Asianet Suvarna News Asianet Suvarna News

ಕೆನರಾ ಬ್ಯಾಂಕ್‌ ಗ್ರಾಹಕರಿಗೆ ಗುಡ್ ನ್ಯೂಸ್

ನೀವ್ ಕೆನರಾ ಬ್ಯಾಂಕ್ ಗ್ರಾಹಕರಾಗಿದ್ದಲ್ಲಿ ಚಿಂತಿಸುವ ಅಗತ್ಯವಿಲ್ಲ. ಯಾಕೆಂದರೆ ಇದು ಸೇಫೆಸ್ಟ್ ಬ್ಯಾಂಕ್ ಎನಿಸಿಕೊಳ್ಳಲಿದೆ. 

Canara Bank will Add Soon in Safest Bank list snr
Author
Bengaluru, First Published Mar 19, 2021, 9:04 AM IST

ನವದೆಹಲಿ (ಮಾ.19): ಬ್ಯಾಂಕಿಗ್‌ ವ್ಯವಸ್ಥೆ ಹಾಗೂ ಗಾತ್ರದ ದೃಷ್ಟಿಯಿಂದ ಮಹತ್ವದ್ದಾಗಿರುವ ಅಗ್ರ ಬ್ಯಾಂಕುಗಳ ಪಟ್ಟಿಯಲ್ಲಿ ಕೆನರಾ ಬ್ಯಾಂಕ್‌ ಕೂಡ ಸೇರ್ಪಡೆ ಆಗುವ ಸಾಧ್ಯತೆ ಇದೆ. ಆರ್‌ಬಿಐನ ಅಗ್ರ ಬ್ಯಾಂಕುಗಳ ಪಟ್ಟಿಯಲ್ಲಿ ಸದ್ಯ ಎಸ್‌ಬಿಐ, ಐಸಿಐಸಿಐ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕುಗಳಿವೆ. 

ಈ ಬ್ಯಾಂಕುಗಳು ಕಾರ್ಯನಿರ್ವಹಣೆಗೆ ದೊಡ್ಡ ಮಟ್ಟದ ಬಂಡವಾಳವನ್ನು ಹೊಂದಿರುವ ಕಾರಣ ಹಾಗೂ ಬಂಡವಾಳವನ್ನು ಆಕರ್ಷಿಸುವ ಸಾಮರ್ಥ್ಯ ಇರುವ ಕಾರಣ ಪತನಗೊಳ್ಳುವ ಸಾಧ್ಯತೆ ಇಲ್ಲ. ಈ ಬ್ಯಾಂಕುಗಳ ಮೇಲೆ ಜನರು ನಂಬಿಕೆ ಇಡಬಹುದಾಗಿದೆ.

ಕಳೆದ 2 ವರ್ಷ​ಗ​ಳಿಂದ ಒಂದೇ ಒಂದು 2000 ಮುಖ​ಬೆ​ಲೆ​ಯ ನೋಟು ಮುದ್ರಿ​ಸಿ​ಲ್ಲ: ಕೇಂದ್ರ! ...

 ಸಾರ್ವಜನಿಕ ವಲಯದ ಬ್ಯಾಂಕುಗಳ ವಿಲೀನದಿಂದಾಗಿ ಬ್ಯಾಂಕ್‌ ಆಫ್‌ ಬರೋಡಾ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಮತ್ತು ಕೆನರಾ ಬ್ಯಾಂಕುಗಳು ಗಾತ್ರದಲ್ಲಿ ಕ್ರಮವಾಗಿ 3,4, ಮತ್ತು 5ನೇ ಸ್ಥಾನವನ್ನು ಅಲಂಕರಿಸಿದ್ದು, ಐಸಿಐಸಿಐ ಬ್ಯಾಂಕ್‌ನ್ನು 6ನೇ ಸ್ಥಾನಕ್ಕೆ ತಳ್ಳಿವೆ. ಈ ಹಿನ್ನೆಲೆಯಲ್ಲಿ ಆರ್‌ಬಿಐ ವ್ಯವಸ್ಥಿತ ಬ್ಯಾಂಕುಗಳ ಪಟ್ಟಿಯನ್ನು ಪರಿಷ್ಕೃರಿಸಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. 

ಈ ಪಟ್ಟಿಸೇರ್ಪಡೆಯಿಂದಾಗಿ ಜನರು ಬ್ಯಾಂಕ್‌ಗಳ ಮೇಲೆ ಹೆಚ್ಚಿನ ವಿಶ್ವಾಸ ಇಡಬಹುದು, ಅದೇ ರೀತಿಯಲ್ಲಿ ಬ್ಯಾಂಕ್‌ಗಳು ಮಾರುಕಟ್ಟೆಯಿಂದ ಕಡಿಮೆ ಬಡ್ಡಿದರದಲ್ಲಿ ಬಂಡವಾಳ ಸಂಗ್ರಹಿಸಬಹುದು.

Follow Us:
Download App:
  • android
  • ios