ಪ್ರತಿ ಹೊಸ ತಿಂಗಳು ಪ್ರಾರಂಭವಾಗುವ ಮುನ್ನ ಆರ್ ಬಿಐ ಬ್ಯಾಂಕ್ ರಜಾಪಟ್ಟಿ ಬಿಡುಗಡೆ ಮಾಡುತ್ತದೆ. ಅದರಂತೆ ಜೂನ್ ತಿಂಗಳ ರಜಾಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 12 ದಿನಗಳ ಕಾಲ ಬ್ಯಾಂಕ್ ಗೆ ರಜೆಯಿದೆ.

ನವದೆಹಲಿ (ಮೇ 25): ಪ್ರತಿ ಹೊಸ ತಿಂಗಳು ಪ್ರಾರಂಭವಾಗುವ ಮುನ್ನ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ರಜಾಪಟ್ಟಿ ಬಿಡುಗಡೆ ಮಾಡುತ್ತದೆ. ಅದರಂತೆ ಜೂನ್ ತಿಂಗಳ ರಜಾಪಟ್ಟಿ ಕೂಡ ಬಿಡುಗಡೆ ಮಾಡಿದೆ. ಮೇ ತಿಂಗಳು ಮುಕ್ತಾಯಗೊಳ್ಳಲು ಇನ್ನು ಕೆಲವೇ ಸಮಯ ಬಾಕಿ ಉಳಿದಿದೆ. ಹೀಗಾಗಿ ಜೂನ್ ತಿಂಗಳಲ್ಲಿ ಬ್ಯಾಂಕಿಗೆ ಭೇಟಿ ನೀಡಿ ಮಾಡಬೇಕಾದ ಕೆಲಸಗಳೇನಾದರೂ ಇದ್ದರೆ ಮೊದಲೇ ರಜಾಪಟ್ಟಿ ನೋಡಿ ತೀರ್ಮಾನ ಕೈಗೊಳ್ಳುವುದು ಉತ್ತಮ. ಜೂನ್ ತಿಂಗಳಲ್ಲಿ ವಾರದ ರಜೆಗಳು ಸೇರಿದಂತೆ ಬ್ಯಾಂಕ್ ಗಳು ಒಟ್ಟು 12 ದಿನಗಳ ಕಾಲ ಕಾರ್ಯನಿರ್ವಹಿಸೋದಿಲ್ಲ. ರಜಾ ದಿನಗಳಂದೂ ಆನ್ ಲೈನ್ ವಹಿವಾಟುಗಳಿಗೆ ಯಾವುದೇ ಸಮಸ್ಯೆಯಿಲ್ಲ. ಇನ್ನು ಆರ್ ಬಿಐ ರಜಾಪಟ್ಟಿಯಲ್ಲಿರುವ ಎಲ್ಲ ರಜೆಗಳು ಎಲ್ಲ ರಾಜ್ಯಗಳಿಗೂ ಅನ್ವಯಿಸೋದಿಲ್ಲ.ಆಯಾ ಪ್ರಾದೇಶಿಕ ಆಚರಣೆಗಳು ಹಾಗೂ ಹಬ್ಬಗಳಿಗೆ ಅನುಗುಣವಾಗಿ ರಜೆಗಳನ್ನು ನೀಡಲಾಗುತ್ತದೆ.ಆದರೆ, ಸಾರ್ವಜನಿಕ ಹಾಗೂ ಗೆಜೆಟೆಡ್ ರಜೆಗಳು ಮಾತ್ರ ದೇಶವ್ಯಾಪ್ತಿ ಎಲ್ಲ ಬ್ಯಾಂಕುಗಳಿಗೂ ಅನ್ವಯಿಸುತ್ತವೆ. ಇನ್ನು ಎಲ್ಲ ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ದೇಶಾದ್ಯಂತ ಎಲ್ಲ ಬ್ಯಾಂಕುಗಳಿಗೆ ರಜೆಯಿರುತ್ತದೆ.

Add Asianetnews Kannada as a Preferred SourcegooglePreferred

ಬ್ಯಾಂಕ್ (Bank) ರಜೆಗಳನ್ನು (Holidays) ಆರ್ ಬಿಐ (RBI) ಮೂರು ವರ್ಗಗಳನ್ನಾಗಿ ವಿಂಗಡಿಸಿದೆ.1.ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ರಜಾದಿನ, 2. ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಮತ್ತು ರಿಯಲ್-ಟೈಮ್ ಗ್ರಾಸ್ ಸೆಟಲ್ಮೆಂಟ್ ರಜೆಗಳು ಹಾಗೂ 3.ಅಕೌಂಟ್ಸ್​ ಕ್ಲೋಸಿಂಗ್ ರಜೆಗಳು (Accounts Closing Holidays). ಆರ್ ಬಿಐ (RBI) ರಜಾಪಟ್ಟಿಯಲ್ಲಿರೋ ರಜೆಗಳು ಸಾರ್ವಜನಿಕ ವಲಯ (Public sector), ಖಾಸಗಿ ವಲಯ (Private sector), ವಿದೇಶಿ ಬ್ಯಾಂಕುಗಳು (Foreign banks), ಕೋಆಪರೇಟಿವ್ ಬ್ಯಾಂಕುಗಳು (Co-operative banks) ಹಾಗೂ ಪ್ರಾದೇಶಿಕ ಬ್ಯಾಂಕುಗಳಿಗೆ (Regional banks) ಅನ್ವಯಿಸಲಿವೆ.

2000 Note Ban : ಮಾರುಕಟ್ಟೆಗಳಲ್ಲಿ ಹೆಚ್ಚಿದ .2 ಸಾವಿರ ನೋಟಿನ ಅಬ್ಬರ

ಬ್ಯಾಂಕುಗಳಿಗೆ (Banks) ರಜೆಯಿರುವ ದಿನ ಆನ್ ಲೈನ್ ವಹಿವಾಟಿಗೆ (Online transaction) ಹಾಗೂ ಎಟಿಎಂ ವ್ಯವಹಾರಗಳಿಗೆ (ATM transaction) ಯಾವುದೇ ತೊಂದರೆಯಾಗೋದಿಲ್ಲ. ಆದರೆ, ಬ್ಯಾಂಕಿಗೆ (Bank) ಹೋಗಿಯೇ ಮಾಡಬೇಕಾದ ಯಾವುದಾದ್ರೂ ಕೆಲಸವಿದ್ರೆ ಮಾತ್ರ ಮುಂದೂಡುವುದು ಉತ್ತಮ. ಕೆಲವೊಮ್ಮೆ ಮನೆ (Home) ಅಥವಾ ನಿವೇಶನ , ಕಾರ್ (Car) ಖರೀದಿಗೆ (Purchase) ಏನಾದ್ರೂ ಪ್ಲ್ಯಾನ್ ಮಾಡಿದ್ರೆ ಸಾಲ ಪ್ರಕ್ರಿಯೆಗೆ ಸಂಬಂಧಿಸಿ ಬ್ಯಾಂಕಿಗೆ ಭೇಟಿ ನೀಡಬೇಕಾದ ಅನಿವಾರ್ಯತೆ ಇರುತ್ತದೆ. ಹಾಗೆಯೇ ಬ್ಯಾಂಕ್ ಗಳಲ್ಲಿ ಎಫ್ ಡಿ (FD) ಮಾಡಿಸಲು ಅಥವಾ ಇನ್ಯಾವುದೋ ಹೂಡಿಕೆ (Investment) ಯೋಜನೆಗಳಲ್ಲಿ ಹಣ ತೊಡಗಿಸುವ ಯೋಚನೆ ಮಾಡಿದ್ರು ಕೂಡ ಬ್ಯಾಂಕಿಗೆ ಹೋಗಬೇಕಾದ ಸಂದರ್ಭ ಎದುರಾಗುತ್ತದೆ. ಹೀಗಾಗಿ ಯಾವೆಲ್ಲ ದಿನ ರಜೆಯಿರುತ್ತದೆ ಎಂಬುದನ್ನು ಮೊದಲೇ ಗಮನಿಸಿ ಆ ಬಳಿಕ ಭೇಟಿ ನೀಡುವ ಪ್ಲ್ಯಾನ್ (Plan) ಮಾಡೋದು ಉತ್ತಮ.

ನೋಟುಗಳ ಹಿಂಪಡೆತಕ್ಕಿದೆ ಸುದೀರ್ಘ ಇತಿಹಾಸ: ಆರ್ಥಿಕತೆ ಮೇಲೆ ಶೂನ್ಯ ಪರಿಣಾಮ: ತಜ್ಞರು

ಜೂನ್ ತಿಂಗಳ ಬ್ಯಾಂಕ್ ರಜಾಪಟ್ಟಿ ಹೀಗಿದೆ:
ಜೂ.4: ಭಾನುವಾರ
ಜೂ.10: ಎರಡನೇ ಶನಿವಾರ
ಜೂ.11: ಭಾನುವಾರ
ಜೂ.15: ಗುರುವಾರ (ಮಿಜೋರಾಂ ಮತ್ತು ಒಡಿಶಾ)
ಜೂ.18:ಭಾನುವಾರ
ಜೂ.20: ಕಾಂಗ್ (ರಥಜಾತ್ರೆ ಅಥವಾ ರಥಯಾತ್ರ. ಒಡಿಶಾ ಮತ್ತು ಮಣಿಪುರ)
ಜೂ.24: ನಾಲ್ಕನೇ ಶನಿವಾರ
ಜೂ.25: ಭಾನುವಾರ
ಜೂ.26: ಖರ್ಚಿ ಪೂಜಾ (ತ್ರಿಪುರಾ)
ಜೂ.28: ಈದ್ -ಉಲ್-ಅಧಾ (ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ ಹಾಗೂ ಕೇರಳ)
ಜೂ.29 :ಈದ್ -ಉಲ್-ಅಧಾ (ದೇಶಾದ್ಯಂತ ಅನೇಕ ರಾಜ್ಯಗಳಲ್ಲಿ)
ಜೂ.30: ರೆಮ್ನ ನಿ/ಈದ್ -ಉಲ್ ಅಧಾ (ಮಿಜೋರಾಂ ಹಾಗೂ ಒಡಿಶಾ)