Asianet Suvarna News Asianet Suvarna News

ಕರ್ನಾಟಕ ನಾಮಕರಣಕ್ಕೆ 50 ತುಂಬಿದ ಹಿನ್ನೆಲೆ: ವರ್ಷಾದ್ಯಂತ ಕಾರ್ಯಕ್ರಮ ಘೋಷಿಸಿದ ಸಿದ್ದು

ಕರ್ನಾಟಕ ನಾಮಕರಣಕ್ಕೆ 50 ವರ್ಷ ತುಂಬುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ’ ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮ ಆಯೋಜನೆ, ರಾಜ್ಯದ ಪ್ರಮುಖ ಚಿಂತಕ ಡಾ.ಎಂ.ಎಂ.ಕಲಬುರ್ಗಿ ಹೆಸರಲ್ಲಿ ಟ್ರಸ್ಟ್‌ ಸ್ಥಾಪನೆ, ಪೂರ್ಣಚಂದ್ರ ತೇಜಸ್ವಿಯವರ ಪರಿಸರ ಚಿಂತನೆಗಳನ್ನು ಯುವ ಜನಾಂಗಕ್ಕೆ ದಾಟಿಸಲು 2 ಕೋಟಿ ಅನುದಾನ.

Background of 50 years for Karnataka nomenclature CM Siddaramaiah announced year round program gvd
Author
First Published Jul 8, 2023, 6:43 AM IST

ಬೆಂಗಳೂರು (ಜು.08): ಕರ್ನಾಟಕ ನಾಮಕರಣಕ್ಕೆ 50 ವರ್ಷ ತುಂಬುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ’ ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮ ಆಯೋಜನೆ, ರಾಜ್ಯದ ಪ್ರಮುಖ ಚಿಂತಕ ಡಾ.ಎಂ.ಎಂ.ಕಲಬುರ್ಗಿ ಹೆಸರಲ್ಲಿ ಟ್ರಸ್ಟ್‌ ಸ್ಥಾಪನೆ, ಪೂರ್ಣಚಂದ್ರ ತೇಜಸ್ವಿಯವರ ಪರಿಸರ ಚಿಂತನೆಗಳನ್ನು ಯುವ ಜನಾಂಗಕ್ಕೆ ದಾಟಿಸಲು 2 ಕೋಟಿ ಅನುದಾನ.

ಇವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಘೋಷಿಸಿದ ಕಾರ್ಯಕ್ರಮಗಳು. ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು ಐವತ್ತು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಹೆಸರಿನ ಕಾರ್ಯಕ್ರಮ ಘೋಷಿಸಲಾಗಿದೆ. ಇದಲ್ಲದೆ, ಡಾ.ಎಂ.ಎಂ. ಕಲಬುರ್ಗಿ ಅವರ ಹೆಸರಲ್ಲಿ ಟ್ರಸ್ವ್‌ ಸ್ಥಾಪಿಸಲಾಗುವುದು. ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಹೆಸರಿನಲ್ಲಿ ಸ್ಥಾಪಿಸಿರುವ ಪ್ರತಿಷ್ಠಾನದ ಮೂಲಕ ಅವರ ಸಾಹಿತ್ಯ ಹಾಗೂ ಪರಿಸರ ಸಂರಕ್ಷಣೆಯ ಚಿಂತನೆಯನ್ನು ಯುವಜನಾಂಗಕ್ಕೆ ಪರಿಚಯಿಸುವ ಚಟುವಟಿಕೆಗೆ . 2ಕೋಟಿ ಅನುದಾನ ಪ್ರಕಟಿಸಲಾಗಿದೆ.

