಡಿಎ ಮತ್ತು ಡಿಆರ್‌ ಅನ್ನು ತಡೆಹಿಡಿಯಲಾಗಿತ್ತು. ಇದರಿಂದ ಕೇಂದ್ರ ಸರ್ಕಾರಕ್ಕೆ 37,430 ಕೋಟಿ ರು. ಉಳಿತಾಯವಾಗಿದೆ.

ಬಾಕಿ ನೀಡಬೇಕಿರುವ ಕಂತಿನ ಹಣವನ್ನು ಜುಲೈನಿಂದ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.