ಬೀದರ್‌ನಲ್ಲಿ ಕೈಗಾರಿಕಾ ಕ್ಲಸ್ಟರ್‌ ಸ್ಥಾಪಿಸಲು ಶೀಘ್ರ ಕ್ರಮ: ಸಚಿವ ದರ್ಶನಾಪೂರ

ಬೀದರ್‌ ಜಿಲ್ಲೆಯಲ್ಲಿ ನಮ್ಮ ಇತಿಹಾಸ, ಸಂಸ್ಕೃತಿ ತಿಳಿಸುವ ಐತಿಹಾಸಿಕ ಕುರುಹುಗಳಿವೆ. ಜಿಲ್ಲೆಯ ಜೊತೆಗೆ ಕಲ್ಯಾಣ ಕರ್ನಾಟಕ ಭಾಗಗಳ ಜಿಲ್ಲೆಗಳ ಪ್ರಗತಿಗಾಗಿ ನಾವು ಕೈಗಾರಿಕೆಗಳಿಗೆ ಹೆಚ್ಚು ಒತ್ತು ನೀಡುವುದರ ಜೊತೆಗೆ ಪ್ರವಾಸೋದ್ಯಮಕ್ಕೂ ಪ್ರೋತ್ಸಾಹ ನೀಡಬೇಕು: ಸಣ್ಣ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ 

Action to Set up Industrial Cluster in Bidar says Minister Sharanabasappa Darshanapur grg

ಬೀದರ್‌(ಅ.01):  ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಇರುವ ತೊಡಕುಗಳ ನಿವಾರಣೆಗೆ ಕ್ರಮ ಕೈಗೊಂಡು ಅವುಗಳನ್ನು ಸರಳೀಕರಿಸಲಾಗಿದೆ. ರಾಜ್ಯದ ಇತರೆ ಜಿಲ್ಲೆಯಲ್ಲಿ ಸ್ಥಾಪಿಸಲಾದ ಕೈಗಾರಿಕಾ ಕ್ಲಸ್ಟರ್‌ಗಳಂತೆ ಬೀದರ್‌ ಜಿಲ್ಲೆಯಲ್ಲೂ ಕೈಗಾರಿಕಾ ಕ್ಲಸ್ಟರ್‌ ಸ್ಥಾಪಿಸುವತ್ತ ಕ್ರಮ ವಹಿಸಲಾಗುವುದು ಎಂದು ಸಣ್ಣ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ಶನಿವಾರ ನಗರದಲ್ಲಿ ಸಿಡ್ಬಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಸಂಯುಕ್ತಾಶ್ರಯದಲ್ಲಿ ನಡೆದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್‌ಗೆ ಹೆದರಿ ಜೆಡಿಎಸ್‌ ಜೊತೆ ಬಿಜೆಪಿ ಹೊಂದಾಣಿಕೆ: ಸಚಿವ ಶರಣಬಸಪ್ಪ ದರ್ಶನಾಪೂರ್‌

ದೇಶದಲ್ಲಿ ದೊಡ್ಡ ಕೈಗಾರಿಕೆಗಳಿಗೆ ಒತ್ತು ನೀಡಿದಂತೆ ಸಣ್ಣ ಕೈಗಾರಿಕೆಗಳಿ ಪ್ರೋತ್ಸಾಹ ನೀಡಬೇಕು. ಸಣ್ಣ ಕೈಗಾರಿಕೆಗಳು ಉದ್ಯೋಗ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಆದರೆ ಪ್ರಸ್ತುತ ದಿನಗಳಲ್ಲಿ ಸಣ್ಣ ಕೈಗಾರಿಕೆಗಳು ಹೆಚ್ಚು ತೊಂದರೆಗಳನ್ನು ಅನುಭವಿಸುತ್ತಿವೆ. ಸಣ್ಣ ಕೈಗಾರಿಕೆಗಳು ಬೆಳೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇವುಗಳಿಗೆ ಪ್ರೋತ್ಸಾಹ ನೀಡುವದರ ಜೊತೆಗೆ ಹೊಸ ಉದ್ದಿಮೆಯನ್ನು ಸೃಷ್ಟಿಸಲು ಮುಂದೆ ಬರುವ ಯುವ ಪೀಳಿಗೆಗಳಿಗೆ ಸಹಾಯ-ಸಹಕಾರ ನೀಡಬೇಕು ಎಂದರು.

ಜಿಲ್ಲೆಯಲ್ಲಿ ನಮ್ಮ ಇತಿಹಾಸ, ಸಂಸ್ಕೃತಿ ತಿಳಿಸುವ ಐತಿಹಾಸಿಕ ಕುರುಹುಗಳಿವೆ. ಜಿಲ್ಲೆಯ ಜೊತೆಗೆ ಕಲ್ಯಾಣ ಕರ್ನಾಟಕ ಭಾಗಗಳ ಜಿಲ್ಲೆಗಳ ಪ್ರಗತಿಗಾಗಿ ನಾವು ಕೈಗಾರಿಕೆಗಳಿಗೆ ಹೆಚ್ಚು ಒತ್ತು ನೀಡುವುದರ ಜೊತೆಗೆ ಪ್ರವಾಸೋದ್ಯಮಕ್ಕೂ ಪ್ರೋತ್ಸಾಹ ನೀಡಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವ ಭಗವಂತ ಖೂಬಾ ಮಾತನಾಡಿ, ದೇಶದ ಜಿಡಿಪಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ಮಹತ್ವದಾಗಿದ್ದು. ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಕೈಗಾರಿಕೆಗಳ ವಾತಾವರಣ ನಿರ್ಮಾಣವಾಗುವದರ ಜೊತೆಗೆ ಮೂಲಭೂತ ಸೌಕರ್ಯ ಸರಳವಾಗಿ ಆಯಾ ಇಲಾಖೆಯಿಂದ ಸಣ್ಣ ಕೈಗಾರಿಕೋದ್ಯಮಿಗಳಿಗೆ ಸಿಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇನ್ನು ಹೆಚ್ಚಿನ ಸಹಕಾರ ನೀಡಬೇಕು ಎಂದರು.

