ಬ್ಯಾಂಕ್‌ ಆಫ್‌ ಮಹಾರಾಷ್ಟ್ರದಿಂದ ಕರ್ನಾಟಕದಲ್ಲಿ ಇನ್ನಷ್ಟು ಶಾಖೆ ಶೀಘ್ರ

ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ದೇಶದ ಪ್ರಧಾನ ಸಾರ್ವಜನಿಕ ವಲಯದ ಬ್ಯಾಂಕ್‌ ಆಗಿದೆ. ಕರ್ನಾಟಕದಲ್ಲಿ ಅತ್ಯುತ್ತಮ ಸೇವೆಗಳನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ. ರಾಜ್ಯದಲ್ಲಿ ಒಟ್ಟು 74 ಶಾಖೆಗಳನ್ನು ಹೊಂದಿದೆ. ರಾಜ್ಯಾದ್ಯಂತ ಶಾಖೆಯ ಜಾಲವನ್ನು ಬಲಪಡಿಸಲು ಬ್ಯಾಂಕ್‌ ಹೆಚ್ಚಿನ ಶಾಖೆಗಳನ್ನು ತೆರೆಯಲು ಯೋಜಿಸುತ್ತಿದೆ ಎಂದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ಕಾರ್ಯನಿರ್ವಾಹಕ ನಿರ್ದೇಶಕ ಎ.ಬಿ.ವಿಜಯಕುಮಾರ್‌

Bank of Maharashtra to open more Branches in Karnataka soon grg

ಬೆಂಗಳೂರು(ಆ.25):  ದೇಶದ ಆರ್ಥಿಕ ಬೆಳವಣಿಗೆಗೆ ಕರ್ನಾಟಕದ ಕೊಡುಗೆ ಮಹತ್ವದ್ದಾಗಿದ್ದು, ರಾಜ್ಯದಲ್ಲಿ ಬ್ಯಾಂಕ್‌ ಸೇವೆ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ಕಾರ್ಯನಿರ್ವಾಹಕ ನಿರ್ದೇಶಕ ಎ.ಬಿ.ವಿಜಯಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ ರಾಜ್ಯದ ವಿವಿಧ ಇಲಾಖೆಯ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬ್ಯಾಂಕ್‌ ಆಫ್‌ ಮಹಾರಾಷ್ಟ್ರ ದೇಶದ ಪ್ರಧಾನ ಸಾರ್ವಜನಿಕ ವಲಯದ ಬ್ಯಾಂಕ್‌ ಆಗಿದೆ. ಕರ್ನಾಟಕದಲ್ಲಿ ಅತ್ಯುತ್ತಮ ಸೇವೆಗಳನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ. ರಾಜ್ಯದಲ್ಲಿ ಒಟ್ಟು 74 ಶಾಖೆಗಳನ್ನು ಹೊಂದಿದೆ. ರಾಜ್ಯಾದ್ಯಂತ ಶಾಖೆಯ ಜಾಲವನ್ನು ಬಲಪಡಿಸಲು ಬ್ಯಾಂಕ್‌ ಹೆಚ್ಚಿನ ಶಾಖೆಗಳನ್ನು ತೆರೆಯಲು ಯೋಜಿಸುತ್ತಿದೆ ಎಂದರು.

615 ಕೋಟಿಯ CHANDRAYAAN 3 ಸಕ್ಸಸ್‌ ಎಫೆಕ್ಟ್‌; ಷೇರು ಮಾರುಕಟ್ಟೆಗೆ ಹರಿದುಬಂತು ಬರೋಬ್ಬರಿ 31 ಸಾವಿರ ಕೋಟಿ ಬಂಡವಾಳ

ಬ್ಯಾಂಕ್‌ ಸರ್ಕಾರಕ್ಕೆ ಸೇವೆ ನೀಡಲು ವಿವಿಧ ಡಿಜಿಟಲೀಕರಣ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿದಂತೆ ನಮ್ಮ ಸಾಂಸ್ಥಿಕ ಗ್ರಾಹಕರಿಗಾಗಿ ನಮ್ಮ ಸೇವೆಗಳನ್ನು ನೀಡುತ್ತೇವೆ ಎಂದು ಹೇಳಿದರು.
ಇದೇ ವೇಳೆ ಬ್ಯಾಂಕ್‌ನ ವಲಯದ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು. ಬ್ಯಾಂಕ್‌ನ ಬೆಂಗಳೂರು ವಲಯ ವ್ಯವಸ್ಥಾಪಕ ವೈ. ಶ್ರೀನಿವಾಸ್‌ ಸೇರಿದಂತೆ ಮೊದಲಾದವರಿದ್ದರು.

Latest Videos
Follow Us:
Download App:
  • android
  • ios