ಉದ್ಯೋಗ ಸೃಷ್ಟಿಯಲ್ಲಿನ ವೈಫಲ್ಯತೆ ಒಪ್ಪಿಕೊಂಡ ಕೇಂದ್ರ ಸರ್ಕಾರ| ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಹೆಚ್ಚು ಎಂದ ಕೇಂದ್ರ| ‘ಗರಿಷ್ಠ ಮೌಲ್ಯದ ನೋಟುಗಳನ್ನು ನಿಷೇಧಿಸಿದ ಬಳಿಕ ನಿರುದ್ಯೋಗ ಪ್ರಮಾಣ ಹೆಚ್ಚು’| ಕೇಂದ್ರ ಅಂಕಿ ಅಂಶಗಳ ಸಚಿವಾಲಯದ ಮಾಹಿತಿ ಬಹಿರಂಗ| 2017-18ನೇ ಹಣಕಾಸು ವರ್ಷದಲ್ಲಿ ನಿರುದ್ಯೋಗ ಪ್ರಮಾಣ ಶೇ.6.01ಕ್ಕೆ ಏರಿಕೆ|  1972-73 ರ ನಂತರ ನಿರುದ್ಯೋಗ ಪ್ರಮಾಣ ಅತೀ ಹೆಚ್ಚು| 

ನವದೆಹಲಿ(ಮೇ.31): ಮೋದಿ 1.0 ಸರ್ಕಾರದ ಅವಧಿಯಲ್ಲಿ ಗರಿಷ್ಠ ಮೌಲ್ಯದ ನೋಟುಗಳನ್ನು ನಿಷೇಧಿಸಿದ ಬಳಿಕ, ದೇಶದಲ್ಲಿ ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಲ್ಲೇ ಅತಿ ಹೆಚ್ಚು ದಾಖಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಅಂಕಿ ಅಂಶಗಳ ಸಚಿವಾಲಯ, 2017-18ನೇ ಹಣಕಾಸು ವರ್ಷದಲ್ಲಿ ನಿರುದ್ಯೋಗ ಪ್ರಮಾಣ ಶೇ.6.01ಕ್ಕೆ ಏರಿದೆ ಎಂದು ಸ್ಪಷ್ಟಪಡಿಸಿದೆ. 1972-73 ರ ನಂತರ ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿದೆ ಎಂದು ಸರ್ಕಾರ ತನ್ನ ವರದಿಯಲ್ಲಿ ಅಧಿಕೃತವಾಗಿ ತಿಳಿಸಿದೆ.

Scroll to load tweet…

ಎಲ್ಲಾ ಉದ್ಯೋಗಶೀಲ ಯುವಕರಲ್ಲಿ ಶೇ.7.8ರಷ್ಟು ಜನರು ನಿರುದ್ಯೋಗಿಗಳಾಗಿದ್ದಾರೆ ಮತ್ತು ಗ್ರಾಮೀಣ ಭಾಗದಲ್ಲಿ ಇದರ ಪ್ರಮಾಣ ಶೇ. 5.3 ರಷ್ಟಿದೆ. ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.6.2 ರಷ್ಟಿದ್ದರೆ, ಮಹಿಳೆಯರಲ್ಲಿ ಶೇ.5.7 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.