Asianet Suvarna News Asianet Suvarna News

ದೀಪಾವಳಿ ಗಿಫ್ಟ್ : 8 ಬಿಜೆಪಿ ರಾಜ್ಯಗಳಲ್ಲಿ ತೈಲ ದರ ಇಳಿಕೆ

  • ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಇಳಿಕೆ
  • ರಾಜ್ಯಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮೌಲ್ಯ ವರ್ಧಿತ ತೆರಿಗೆಗಳನ್ನು ಇಳಿಕೆ
8 BJP-Ruled States Announce Additional Cuts In Fuel Rates snr
Author
Bengaluru, First Published Nov 4, 2021, 8:40 AM IST
  • Facebook
  • Twitter
  • Whatsapp

ನವದೆಹಲಿ (ನ.04): ಕೇಂದ್ರ ಸರ್ಕಾರ  ಪೆಟ್ರೋಲ್‌ (Petrol) ಮತ್ತು ಡೀಸೆಲ್‌ (Diesel) ಮೇಲಿನ ಅಬಕಾರಿ ಸುಂಕ (tax) ಇಳಿಸಿದ ಬೆನ್ನಲ್ಲೇ, 8 ಬಿಜೆಪಿ (BJP) ಆಡಳಿತಾರೂಢ ರಾಜ್ಯಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮೌಲ್ಯ ವರ್ಧಿತ ತೆರಿಗೆಗಳನ್ನು ಇಳಿಕೆ ಮಾಡಲಾಗಿದೆ.

ಈ ಪ್ರಕಾರ ತ್ರಿಪುರ (Tripura), ಮಣಿಪುರ (Manipura), ಅಸ್ಸಾಂ (Assam), ಗೋವಾ (Goa), ಉತ್ತರಾಖಂಡ, ಕರ್ನಾಟಕ (Karnataka) ರಾಜ್ಯಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು 7 ರು.ನಷ್ಟುಕಡಿತ ಮಾಡುವುದಾಗಿ ಘೋಷಣೆ ಮಾಡಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ (Jai ram thakur), ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆ ಇಳಿಕ ಕುರಿತ ಅಧಿಸೂಚನೆಯನ್ನು ಶೀಘ್ರವೇ ಹೊರಡಿಸಲಾಗುತ್ತದೆ ಎಂದಿದ್ದಾರೆ. ಮತ್ತೊಂದೆಡೆ ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಬಿಜೆಪಿ (BJP) ಸಂಸದ ಸುಶಿಲ್‌ ಕುಮಾರ್‌ ಮೋದಿ (Susheel Kumar Modi), ಬಿಹಾರದಲ್ಲೂ (Bihar) ಪೆಟ್ರೋಲ್‌ ದರ 1.50 ರು. ಮತ್ತು ಡೀಸೆಲ್‌ ದರವನ್ನು 1.90 ರು.ನಷ್ಟುಇಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಆದರೆ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌ (congress), ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರದ ತೆರಿಗೆ ಪರಾವಲಂಬನೆ ಕುರಿತಾದ ಸತ್ಯದ ಕನ್ನಡಿಯನ್ನು ಹಿಡಿದಿದ್ದಾರೆ. ಹಾಗಾಗಿ ದರ ಇಳಿಸಿದೆ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ (Tweet) ಮಾಡಿದ ಕಾಂಗ್ರೆಸ್‌ ಪ್ರಧಾನ ವಕ್ತಾರ ರಣದೀಪ್‌ ಸುರ್ಜೇವಾಲ, ‘ಮೋದಿ ಸರ್ಕಾರದ (Modi Govt) ತೆರಿಗೆ ಪರಾವಲಂಬನೆ ಕುರಿತ ಸತ್ಯದ ಕನ್ನಡಿಯನ್ನು ಹಿಡಿದ ದೇಶದ ಜನತೆಗೆ ಧನ್ಯವಾದಗಳು. ಆದರೆ 2014ರಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರೆಲ್‌ ಕಚ್ಚಾತೈಲ ಬೆಲೆ 105.71 ಡಾಲರ್‌ ಇದ್ದಾಗ ದೇಶದಲ್ಲಿ ಪೆಟ್ರೋಲ್‌ ಬೆಲೆ 71.41 ರು. ಹಾಗೂ ಡೀಸೆಲ್‌ ದರ 55.49 ರು ಇತ್ತು. ಇದೀಗ ಕಚ್ಚಾತೈಲ ಬೆಲೆ 82 ಡಾಲರ್‌ಗೆ ಲಭ್ಯವಾಗುತ್ತಿದೆ’ ಎಂದು ಹೇಳಿದ್ದಾರೆ.

ಪೆಟ್ರೋಲ್ ಬೆಲೆ ಕೇಂದ್ರದಿಂದ ಇಳಿಕೆ

 ದೇಶದ ಜನತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ದೀಪಾವಳಿಯ ಸಿಹಿಸುದ್ದಿ ನೀಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿವೆ. ಕೇಂದ್ರ ಸರ್ಕಾರವು ಪೆಟ್ರೋಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 5 ರು. ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು 10 ರು. ಇಳಿಕೆ ಮಾಡಿದೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ದರದಲ್ಲಿ ತಲಾ 7 ರು. ದರ ಕಡಿತ ಘೋಷಿಸಿದೆ. ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್‌ ದರ 12 ರು. ಹಾಗೂ ಡೀಸೆಲ್‌ ದರ 17 ರು. ಕಡಿತವಾಗಲಿದೆ.

ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್‌ ದರ ಇನ್ನು 102 ರು. ಹಾಗೂ ಡೀಸೆಲ್‌ ದರ 87 ರು.ಗೆ ಇಳಿಯುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ದರ ಕಡಿತ ಗುರುವಾರದಿಂದಲೇ ಜಾರಿಗೆ ಬಂದಿದ್ದು, ರಾಜ್ಯ ಸರ್ಕಾರದ ಘೋಷಣೆ ಶುಕ್ರವಾರ ಜಾರಿಗೆ ಬರುವ ಸಾಧ್ಯತೆ ಇದೆ. ಇಷ್ಟೊಂದು ದೊಡ್ಡ ಮೊತ್ತದ ಕಡಿತ ಇದೇ ಮೊದಲು. ಹೀಗಾಗಿ ರಾಜ್ಯದ ಜನರಿಗೆ ದೊಡ್ಡ ನಿರಾಳತೆ ಉಂಟಾಗಿದೆ.

ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬುಧವಾರ ಅಬಕಾರಿ ಸುಂಕ ಕಡಿತ ಮಾಡಿದ್ದ ಕೇಂದ್ರವು, ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಗಳನ್ನು ಕಡಿತಗೊಳಿಸುವಂತೆ ರಾಜ್ಯಗಳಿಗೂ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಡಿತ ಘೋಷಣೆ ಮಾಡಿದ್ದಾರೆ.

ದರ ಕಡಿತ ಘೋಷಣೆಗೂ ಮುನ್ನ ಬೆಂಗಳೂರಿನಲ್ಲಿ ಪೆಟ್ರೋಲ್‌ಗೆ 113.93 ರು. ಹಾಗೂ ಡೀಸೆಲ್‌ಗೆ 104.50 ರು. ದರ ಇತ್ತು.

Follow Us:
Download App:
  • android
  • ios