Asianet Suvarna News Asianet Suvarna News

IT Hub Bengaluru: ನವ ಬೆಂಗ್ಳೂರು ನಿರ್ಮಾಣಕ್ಕೆ ನೀಲನಕ್ಷೆ: ಸಿಎಂ ಬೊಮ್ಮಾಯಿ

*   ಸರ್ಕಾರದಿಂದ ವಿಶೇಷ ಅನುದಾನ
*   ಎಲ್ಲಾ ವರ್ಗದವರಿಗೂ ಸೌಲಭ್ಯ ತಲುಪಿಸಲು ಯೋಜನೆ
*   ಐಟಿಗೆ ಬೆಂಗಳೂರು ಪ್ರಸಿದ್ಧವಾಗಿದ್ದು ನಾಲ್ಕು ದಿಕ್ಕಿನಲ್ಲಿಯೂ ಮಾಹಿತಿ ತಂತ್ರಜ್ಞಾನ ಉದ್ಯಮ ವಿಸ್ತರಣೆ
 

Blueprint for New Bengaluru Construction Says CM Basavaraj Bommai grg
Author
Bengaluru, First Published Jan 6, 2022, 5:37 AM IST

ಬೆಂಗಳೂರು(ಜ.06):  ಸಕಲ ಸೌಲಭ್ಯಗಳಿರುವ ನವ ಬೆಂಗಳೂರನ್ನು(New Bengaluru) ನಿರ್ಮಿಸಲು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದ್ದು, ಸರ್ಕಾರ ವಿಶೇಷ ಅನುದಾನವನ್ನು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ.  ಬುಧವಾರ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಆಯೋಜಿಸಲಾಗಿದ್ದ ಜಿಎಂ ಗ್ರೂಪ್‌ ಹಾಗೂ ಅದ್ವಿತೀಯ ಗ್ರೂಪ್‌ನ ಐಟಿ ಪಾರ್ಕ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಬೆಂಗಳೂರನ್ನು ಯೋಜನಾಬದ್ಧವಾಗಿ ಮತ್ತು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ ರೂಪಿಸಲಾದ ಬೆಂಗಳೂರು ವಿಷನ್‌-2022 ಯೋಜನೆಯಡಿ ನಾಲ್ಕೈದು ಯೋಜನೆಗಳನ್ನು ತೆಗೆದುಕೊಳ್ಳಲಾಗಿದೆ. ಎಲ್ಲ ವರ್ಗದ ಜನರಿಗೆ ಸೌಲಭ್ಯಗಳನ್ನು ತಲುಪಿಸುವ ವಿಶೇಷ ಯೋಜನೆಗಳನ್ನು ಒಟ್ಟಾಗಿ ರೂಪಿಸುತ್ತಿದ್ದು, ಶೀಘ್ರವೇ ಅವುಗಳಿಗೆ ವೇಗ ನೀಡಲಾಗುವುದು ಎಂದು ಹೇಳಿದರು.

Digital Economy `5 ವರ್ಷಗಳಲ್ಲಿ 400 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ’