45 ದಿನದಲ್ಲೇ ಪಕ್ಷದ ಭರವಸೆ ಈಡೇರಿಕೆ, ಎದೆ ಎತ್ತಿ ಉತ್ತರಿಸಿ: ಸಿಎಂ ಸಿದ್ದರಾಮಯ್ಯ

ಜೊತೆಗೆ ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ . 2 ಕೋಟಿ ಅನುದಾನ, ಇದೇ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಜಿಲ್ಲೆಯಲ್ಲಿ ಜಾನಪದ ಲೋಕ ಸ್ಥಾಪಿಸಲಾಗುವುದು. ನಶಿಸುತ್ತಿರುವ ಬಂಜಾರ ಸಮುದಾಯದ ಸಾಂಸ್ಕೃತಿಕ ಮತ್ತು ಜಾನಪದ ನೃತ್ಯ, ಸಂಸ್ಕೃತಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇನ್ನು, ಕರ್ನಾಟಕದ ಬುಡಕಟ್ಟು ಸಮುದಾಯದ ಜನರ ಕಲಾಪ್ರತಿಭೆ, ಸಂಸ್ಕೃತಿ, ಜಾನಪದ ವೈದ್ಯ ಪದ್ಧತಿ, ಕಲೆಗಳ ಪ್ರದರ್ಶನ, ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆಒದಗಿಸಲು ಉತ್ತೇಜನ ನೀಡಲು ಬುಡಕಟ್ಟು ಜನಾಂಗದ ಕಲಾವಿದರ ಸಮಾವೇಶ ಆಯೋಜಿಸುವುದಾಗಿ ತಿಳಿಸಿದ್ದಾರೆ.

ಅಭಿಮಾನಿಗಳ ಜತೆ ರಿಷಬ್‌ ಶೆಟ್ಟಿ ಹುಟ್ಟುಹಬ್ಬ: ಹೊಸಕೆರೆಹಳ್ಳಿಯ ನಂದಿ ಮೈದಾನದಲ್ಲಿ ಬೃಹತ್‌ ಕಾರ‍್ಯಕ್ರಮ

ಬಜೆಟ್‌ನಲ್ಲಿ ಕನ್ನಡ ಸಂಸ್ಕೃತಿ, ಸಾಹಿತ್ಯ ಕಲೆಗೆ ಸಂಬಂಧಿಸಿ ಚಿಂತಕರು, ತಜ್ಞರಿಂದ ಮಾಹಿತಿಯೇ ಪಡೆದಿಲ್ಲ ಎನ್ನಿಸುತ್ತಿದೆ. ಹಾಗೆ ನೋಡಿದರೆ, ಬುಡಕಟ್ಟು ಸಮುದಾಯದ ಕಲೆ ಸಂಸ್ಕೃತಿ, ವರ್ಷವಿಡೀ ಕಾರ್ಯಕ್ರಮ ಆಯೋಜಿಸಿರುವುದು ಕಲಾವಿದರಿಗೆ ಕಾರ್ಯಕ್ರಮ ಪ್ರದರ್ಶನಕ್ಕೆ ಅವಕಾಶ ನೀಡಲಿದೆ. ಇವೆಲ್ಲ ಒಳ್ಳೆಯ ಕಾರ್ಯಕ್ರಮಗಳೇ. ಆದರೆ, ಸಂಸ್ಕೃತಿ ಪ್ರೋತ್ಸಾಹಿಸುವ ಅಂಶಗಳಿಲ್ಲ. ಇಲಾಖೆ ಈಚೆಗಿನ ವರ್ಷಗಳಲ್ಲಿ ತೀರಾ ಸೊರಗಿದೆ. ಪ್ರಮುಖವಾಗಿ ಅಕಾಡೆಮಿಗಳಿಗೆ ಜೀವ ತುಂಬುವ ಕೆಲಸ ಆಗಬೇಕಿತ್ತು. ಅದು ಆಗಿಲ್ಲ.
- ಶ್ರೀನಿವಾಸ ಜಿ. ಕಪ್ಪಣ್ಣ, ರಂಗಕರ್ಮಿ

Follow Us:
Download App:
  • android
  • ios