Karnataka Budget 2022: ತವರು ಜಿಲ್ಲೆ ಹಾವೇರಿಗೆ ಬಂಪರ್ ಕೊಡುಗೆಗಳನ್ನ ಕೊಟ್ಟ ಬೊಮ್ಮಾಯಿ

* ಬೊಮ್ಮಾಯಿ ಚೊಚ್ಚಲ ಬಜೆಟ್‌ನಲ್ಲಿ ವಿವಿಧ ಜಿಲ್ಲೆಗಳಿಗೂ ವಿವಿಧ ಭರಪೂರ ಕೊಡುಗೆ
* ತವರು ಜಿಲ್ಲೆ ಹಾವೇರಿಗೆ ಬಂಪರ್ ಕಾರ್ಯಕ್ರಮಗಳನ್ನ ನೀಡಿದ ಬೊಮ್ಮಾಯಿ
* ಹಾವೇರಿ ಜಿಲ್ಲೆಗೆ ಒಟ್ಟು  15 ಕಾರ್ಯಕ್ರಮಗಳ ಘೋಷಣೆ 

Basavaraj Bommai Announces  gift TO His Own District Haveri In Karnataka Budget 2022 rbj

ಬೆಂಗಳೂರು/ಹಾವೇರಿ, (ಮಾ.04):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಇಂದು (ಶುಕ್ರವಾರ) 2022-23ನೇ ಸಾಲಿನ ಕರ್ನಾಟಕ ಬಜೆಟ್‌ (Karnataka Budget 2022-23) ಮಂಡಿಸಿದರು.

ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ ವಿವಿಧ ಜಿಲ್ಲೆಗಳಿಗೂ ವಿವಿಧ ಭರಪೂರ ಕೊಡುಗೆಗಳನ್ನು ನೀಡುವುದರ ಜೊತೆಗೆ ತಮ್ಮ ತವರು ಜಿಲ್ಲೆ ಹಾವೇರಿಗೆ ಬಂಪರ್ ಕಾರ್ಯಕ್ರಮಗಳನ್ನ ಘೋಷಿಸಿದ್ದಾರೆ.

Karnataka Budget 2022 Live: ತೆರಿಗೆ ಬರೆ ಇಲ್ಲ, ವಾಣಿಜ್ಯ ತೆರಿಗೆ ಹೆಚ್ಚಳ ಪ್ರಸ್ತಾಪವೂ ಇಲ್ಲ! 

ಹೌದು..ಹಾವೇರಿ ಜಿಲ್ಲೆಗೆ (Haveri District)ವಿವಿಧ ವಲಯಗಳಲ್ಲಿ ಒಟ್ಟು 15 ಕಾರ್ಯಕ್ರಮಗಳ ಘೋಷಣೆ ಮಾಡಿದ್ದಾರೆ. ಮುಂದಿನ ಚುನಾವಣೆ ದೃಷ್ಟಿ ಇಟ್ಟುಕೊಂಡು ಜಿಲ್ಲೆಗೆ ಬಂಪರ್ ಕೊಡುಗೆ ಘೋಷಿಸಿದ್ದಾರೆ ಎನ್ನಲಾಗುತ್ತಿದೆ. ಹಾಗಾದ್ರೆ ಹಾವೇರಿ ಜಿಲ್ಲೆಗೆ ಏನೆಲ್ಲಾ ಕೊಟ್ಟಿದ್ದಾರೆ> ಅವು ಈ ಕೆಳಗನಂತಿವೆ ನೋಡಿ

ಹಾವೇರಿ ಜಿಲ್ಲೆಗೆ ಸಿಕ್ಕ ಕೊಡುಗೆಗಳು
*  ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ
* ಹಾನಗಲ್‌ನಲ್ಲಿ ಮಾವು ಸಂಸ್ಕರಣಾ ಘಟಕ
* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ
* ಕಾಲೇಜುಗಳ ಮೇಲ್ವಿಚಾರಣೆ ಸುಧಾರಣೆಗೆ ಹಾವೇರಿ ಸೇರಿ ಏಳು ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿವಿ ಸ್ಥಾಪನೆ
* ಹಾವೇರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಹೆಸರಿನ ಸಂಚಾರಿ ಕ್ಲಿನಿಕ್
* ಶಿಗ್ಗಾಂವಿ ತಾಲೂಕು ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳಿಗೆ ಮೇಲ್ದರ್ಜೆಗೆ
* ಸವಣೂರು ತಾಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ
* ಚರ್ಮ ಕುಶಲಕರ್ಮಿಗಳಿಗೆ ಹಾವೇರಿಯಲ್ಲಿ ಸಾಮಾನ್ಯ ಸೌಲಭ್ಯ ಸಮುಚ್ಚಯ ಸ್ಥಾಪನೆ
* ಶಿಗ್ಗಾಂವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರೋಸ್ಪೇಸ್, ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಆಟೋಮೇಷನ್, ಎಲೆಕ್ಟ್ರಾನಿಕ್ ಕ್ಷೇತ್ರಗಳ ತರಬೇತುದಾರರಿಗೆ ತರಬೇತಿ ಕೇಂದ್ರ
* ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರುಗಳಿಗೆ ಹೊಸ ರೈಲು ಮಾರ್ಗ ಯೋಜನೆ
* ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ
* ರಾಣೆಬೆನ್ನೂರಿನಲ್ಲಿ ನೂತನ‌ ಜವಳಿ ಪಾರ್ಕ್
* ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ 20 ಕೋಟಿ ರೂ. ನಿಗದಿ
* ಹಾವೇರಿಯಲ್ಲಿ ಡಾ.ಮಹಾದೇವ ಬಣಕಾರರ ಸಾಂಸ್ಕೃತಿಕ ಭವನಕ್ಕಾಗಿ 2 ಕೋಟಿ ರೂ.
* ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರಕ್ಕೆ 28 ಕೋಟಿ ರೂ.

ವಿವಿಧ ಜಿಲ್ಲೆಗಳಿಗೆ ಸಿಕ್ಕಿದ್ದೇನು?
* ಹಾವೇರಿಯಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೇರಿ ಸ್ಥಾಪನೆ 
* ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ
 * ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ಕಾಲೇಜು
* ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜು
 * ಹಿರೇಕೇರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ 
* ಧಾರವಾಡ ಕೃಷಿ ವಿವಿಯಲ್ಲಿ ಡಾ.ಎಸ್.ವಿ. ಪಾಟೀಲ ಕೃಷಿ, ಸಂಶೋಧನೆ ಮತ್ತು ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ
* ಮೆಣಸು ಮತ್ತು ಸಾಂಬಾರು ಪದಾರ್ಥಗಳ ಗುಣಮಟ್ಟ ಹೆಚ್ಚಿಸಲು ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ * ಹಾನಗಲ್‌ನಲ್ಲಿ ಮಾವು ಸಂಸ್ಕರಣಾ ಘಟಕ
* ರೇಷ್ಮೆ ದ್ವಿತಳಿ ಮೊಟ್ಟಿ ಉತ್ಪಾದಿಸಿ ಶೈತ್ಯೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಶೈತ್ಯಾಗಾರಗಳ ನಿರ್ಮಾಣ 
* ಹಾವೇರಿಯಲ್ಲಿ 30 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಶ್ಮೆಗೂಡು ಮಾರುಕಟ್ಟೆ 
* ಕಾಳಿ ನದಿಯಿಂದ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ 
* ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆ.ಸಿ. ವ್ಯಾಲಿ ಎರಡನೆ ಹಂತವನ್ನು 445 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ 
* ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವಿನೂತನ ವಿಶ್ವವಿದ್ಯಾಲಯಗಳು 
* ರಾಯಚೂರು ವಿಶ್ವವಿದ್ಯಾಲಯದಲ್ಲಿ ಪ್ರಯೋಗಾಲಯ ಸ್ಥಾಪಿಸಲು 15 ಕೊಟಿ ರೂ.
 * ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕು ಅಸ್ಪತ್ರೆಯನ್ನು 250 ಹಾಸಿಗೆಗಳ ಅಸ್ಪತ್ರೆಯಾಗಿ ಮೇಲ್ದರ್ಜೆಗೆ 
* ಹಾವೇರಿ ಜಿಲ್ಲೆ ಸವಣೂರಿನಲ್ಲಿ ಹೊಸ ಅಯುರ್ವೇದ ಕಾಲೇಜು * ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಅಯುಷ್ ವಿಭಾಗ * ಚಿತ್ರದುರ್ಗದಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು
 * ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ. ಅರಂಭದಲ್ಲಿ 10 ಕೋಟಿ ರೂ. ಹಂಚಿಕೆ
 * ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯಗಳು 
* ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ವಿದ್ಯಾರ್ಥಿಗಳ ಸಾಮರ್ಥ್ಯದ ವಿದ್ಯಾರ್ಥಿ ನಿಲಯಗಳ ಸಮುಚ್ಛಯ

Latest Videos
Follow Us:
Download App:
  • android
  • ios