ವ್ಯಾಪಾರ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಜಿ.ಎಂ.ಸಿದ್ದೇಶ್ವರ(GM Siddeshwara) ಅವರ ಎರಡು ಮತ್ತು ಮೂರನೇ ಪೀಳಿಗೆ ಬಹುದೊಡ್ಡ ಕೊಡುಗೆ ನೀಡಿದೆ. ಇದೀಗ ಐಟಿ ಹಬ್‌(IT Hub) ನಿರ್ಮಿಸಿ 10 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಲಿದ್ದಾರೆ. ಐಟಿಗೆ ಬೆಂಗಳೂರು ಪ್ರಸಿದ್ಧವಾಗಿದ್ದು ನಾಲ್ಕು ದಿಕ್ಕಿನಲ್ಲಿಯೂ ಮಾಹಿತಿ ತಂತ್ರಜ್ಞಾನ ಉದ್ಯಮ ವಿಸ್ತರಣೆಯಾಗಿದೆ. ಮಾಹಿತಿ ತಂತ್ರಜ್ಞಾನ(ಐಟಿ) ಉದ್ಯಮಕ್ಕೆ ಹಿಂದಿನ ಸರ್ಕಾರಗಳೂ ಸೇರಿದಂತೆ ನಮ್ಮ ಸರ್ಕಾರವೂ ಮಹತ್ವ ಮತ್ತು ಪ್ರೋತ್ಸಾಹ ನೀಡುತ್ತಾ ಬಂದಿದೆ. ಅತಿ ಹೆಚ್ಚು ಉದ್ಯೋಗ ಲಭಿಸುತ್ತಿರುವುದು ಐಟಿ ವಲಯದಲ್ಲಿ. ವಿದ್ಯಾವಂತರಿಗೆ ದೊಡ್ಡ ಪ್ರಮಾಣದಲ್ಲಿ ಅವಕಾಶಗಳು ದೊರಕುತ್ತಿವೆ ಎಂದರು.

ಜನರ ಕೈಯಲ್ಲಿ ಉದ್ಯೋಗ ಇದ್ದಾಗ ಮಾತ್ರ ದೇಶ ವೃದ್ಧಿಯಾಗಿ ಆರ್ಥಿಕತೆ ಬೆಳೆಯುತ್ತದೆ. ಆ ನಿಟ್ಟಿನಲ್ಲಿ ಐಟಿ ಸೇವೆಗಳು ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಅತಿ ಹೆಚ್ಚು ರಫ್ತು ಆಗುತ್ತಿರುವುದು ಐಟಿ ವಲಯದಲ್ಲಿ. ದೇಶದ ಒಟ್ಟು ರಫ್ತಿನ ಪ್ರಮಾಣದಲ್ಲಿ ಶೇ.40 ರಷ್ಟು ರಫ್ತು ಬೆಂಗಳೂರಿನಿಂದ ಆಗುತ್ತಿದೆ. ಹೀಗಾಗಿ ಬೆಂಗಳೂರು ದೇಶದ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿದೆ. ಕೋವಿಡ್‌(Covid19) ಮುಗಿದು ಆರ್ಥಿಕತೆ ಬೆಳವಣಿಗೆಯಾಗುತ್ತಿರುವ ಸಂದರ್ಭದಲ್ಲಿ ಐಟಿ ಹಬ್‌ ನಿರ್ಮಾಣ ವಾಗುತ್ತಿರುವುದು ಬೆಂಗಳೂರಿನ ಬೆಳವಣಿಗೆಯ ಕಿರೀಟಕ್ಕೆ ಮತ್ತೊಂದು ಗರಿ ಮೂಡಿಸಿದಂತಾಗಿದೆ ಎಂದರು.

ಸಮಾರಂಭದಲ್ಲಿ ಸಚಿವರಾದ ಮುರುಗೇಶ್‌ ನಿರಾಣಿ, ಬಿ.ಎ. ಬಸವರಾಜ, ಆರ್‌.ಅಶೋಕ್‌, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್‌.ಎ.ರವೀಂದ್ರನಾಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಆಡಳಿತ ಯಂತ್ರಕ್ಕೆ ಚುರುಕು, ಪ್ರತಿನಿತ್ಯ 10 ತಾಸು ಕೆಲಸ ಮಾಡಿ: ಸಿಎಂ ತಾಕೀತು

ಅಧಿಕಾರ ವಿಕೇಂದ್ರೀಕರಣದ ಮೂಲಕ ನಿಮಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ನಿಮ್ಮ ವಿವೇಚನಾಧಿಕಾರವನ್ನು ಜನರ ಹಿತಕ್ಕಾಗಿ ಬಳಕೆ ಮಾಡಿ. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿನ ವಿಳಂಬ ಧೋರಣೆಗೆ ದುಬಾರಿ ಬೆಲೆ ತೆರಬೇಕಾಗುತ್ತದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಚಾಟಿ ಬೀಸಿದ್ದರು.