ಈ ಸಂಧರ್ಭದಲ್ಲಿ ಬೀದರ್‌ ನಗರಸಭೆ ಅಧ್ಯಕ್ಷ ಮೊಹ್ಮದ್‌ ಗೌಸೋದ್ದಿನ್‌, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಇಒ ಶಿಲ್ಪಾ ಎಂ, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸುರೇಖಾ, ಕೈಗಾರಿಕೆ ಮತ್ತು ವಾಣಿಜ್ಯ (ಎಂಎಸ್‌ಪಿಸಿ &ಪಿಪಿ) ಇಲಾಖೆಯ ಎಚ್‌ಎಂ ಶ್ರೀನಿವಾಸ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ತು ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕ ಮಹೇಶ.ಜಿ., ಕಾಸಿಯಾ ಅಧ್ಯಕ್ಷ ಸಿ.ಎ ಶಶಿಧರ ಶೆಟ್ಟಿ, ಸಿಡ್ಬಿ ಮೈಸೂರು ಶಾಖೆಯ ವ್ಯವಸ್ಥಾಪಕ ವಿಶ್ವನಾಥ ನಾಗರಾಳ, ಬಿ.ಜಿ. ಶೆಟಕಾರ, ಶಿವರಾಜ ಹಾಲಶೆಟ್ಟಿ, ಪಿ. ವಿಜಯಕುಮಾರ ಸೇರಿದಂತೆ ಜಿಲ್ಲೆಯ ಸಣ್ಣ ಕೈಗಾರಿಕೊದ್ಯಮಿಗಳು, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸ್ಥಳೀಯರಿಗೆ ಉದ್ಯೋಗ ನೀಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ 

ಜಿಲ್ಲೆಯಲ್ಲಿ ಸ್ಥಾಪಿಸುವ ಕಂಪನಿಯವರು ಸ್ಥಳೀಯ ಯುವಕರಿಗೆ ಉದ್ಯೋಗ ನೀಡಬೇಕು. ಪ್ರಸ್ತುತ ಸ್ಥಾಪಿಸಿರುವ ಕಂಪನಿಯವರು ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ ಹೀಗೆಯಾದರೆ ಈ ಭಾಗ ಎಷ್ಟೇ ಕಂಪನಿಗಳು ಸ್ಥಾಪನೆಯಾದರೂ ಹಿಂದೆ ಉಳಿಯಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ಹೇಳಿದರು. ಆದರಿಂದ ಇಲ್ಲಿ ಸ್ಥಾಪಿಸಲಾದ ಕಂಪನಿಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ನಿಯಮ ಜಾರಿಯಾಗಬೇಕು ಎಂದು ಹೇಳಿದರು.

ದೇಶದ ಆದಿವಾಸಿಗಳಿಗೆ ಮೋದಿ ಸರ್ಕಾರ ಗೌರವ: ಕೇಂದ್ರ ಸಚಿವ ಭಗವಂತ ಖೂಬಾ

ಕರ್ನಾಟಕ ಭಾಗದ ಸಾಕಷ್ಟು ಜನರು ಉದ್ಯೋಗವನ್ನು ಅರಸಿ ದೊಡ್ಡ ದೊಡ್ಡ ನಗರಗಳಿಗೆ ಗುಳೆ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಲು ಕಲ್ಯಾಣ ಕರ್ನಾಟ ಭಾಗದ ಜಿಲ್ಲೆಗಳಲ್ಲಿ ಹೊಸ ಕಂಪನಿಗಳು ಆರಂಭವಾಗಬೇಕು. ಇದರಿಂದ ಈ ಭಾಗದ ಜನರು ಉತ್ತಮ ಜೀವನ ರೂಪಿಸಿಕೊಳ್ಳುವದರ ಜೊತೆಗೆ ಆರ್ಥಿಕ ಪ್ರಗತಿ ಸಾಧಿಸಬಹುದು ಎಂದು ಸಣ್ಣ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ತಿಳಿಸಿದ್ದಾರೆ. 

ಜಿಲ್ಲೆಗೆ ಹೊಸ ಕೈಗಾರಿಕೆಗಳು ಬಂದರೆ ಈ ಜಿಲ್ಲೆಯ ಆರ್ಥಿಕ ಪ್ರಗತಿಯಾಗುತ್ತದೆ. ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಬ್ಯಾಂಕ್‌ನವರು ಹಾಗೂ ಸರ್ಕಾರದ ಸಂಬಂಧಿತ ಇಲಾಖೆಯವರು ಸಹಕಾರ ನೀಡಬೇಕು. ಜಿಲ್ಲೆಯು ಮೊದಲಿನಂತಿಲ್ಲ ಇಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿದ್ದು ಕಂಪನಿ ಸ್ಥಾಪಿಸಲು ಮುಂದೆ ಬರುವ ಕಂಪನಿಗಳಿಗೆ ಸಂಪೂರ್ಣ ಸಹಕಾರ ನೀಡಲಾಗುದು ಎಂದು ಪೌರಾಡಳಿತ ಹಾಗೂ ಹಜ್‌ ಖಾತೆ ಸಚಿವ ರಹೀಮ್‌ ಖಾನ್‌ ಹೇಳಿದ್ದಾರೆ.  

Latest Videos
Follow Us:
Download App:
  • android
  • ios