ವಿಮಾ ಕಾಯ್ದೆಗೆ ತಿದ್ದುಪಡಿ ಮಾಡಿ ಶೇ.74ರಷ್ಟುವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ| ಹೂಡಿಕೆಗೆ ಅವಕಾಶ ಕಲ್ಪಿಸಲು ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ

ನವದೆಹಲಿ(ಮಾ.11): ವಿಮಾ ಕಾಯ್ದೆಗೆ ತಿದ್ದುಪಡಿ ಮಾಡಿ ಶೇ.74ರಷ್ಟುವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲು ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.

ಸದ್ಯ ಸಾಮಾನ್ಯ ಮತ್ತು ಜೀವ ವಿಮೆಯಲ್ಲಿ ಶೇ.49ರಷ್ಟುಎಫ್‌ಡಿಐಗೆ ಅವಕಾಶ ನೀಡಲಾಗಿದ್ದು, ವಿಮೆಯ ನಿರ್ವಹಣೆ ಮತ್ತು ನಿಯಂತ್ರಣ ಭಾರತದ ನಿಯಂತ್ರಣಕ್ಕೆ ಒಳಪಟ್ಟಿದೆ. ವಿಮಾ ಕ್ಷೇತ್ರದಲ್ಲಿ ಎಫ್‌ಡಿಐ ಅನ್ನು ಶೇ.49ರಿಂದ ಶೇ.74ಕ್ಕೆ ಹೆಚ್ಚಿಸುವ ಕುರಿತಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದರು.

ಈ ಸಂಬಂಧ ವಿಮಾ ಕಾಯ್ದೆ, 1938ಕ್ಕೆ ತಿದ್ದುಪಡಿ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದರು.