ನವದೆಹಲಿ(ಏ.17): ತೀವ್ರ ಆರ್ಥಿಕ ಸಂಕಷ್ಟದಿಂದ ನಲುಗಿರುವ ಖಾಸಗಿ ವಿಮಾನಯಾನ ಸಂಸ್ಥೆ ಜೆಟ್ ಏರ್‌ವೇಸ್, ಇಂದು ತನ್ನ ಎಲ್ಲಾ ವಿಮಾನಗಳ ಹಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಿದೆ. 

ಜೆಟ್ ಏರ್‌ವೇಸ್ 8 ಸಾವಿರ ಕೋಟಿ ರೂ. ಸಾಲದ ಹೊರೆಯಲ್ಲಿದ್ದು, ತಾತ್ಕಾಲಿಕವಾಗಿ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಧಿಕ ಮೊತ್ತದ ಸಾಲಕ್ಕೆ ಕಂಪನಿ ಬೇಡಿಕೆ ಇಟ್ಟಿದ್ದು, ಇದನ್ನು ಬ್ಯಾಕ್‌ಗಳು ತಿರಸ್ಕರಿಸಿರುವ ಕಾರಣ ವಿಮಾನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸಂಸ್ಥೆ ಮುಂದಾಗಿದೆ.

ಕಂಪನಿಯ ಷೇರುಗಳನ್ನು ಖರೀದಿಸಲು ಯಾರೂ ಮುಂದೆ ಬಂದಿಲ್ಲ ಎನ್ನಲಾಗಿದ್ದು, ಖುದ್ದು ಸಂಸ್ಥೆಯ ಮಾಜಿ ಮುಖ್ಯಸ್ಥ ನರೇಶ್‌ ಗೋಯಲ್‌ ಕೂಡ ಷೇರು ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿದಿದ್ದರು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.