Asianet Suvarna News Asianet Suvarna News

Gold Silver Price: ಬೆಂಗಳೂರಿನಲ್ಲಿ ಚಿನ್ನದ ದರದಲ್ಲಿ ಇಳಿಕೆ!

ಇಂದಿನ ಚಿನ್ನ ಹಾಗೂ ಬೆಳ್ಳಿ ದರ
ಬೆಂಗಳೂರಿನಲ್ಲಿ ಚಿನ್ನದ ದರದಲ್ಲಿ ಇಳಿಕೆ
2022ರ ಜನವರಿ 7 ಗೋಲ್ಡ್, ಸಿಲ್ವರ್ ರೇಟ್ ಇಲ್ಲಿದೆ

check gold silver rate in bengaluru and major cities of india 07 january 2022 san
Author
Bengaluru, First Published Jan 7, 2022, 11:20 AM IST
  • Facebook
  • Twitter
  • Whatsapp

ಬೆಂಗಳೂರು (ಜ.6): ರಾಜಧಾನಿ ಬೆಂಗಳೂರಿನಲ್ಲಿ ಚಿನ್ನಾಭರಣ ಗ್ರಾಹಕರಿಗೆ ಕರೋನಾ ಕಹಿಯ ಮಧ್ಯೆ ಸ್ವಲ್ಪ ಸಿಹಿ ಸುದ್ದಿ ಸಿಕ್ಕಿದೆ. ದೇಶದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತದ ಹಾವು ಏಣಿ ಆಟ ಮುಂದುವರಿದಿದೆ. ಆಯಾಯ ರಾಜ್ಯಗಳಲ್ಲಿ ಅಲ್ಲಿನ ಬೇಡಿಕೆಗೆ ತಕ್ಕಂತೆ ಹಳದಿಲೋಹದ ಬೆಲೆಯಲ್ಲಿ ವ್ಯತ್ಯಾಸವಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ದರದ ಮೇಲೆ 350 ರೂಪಾಯಿ ಕಡಿತವಾಗಿದ್ದರೆ, ಚೆನ್ನೈನಲ್ಲಿ 310 ರೂಪಾಯಿ ಕಡಿತವಾಗಿದೆ. ಇನ್ನು ಮುಂಬೈ ಹಾಗೂ ದೆಹಲಿಯಲ್ಲಿ ಹೆಚ್ಚಿನ ಮಟ್ಟದ ವ್ಯತ್ಯಾಸ ಕಂಡು ಬಂದಿಲ್ಲ. ಬೆಳ್ಳಿ ದರದಲ್ಲಿ ದೇಶಾದ್ಯಂತ ಏಕರೂಪದ ಇಳಿಕೆ ಕಂಡಿದ್ದು, ಚೆನ್ನೈನಲ್ಲಿ 1 ಕೆಜಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 900 ರೂಪಾಯಿ ಕಡಿತವಾಗಿದೆ.  ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.   ಒಂದೆಡೆ ದೇಶದಲ್ಲಿ ಕರೋನಾ ಪ್ರಕರಣಗಳು ಏರಿಕೆ ಕಾಣುವ ಮೂಲಕ ವಿವಿಧ ರಾಜ್ಯಗಳಲ್ಲಿ ಶುಭ ಕಾರ್ಯಗಳು ಮದುವೆ ಸಮಾರಂಭಗಳಿಗೆ ಸಾಕಷ್ಟು ಕಟ್ಟುನಿಟ್ಟಿನ ನಿಯಮವನ್ನು ವಿಧಿಸಲಾಗುತ್ತಿದೆ. ಇದರ ನಡುವೆ ಚಿನ್ನ ಹಾಗೂ ಬೆಳ್ಳಿ ದರದಲ್ಲೂ ಏರಿಳಿಕೆಯಾಗುತ್ತಿರುವುದು ಗ್ರಾಹಕರ ಚಿಂತೆಗೆ ಕಾರಣವಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಯಾವ ರೀತಿಯ ಏರಿಕೆ-ಇಳಿಕೆ ಕಂಡಿದೆ ಎನ್ನುವುದರ ವಿವರ ಇಲ್ಲಿದೆ.
"

ಬೆಂಗಳೂರಿನಲ್ಲಿ( Bangalore) ದರ ಎಷ್ಟಿದೆ?
ಸತತ 2ನೇ ದಿನ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಗುರುವಾ 200 ರೂಪಾಯಿ ಇಳಿಕೆಯಾಗಿದ್ದ ಚಿನ್ನದ ಬೆಲೆ, ಶುಭ ಶುಕ್ರವಾರದಂದು 350 ರೂಪಾಯಿ ಕಡಿತವಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್  10 ಗ್ರಾಂ ಚಿನ್ನದ ಬೆಲೆ 44,600 ರೂಪಾಯಿ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯನ್ನೂ 390 ರೂಪಾಯಿ ಇಳಿಕೆಯಾಗಿದ್ದು,48,650 ರೂಪಾಯಿಗೆ ತಲುಪಿದೆ. 1 ಕೆಜಿ ಬೆಳ್ಳಿ ದರದಲ್ಲಿ ಮತ್ತೆ 200 ರೂಪಾಯಿ ಇಳಿಕೆಯಾಗಿದ್ದು, 60, 400 ರೂಪಾಯಿ ಆಗಿದೆ.


ದೆಹಲಿಯಲ್ಲಿ (Delhi) ಹೇಗಿದೆ?
ದೇಶದ ರಾಜಧಾನಿ ದೆಹಲಿಯಲ್ಲಿ ಚಿನ್ನದ ದರದಲ್ಲಿ ಕೊಂಚ ಮಟ್ಟದ ಇಳಿಕೆಯಾಗಿದೆ. 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಮತ್ತೆ 10 ರೂಪಾಯಿ ಇಳಿಕೆಯಾಗಿದ್ದು ಇಂದು 47,090 ತಲುಪಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನದ ದರದಲ್ಲೂ ಕೊಂಚ ಇಳಿಕೆಯಾಗಿದ್ದು 51,390 ರೂಪಾಯಿ ತಲುಪಿದೆ. 1 ಕೆಜಿ ಬೆಳ್ಳಿ ದರದಲ್ಲಿ 200 ರೂಪಾಯಿ ಇಳಿಕೆಯಾಗಿ 60,400 ರೂಪಾಯಿಯ ಆಗಿದೆ.

ಮುಂಬೈನಲ್ಲಿ(Mumbai) ಎಷ್ಟಿದೆ ದರ?
ಮುಂಬೈನಲ್ಲಿ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಹೌದು 22 ಕ್ಯಾರಟ್ 10 ಗ್ರಾಂ ಚಿನ್ನದ ದರ, 46,820 ರೂ.ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ದರ 48, 820 ರೂ ಆಗಿದೆ. ಇನ್ನು ಬೆಳ್ಳಿ ದರದಲ್ಲಿ 200 ರೂಪಾಯಿ ಇಳಿಕೆಯಾಗಿದ್ದು, 60,400 ರೂಪಾಯಿ ತಲುಪಿದೆ.

ಚೆನ್ನೈಯಲ್ಲಿ(Chennai) ದರ ಹೀಗಿದೆ
ಚೆನ್ನೈಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ದರದಲ್ಲಿ 310 ರೂಪಾಯಿ ಇಳಿಕೆ ಕಂಡು, ಇಂದು 44,860ರೂ. ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ದರದಲ್ಲಿ 290 ರೂಪಾಯಿ ಇಳಿಕೆ ಕಂಡು 48,940 ರೂಪಾಯಿ ಆಗಿದೆ. ಒಂದು ಕೆ.ಜಿ. ಬೆಳ್ಳಿ ದರದಲ್ಲಿ 900 ರೂಪಾಯಿ ಇಳಿಕೆ ಕಂಡಿದ್ದು, 64,500 ರೂಪಾಯಿ ಆಗಿದೆ. 

ಸತತ ಎರಡನೇ ದಿನವೂ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ ಕಂಡಿರುವುದು ಗ್ರಾಹಕರ ಸಂತಸ್ಕೆ ಕಾರಣವಾಗಿದೆ. ಆದರ, ಕೋವಿಡ್ ನಿಯಮಾವಳಿಗಳು ಹಾಗೂ ಲಾಕ್ ಡೌನ್ ಸಮಯದಲ್ಲಿ ಇಷ್ಟು ಎಷ್ಟರ ಮಟ್ಟಿಗೆ ಗಗ್ರಾಹಕರಗೆ ಪ್ರಯೋಜನವಾಗಲಿದೆ ಎಂದು ಹೇಳುವುದಂತೂ ಕಷ್ಟ. ಚಿನ್ನ ಖರೀದಿಸಲು ಇದು ಉತ್ತಮ ಸಮಯವಾ? ಅಥವಾ ಇನ್ನೂ ಕೊಂಚ ಕಾಯುವುದು ಸರಿನಾ? ಎಂಬ ಪ್ರಶ್ನೆಯೂ ಈ ಗೊಂದಲಕ್ಕೆ ಕಾರಣವಾಗಿದೆ.

Follow Us:
Download App:
  • android
  • ios