ಡಿ.31ರಂದು ವಿಧಾನಸೌಧದಲ್ಲಿ ಆಯೋಜಿಸಿದ್ದ ರಾಜ್ಯದ ಎಲ್ಲ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಸಭೆಯಲ್ಲಿ ರಾಜ್ಯದ(Karnataka) ಸಮಸ್ಯೆಗಳ ಕುರಿತು ಚರ್ಚಿಸಿದ ಮುಖ್ಯಮಂತ್ರಿಗಳು ಆಡಳಿತಕ್ಕೆ ಚುರುಕು ಮುಟ್ಟಿಸಿದ್ದರು. ಜಲಜೀವನ್‌ ಮಿಷನ್‌, ಬೆಳೆ ಪರಿಹಾರ(Crop Compensation), ನೆರೆ ಪರಿಹಾರ ಸೇರಿ ಹಲವು ಜನಪರ ಯೋಜನೆಗಳಡಿ ಪ್ರಗತಿ ಸಾಧಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

Doorstep Banking: ಮನೆ ಬಾಗಿಲಿಗೇ ಬ್ಯಾಂಕಿಂಗ್ ಸೇವೆ ಪಡೆಯಲು ಏನ್ಮಾಡ್ಬೇಕು? ಯಾವೆಲ್ಲ ಬ್ಯಾಂಕುಗಳಲ್ಲಿದೆ ಈ ಸೌಲಭ್ಯ?

ವಾರದಲ್ಲಿ 3 ದಿನ ಹಳ್ಳಿಗಳಿಗೆ ಭೇಟಿ ನೀಡಿ:

ಬಡವರ ಅನುಕೂಲಕ್ಕಾಗಿ ಅಧಿಕಾರಿಗಳು ಕೈಗೊಳ್ಳುವ ತೀರ್ಮಾನಗಳಿಗೆ ಸರ್ಕಾರದ(Government of Karnataka: ) ಸಂಪೂರ್ಣ ಬೆಂಬಲ ಇರುತ್ತದೆ. ಅಧಿಕಾರಿಗಳು ಸ್ಪಷ್ಟನಿರ್ಣಯ ತೆಗೆದುಕೊಳ್ಳಬೇಕು. ದಿನಕ್ಕೆ 10 ತಾಸು ಕೆಲಸ ಮತ್ತು ವಾರದಲ್ಲಿ ಮೂರು ದಿನ ಹಳ್ಳಿಗಳ ಪ್ರವಾಸ ಕೈಗೊಂಡು(Village Tour) ಸರ್ಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಗಮನ ಕೇಂದ್ರೀಕರಿಸಬೇಕು. ತಳಹಂತದ ಅಧಿಕಾರಿ, ಸಿಬ್ಬಂದಿ ಮೇಲೆ ಹತೋಟಿ ಇಟ್ಟುಕೊಳ್ಳಿ. ಕಾಲಕಾಲಕ್ಕೆ ಪ್ರಗತಿ ಪರಿಶೀಲನೆ ಮಾಡಿ. ಸಮರ್ಪಕವಾಗಿ ಕೆಲಸ ನಿರ್ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವು ಪಡೆದು ಕಾರ್ಯನಿರ್ವಹಿಸಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು. ಹಳ್ಳಿಗರು ಸಮಸ್ಯೆಯ ಜತೆ ಜೀವನ ಮಾಡುತ್ತಾರೆ. ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದು ಬೇರೆ, ಸಮಸ್ಯೆಯ ಜತೆ ಬದುಕುವುದು ಬೇರೆ. ಆದ್ದರಿಂದ ಅವರ ಸಮಸ್ಯೆ ಬಗೆಹರಿಸಲು ಶ್ರಮಿಸಬೇಕು ಸಲಹೆ ನೀಡಿದರು.
 

Follow Us:
Download App:
  • android
  • ios