* ಚಿನ್ನ, ಬೆಳ್ಳಿ ದರ ಹೇಗಿದೆ?* ಕೊರೋನಾ ಮೂರನೇ ಅಲೆ ಮಧ್ಯೆ ಇಳಿಕೆಯಾಗಿದ್ಯಾ ಚಿನ್ನದ ದರ* ಹೀಗಿದೆ ಡಿಸೆಂಬರ್ 19, 2021ರ ಗೋಲ್ಡ್ ಹಾಗೂ ಸಿಲ್ವರ್ ರೇಟ್
ಬೆಂಗಳೂರು(ಡಿ.19): ಚಿನ್ನ (Gold) ಅಂದ್ರೆ ಇಷ್ಟ ಪಡದವರೇ ಇಲ್ಲ. ಅದರಲ್ಲೂ ಹೆಣ್ಮಕ್ಕಳಿಗೆ ಚಿನ್ನದ ಮೇಲೆ ವಿಶೇಷ ಪ್ರೀತಿ. ಹೇಳಿ, ಕೇಳಿ ಈಗ ಮದುವೆ ಸೀಜನ್. ಹೀಗಾಗಿ ಚಿನ್ನ ಖರೀದಿ ಅನಿವಾರ್ಯವಾಗಿದೆ. ಇನ್ನು ಇತ್ತ ಈ ಶುಭ ಕಾರ್ಯಗಳಿಗೆ ಒಮಿಕ್ರಾನ್ ಭೀತಿ ತೊಡಕುಂಟು ಮಾಡುವ ಸಾಧ್ಯತೆ ಇದೆ. ಈಗಾಗಲೇ ತಜ್ಞರು ಈ ವಿಚಾರದಲ್ಲಿ ಎಚ್ಚರಿಕೆ ನೀಡಿದ್ದು, ಮೂರನೇ ಅಲೆ (Corona Third Wavew) ಆರಂಭವಾಗುವ ಸೂಚನೆ ನೀಡಿದ್ದಾರೆ. ಹೀಗಿರುವಾಗ ಜನರೂ ಏನು ಮಾಡೋದೆಂದು ತೋಚದೆ ಕಂಗಾಲಾಗಿದ್ದಾರೆ. ಹೀಗಿದ್ದರೂ ಚಿನ್ನದ ದರವೇನು? ಬೆಳ್ಳಿ ರೇಟ್ ಕಡಿಮೆಯಾಗಿದಾ ಎಂಬ ಕುತೂಹಲ ಹಲವರಲ್ಲಿ ಇರುತ್ತದೆ. ಹೀಗಿರುವಾಗ ಇಂದು 19 ಡಿಸೆಂಬರ್ 2021, ಭಾನುವಾರದ ಗೋಲ್ಡ್ ರೇಟ್ ಇಲ್ಲಿದೆ ನೋಡಿ.
ಒಮಿಕ್ರಾನ್ ಭೀತಿ ಆರಂಭವಾದಾಗಿನಿಂದಲೂ ಚಿನ್ನ, ಬೆಳ್ಳಿ ದರ ಹಾವೇಣಿ ಆಟ ಆರಂಭಿಸಿದೆ. ಒಂದು ದಿನ ಕುಸಿಯುವ ಚಿನ್ನದ ದರ ಮರುದಿನವೇ ಏರಿಕೆಯ ಹಾದಿ ಹಿಡಿರುವುದು ಗ್ರಾಹಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹೀಗಿರುವಾಗ ಚಿನ್ನ ಖರೀದಿಸಲು ಇದು ಉತ್ತಮ ಸಮಯವಾ? ಅಥವಾ ಇನ್ನೂ ಕೊಂಚ ಕಾಯುವುದು ಸರಿನಾ? ಎಂಬ ಪ್ರಶ್ನೆಯೂ ಈ ಗೊಂದಲಕ್ಕೆ ಕಾರಣವಾಗಿದೆ. ಹೀಗಿದ್ದರೂ ಇಂದು ಚಿನ್ನ, ಬೆಳ್ಳಿ ದರದಲ್ಲಿ ಏರಿಕೆಯಾಗದಿರುವುದು ಗ್ರಾಹಕರಿಗೆ ಕೊಂಚ ಸಮಾಧಾನ ಕೊಟ್ಟಿದೆ. ಹೌದು ಇಂದು ಮುಂಬೈ ಹೊರತುಪಡಿಸಿ ಉಳಿದೆಡೆ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೀಗಿದ್ದರೂ ಒಮಿಕ್ರಾನ್ ಆತಂಕದ ಮಧ್ಯೆ ಚಿನ್ನದ ದರ ಕುಸಿಯಲಿದೆ ಎಂಬ ಮಾತುಗಳು ಆರ್ಥಿಕ ತಜ್ಞರದ್ದಾಗಿದೆ.
