ಗಾಂಧಿನಗರ(ಮಾ.06): ಎರಿಕ್ಸನ್ ಕಂಪನಿಗೆ ನಾಲ್ಕು ವಾರಗಳಲ್ಲಿ 550 ಕೋಟಿ ರೂ. ಸಾಲ ನೀಡಬೇಕಾದ ಅನಿವಾರ್ಯತೆಗೆ ರಿಲಯನ್ಸ್ ಕಮ್ಯುನಿಕೇಶನ್ಸ್ ಮುಖ್ಯಸ್ಥ ಅನಿಲ್ ಅಂಬಾನಿ ಸಿಲುಕಿದ್ದಾರೆ.

ಈ ಮಧ್ಯೆ ಗುಜರಾತ್ ನ ರಾಜಕೋಟ್ ಬಳಿ ಇರುವ ಹಿರಾಸರ್ ವಿಮಾನ ನಿಲ್ದಾಣದ ಕಾಮಗಾರಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಪಾಲಿಗೆ ದೊರೆತಿದೆ.

ಒಟ್ಟು 648 ಕೋಟಿ ರೂ. ವೆಚ್ಛದ ಹಿರಾಸರ್ ವಿಮಾನ ನಿಲ್ದಾಣದ ಕಾಮಗಾರಿಯನ್ನು ಅಂಬಾನಿ ಒಡೆತನದ ಕಂಪನಿಗೆ ನೀಡಲಾಗಿದೆ. ಈ ಕುರಿತು ಕಂಪನಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದೆ.

ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಸೇರಿದಂತೆ 9 ಇತರ ಕಂಪನಿಗಳು ಬಿಡ್ಡಿಂಗ್ ನಲ್ಲಿ ಪಾಲ್ಗೊಂಡಿದ್ದು, ಕಡೆಗೆ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಜೊತೆ ಅಂತಿಮ ಒಪ್ಪಂದ ಮಾಡಿಕೊಳ್ಳಲಾಗಿದೆ.

ರಾಜಕೋಟ್ ವಿಮಾನ ನಿಲ್ದಾಣದಿಂದ ಸುಮಾರು 36 ಕಿ.ಮೀ ದೂರದಲ್ಲಿರುವ ಈ ವಿಮಾನ ನಿಲ್ದಾಣಕ್ಕೆ ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿ ಸಂಪರ್ಕವಿದೆ.  

30 ತಿಂಗಳಲ್ಲಿ ಹಿರಾಸರ್ ವಿಮಾನ ನಿಲ್ದಾಣವನ್ನು ಪೂರ್ಣಗೊಳಿಸುವ ಜವಾಬ್ದಾರಿ ಇದೀಗ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಮೇಲಿದೆ.