Bank Holidays: ಫೆಬ್ರವರಿ ತಿಂಗಳಲ್ಲಿ 11 ದಿನ ಬ್ಯಾಂಕ್ ಕ್ಲೋಸ್; RBI ರಜಾಪಟ್ಟಿ ಹೀಗಿದೆ..

ಫೆಬ್ರವರಿ ತಿಂಗಳ ಬ್ಯಾಂಕ್ ರಜಾಪಟ್ಟಿಯನ್ನು ಆರ್ ಬಿಐ ಬಿಡುಗಡೆ ಮಾಡಿದೆ. ಅದರ ಅನ್ವಯ ಫೆಬ್ರವರಿ ತಿಂಗಳಲ್ಲಿ ಒಟ್ಟು 11 ದಿನಗಳ ಕಾಲ ಬ್ಯಾಂಕುಗಳು ಕಾರ್ಯನಿರ್ವಹಿಸೋದಿಲ್ಲ. 
 

Bank Holidays In Feb 2024 Banks Will Remain Closed For 11 Days Next Month Check Bank Holidays List Here anu

ನವದೆಹಲಿ (ಜ.26): Business Desk:ಪ್ರತಿ ಹೊಸ ತಿಂಗಳು ಪ್ರಾರಂಭವಾಗುವ ಮುನ್ನ ಆರ್ ಬಿಐ ಬ್ಯಾಂಕ್ ಗಳ ರಜಾಪಟ್ಟಿ ಬಿಡುಗಡೆ ಮಾಡುತ್ತದೆ. ಅದರಂತೆ ಜನವರಿ ತಿಂಗಳು ಮುಕ್ತಾಯವಾಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಫೆಬ್ರವರಿ ತಿಂಗಳ ರಜಾಪಟ್ಟಿಯನ್ನು ಆರ್ ಬಿಐ ಬಿಡುಗಡೆ ಮಾಡಿದೆ. ಇದರ ಅನ್ವಯ ಫೆಬ್ರವರಿ ತಿಂಗಳಲ್ಲಿ ಬ್ಯಾಂಕುಗಳಿಗೆ ಒಟ್ಟು 11 ದಿನಗಳ ಕಾಲ ರಜೆಯಿದೆ. ಅಂದರೆ ಈ ತಿಂಗಳಲ್ಲಿ ಬ್ಯಾಂಕುಗಳು ಒಟ್ಟು 18 ದಿನಗಳ ಕಾಲ ಮಾತ್ರ ಕಾರ್ಯನಿರ್ವಹಿಸಲಿವೆ. ಹಬ್ಬಗಳು, ಜನ್ಮದಿನೋತ್ಸವಗಳು ಸೇರಿದಂತೆ ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ ಈ ರಜೆಗಳಲ್ಲಿ ಶನಿವಾರ ಹಾಗೂ ಭಾನುವಾರ ಸೇರಿದಂತೆ ವಾರದ ರಜೆಗಳು ಕೂಡ ಸೇರಿವೆ. ಹೀಗಾಗಿ ಫೆಬ್ರವರಿ ತಿಂಗಳಲ್ಲಿ ಬ್ಯಾಂಕಿಗೆ ಭೇಟಿ ನೀಡಿ ಮಾಡುವ ಯಾವುದಾದ್ರೂ ಕೆಲಸಗಳಿದ್ರೆ ರಜೆಪಟ್ಟಿಯನ್ನು ನೋಡಿಕೊಂಡು ಹೋಗೋದು ಉತ್ತಮ. ಇಲ್ಲವಾದ್ರೆ ನಿಮ್ಮ ಸಮಯ ಹಾಗೂ ಶ್ರಮ ಎರಡೂ ವ್ಯರ್ಥವಾಗುತ್ತದೆ. ಆದರೆ, ಎಟಿಎಂ, ಆನ್ ಲೈನ್ ಬ್ಯಾಂಕಿಂಗ್ ವ್ಯವಸ್ಥೆಗಳು ರಜಾದಿನಗಳಂದು ಕೂಡ ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಇದರಲ್ಲಿ ಯಾವುದೇ ವ್ಯತ್ಯಯವಾಗೋದಿಲ್ಲ. 

ಸಾಮಾನ್ಯವಾಗಿ ಎಲ್ಲ ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ದೇಶಾದ್ಯಂತ ಎಲ್ಲ ಬ್ಯಾಂಕುಗಳಿಗೆ ರಜೆಯಿರುತ್ತದೆ. ಇನ್ನು ಆಯಾ ಪ್ರಾದೇಶಿಕ ಆಚರಣೆಗಳು ಹಾಗೂ ಹಬ್ಬಗಳಿಗೆ ಅನುಗುಣವಾಗಿ ರಜೆಗಳನ್ನು ನೀಡಲಾಗುತ್ತದೆ. ಆದರೆ, ಸಾರ್ವಜನಿಕ ಹಾಗೂ ಗೆಜೆಟೆಡ್ ರಜೆಗಳು ಮಾತ್ರ ದೇಶವ್ಯಾಪ್ತಿ ಎಲ್ಲ ಬ್ಯಾಂಕುಗಳಿಗೂ ಅನ್ವಯಿಸುತ್ತವೆ. ರಜಾ ದಿನಗಳಂದು ಆನ್ ಲೈನ್ ವಹಿವಾಟುಗಳಿಗೆ ಯಾವುದೇ ಸಮಸ್ಯೆಯಿಲ್ಲ. ಆದರೆ, ಬ್ಯಾಂಕಿಗೆ ಭೇಟಿ ನೀಡಿ ಮಾಡಲೇಬೇಕಾದ ಕೆಲಸವಿದ್ರೆ ರಜಾಪಟ್ಟಿ ನೋಡಿಕೊಂಡು ಹೋಗೋದು ಉತ್ತಮ. ಗೃಹಸಾಲ, ವಾಹನಸಾಲ ಅಥವಾ ಇನ್ಯಾವುದೇ ಅಗತ್ಯ ಕೆಲಸಗಳಿಗೆ ಫೆಬ್ರವರಿ ತಿಂಗಳಲ್ಲಿ ಬ್ಯಾಂಕಿಗೆ ಭೇಟಿ ನೀಡಲೇಬೇಕಾದ ಅಗತ್ಯವಿದ್ರೆ, ರಜೆಪಟ್ಟಿ ನೋಡಿಕೊಂಡು ಹೋಗಲು ಮರೆಯಬೇಡಿ. 

ನಿಮ್ಮ ಡೆಬಿಟ್ ಕಾರ್ಡ್ ಕಳೆದು ಹೋಗಿದ್ಯಾ? ತಪ್ಪದೇ ತಕ್ಷಣ ಈ 7 ಕ್ರಮ ಕೈಗೊಳ್ಳಿ

ಬ್ಯಾಂಕ್ (Bank) ರಜೆಗಳನ್ನು (Holidays) ಆರ್ ಬಿಐ (RBI) ಮೂರು ವರ್ಗಗಳನ್ನಾಗಿ ವಿಂಗಡಿಸಿದೆ.1.ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ರಜಾದಿನ, 2. ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಮತ್ತು ರಿಯಲ್-ಟೈಮ್ ಗ್ರಾಸ್ ಸೆಟಲ್ಮೆಂಟ್ ರಜೆಗಳು ಹಾಗೂ 3.ಅಕೌಂಟ್ಸ್​ ಕ್ಲೋಸಿಂಗ್ ರಜೆಗಳು (Accounts Closing Holidays). ಆರ್ ಬಿಐ (RBI) ರಜಾಪಟ್ಟಿಯಲ್ಲಿರೋ ರಜೆಗಳು ಸಾರ್ವಜನಿಕ ವಲಯ (Public sector), ಖಾಸಗಿ ವಲಯ (Private sector), ವಿದೇಶಿ ಬ್ಯಾಂಕುಗಳು (Foreign banks),ಕೋ-ಆಪರೇಟಿವ್ ಬ್ಯಾಂಕುಗಳು (Co-operative banks) ಹಾಗೂ ಪ್ರಾದೇಶಿಕ ಬ್ಯಾಂಕುಗಳಿಗೆ (Regional banks) ಅನ್ವಯಿಸಲಿವೆ.

ಒಂದೇ ದಿನ 1.1 ಲಕ್ಷ ಕೋಟಿ ರೂಪಾಯಿ ಮೌಲ್ಯ ಕಳೆದುಕೊಂಡ ಎಚ್‌ಡಿಎಫ್‌ಸಿ ಬ್ಯಾಂಕ್‌!

ಫೆಬ್ರವರಿ ತಿಂಗಳ ಆರ್ ಬಿಐ ರಜಾಪಟ್ಟಿ ಹೀಗಿದೆ:
ಫೆಬ್ರವರಿ 4: ಭಾನುವಾರ
ಫೆಬ್ರವರಿ 10: ಎರಡನೇ ಶನಿವಾರ, ಲೋಸರ್ (ಅಸ್ಸಾಂನಲ್ಲಿ ಆಚರಿಸುವ ಹಬ್ಬವಾಗಿದ್ದು, ಗ್ಯಾಂಗ್ಟಕ್ ನಲ್ಲಿ ಬ್ಯಾಂಕಿಗೆ ರಜೆ.)
ಫೆಬ್ರವರಿ 11: ಭಾನುವಾರ
ಫೆಬ್ರವರಿ 14: ತ್ರಿಪುರಾ, ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಬಸಂತ್ ಪಂಚಮಿ ಅಥವಾ ಸರಸ್ವತಿ ಪೂಜೆ ಹಿನ್ನೆಲೆಯಲ್ಲಿ ಬ್ಯಾಂಕುಗಳಿಗೆ ರಜೆ.
ಫೆಬ್ರವರಿ 15: ಲೂಯಿ ನಗಾಯಿ ನಿ ಹಿನ್ನೆಲೆಯಲ್ಲಿ ಅಸ್ಸಾಂನಲ್ಲಿ ಬ್ಯಾಂಕುಗಳಿಗೆ ರಜೆ.
ಫೆಬ್ರವರಿ 18: ಭಾನುವಾರ
ಫೆಬ್ರವರಿ 19: ಛತ್ರಪತಿ ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಬ್ಯಾಂಕ್ ರಜೆ.
ಫೆಬ್ರವರಿ 20: ಮಿಜೋರಾಂ ಹಾಗೂ ಅರುಣಾಚಲ ಪ್ರದೇಶದಲ್ಲಿ ರಾಜ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಜೆ
ಫೆಬ್ರವರಿ 24: ಎರಡನೇ ಶನಿವಾರ
ಫೆಬ್ರವರಿ 25: ಭಾನುವಾರ
ಫೆಬ್ರವರಿ 26: ನಯೋಕಮ್ ಹಿನ್ನೆಲೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ರಜೆ


 

Latest Videos
Follow Us:
Download App:
  • android
  • ios