"
ಬೆಂಗಳೂರಿನಲ್ಲಿ( Bangalore) ದರ ಎಷ್ಟಿದೆ?
ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿಇಂದು ಕೂಡಾ ನಿನ್ನೆಯಷ್ಟೇ ದರ ಮುಂದುವರೆದಿದೆ.. 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 45,700 ರೂ.ಇದ್ದು, 24 ಕ್ಯಾರಟ್ 10 ಗ್ರಾಂ ಚಿನ್ನದ ದರ 49,850ರೂ.ಇದೆ. ಇನ್ನು ಕಳೆದ ಕೆಲವು ದಿನಗಳಿಂದ ಇಳಿಕೆಯತ್ತ ಮುಖ ಮಾಡಿದ್ದ ಬೆಳ್ಳಿ ದರದಲ್ಲಿಇಂದು ಯಾವುದೇ ಬದಲಾವಣೆಯಾಗಿಲ್ಲ. ಒಂದು ಕೆ.ಜಿ.ಬೆಳ್ಳಿಗೆ 62,200ರೂ. ಆಗಿದೆ.
ದೆಹಲಿಯಲ್ಲಿ (Delhi) ಹೇಗಿದೆ?
ದೆಹಲಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,850ರೂ.ಆಗಿದ್ದು 24 ಕ್ಯಾರಟ್ 10 ಗ್ರಾಂ ಚಿನ್ನದ ದರದಲ್ಲಿ ಕೂಡ 1ಯಾವುದೇ ಬದಲಾವಣೆಯಾಗದೇ 52,200 ರೂ. ಆಗಿದೆ. ಅತ್ತ ಒಂದು ಕೆ.ಜಿ.ಬೆಳ್ಳಿ ದರದಲ್ಲೂ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ದರ 62,200ರೂ. ಆಗಿದೆ.
ಮುಂಬೈನಲ್ಲಿ(Mumbai) ಎಷ್ಟಿದೆ ದರ?
ಮುಂಬೈನಲ್ಲಿ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಹೌದು 22 ಕ್ಯಾರಟ್ 10 ಗ್ರಾಂ ಚಿನ್ನದಲ್ಲಿ 10 ರೂಪಾಯಿ ಏರಿಕೆಯಾಗಿ, 47,680 ರೂ.ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ದರ 48,680ರೂ ಆಗಿದೆ, ಆದರೆ ಬೆಳ್ಳಿ ದರದಲ್ಲಿ ಮಾತ್ರ ಯಾವುದೇ ಬದಲಾವಣೆಯಾಗಿಲ್ಲ. ಒಂದು ಕೆಜಿ ಬೆಳ್ಳಿ ದರ 62,200 ರೂಪಾಯಿ ಇದೆ.
ಚೆನ್ನೈಯಲ್ಲಿ(Chennai) ದರ ಹೀಗಿದೆ
ಚೆನ್ನೈಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ ಇಂದು 45,940ರೂ.ಇದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ದರವೂ ಏರಿಕೆಯಾಗದೇ, 50,120ರೂಪಾಯಿಯೇ ಮುಂದುವರೆದಿದೆ. ಒಂದು ಕೆ.ಜಿ. ಬೆಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿ ಒಂದು ಕೆಜಿಗೆ 66,000 ರೂಪಾಯಿ ಆಗಿದೆ.
