* ಚಿನ್ನ, ಬೆಳ್ಳಿ ದರ ಹೇಗಿದೆ?* ಕೊರೋನಾ ಮೂರನೇ ಅಲೆ ಮಧ್ಯೆ ಇಳಿಕೆಯಾಗಿದ್ಯಾ ಚಿನ್ನದ ದರ* ಹೀಗಿದೆ ಜನವರಿ 04, 2022 ರ ಗೋಲ್ಡ್‌ ಹಾಗೂ ಸಿಲ್ವರ್ ರೇಟ್

ಬೆಂಗಳೂರು(ಜ.04): ಹೊಸ ವರ್ಷ ಆರಂಭವಾಗಿದೆ. ಇಡೀ ವಿಶ್ವವೇ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿದೆ. ಹೀಗಿರುವಾಗಲೇ ಅತ್ತ ಶುಭ ಕಾರ್ಯಗಳೂ ಆರಂಭವಾಗುವ ಸೂಚನೆ ಲಭಿಸಿದೆ. ಶುಭ ಕಾರ್ಯ ಎಂದಾಗ ಚಿನ್ನ, ಬೆಳ್ಳಿ ಖರೀದಿ ಸರ್ವೇ ಸಾಮಾನ್ಯ. ಅದರಲ್ಲೂ ಈ ಬಂದಾಗ ಹೆಣ್ಮಕ್ಕಳ ಸೌಂದರ್ಯ ಮತ್ತಷ್ಟು ಹೆಚ್ಚಿಸುತ್ತದೆ. ಆದರೆ ಹೊಸ ವರ್ಷ, ಶುಭ ಕಾರ್ಯಗಳ ನಡುವೆ ಸದ್ಯ ಕೊರೋನಾ ಭಾರೀ ಸದ್ದು ಮಾಡುತ್ತಿದೆ. ಹೀಗಿರುವಾಗಲೇ ಅತ್ತ ಚಿನ್ನದ ಬೆಲೆಯೂ ಏರಿಳಿತದ ಆಟ ಆರಂಭಿಸಿದೆ. ಹೌದು ಕಳೆದ ಕೆಲ ದಿನಗಳಿಂದ ಬಂಗಾರ ಬೆಲೆ ಏರಿಕೆ, ಇಳಿಕೆ ಆಟವಾಡುತ್ತಿದೆ. ಹೀಗಿದ್ದರೂ ಕಳೆದೆರಡು ದಿನಗಳಿಂದ ಚಿನ್ನದ ಮೌಲ್ಯ ಕುಸಿಯುತ್ತಿರುವುದು ಗ್ರಾಹಕರ ಮೊಗದಲ್ಲಿ ಸಂತಸ ಮೂಡಿಸಿದೆ. ಹೌದು ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಸತತ ಎರಡನೇ ದಿನ ಕುಸಿತ ಕಂಡಿದೆ. 

"

ಬೆಂಗಳೂರಿನಲ್ಲಿ( Bangalore) ದರ ಎಷ್ಟಿದೆ?

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಚಿನ್ನದ ದರ ಇಳಿಕೆಯಾಗಿದೆ. 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 44,900 ರೂಪಾಯಿ ಆದರೆ, 24 ಕ್ಯಾರಟ್ 10 ಗ್ರಾಂ ಚಿನ್ನದ ದರ 48,990ರೂ.ಇದೆ. ಇನ್ನು ಅತ್ತ ಒಂದು ಕೆ. ಜಿ ಬೆಳ್ಳಿ ದರ 61,700 ರೂಪಾಯಿ ಆಗಿದೆ.

ದೆಹಲಿಯಲ್ಲಿ (Delhi) ಹೇಗಿದೆ?

ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಚಿನ್ನ ಇಳಿಕೆಯಾಗಿದ್ದು, 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,390 ರೂ.ಆಗಿದ್ದು 24 ಕ್ಯಾರಟ್ 10 ಗ್ರಾಂ ಚಿನ್ನದ ದರ 51,700 ರೂ. ಆಗಿದೆ. ಅತ್ತ ಒಂದು ಕೆ.ಜಿ.ಬೆಳ್ಳಿ ದರ 61,700 ರೂ. ಆಗಿದೆ. 

ಮುಂಬೈನಲ್ಲಿ(Mumbai) ಎಷ್ಟಿದೆ ದರ?

ಮುಂಬೈನಲ್ಲಿ ಮಾತ್ರ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಹೌದು 22 ಕ್ಯಾರಟ್ 10 ಗ್ರಾಂ ಚಿನ್ನದ ದರ, 47,260 ರೂ.ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ದರ 49,260ರೂ ಆಗಿದೆ, ಆದರೆ ಬೆಳ್ಳಿ ದರದಲ್ಲಿ ಮಾತ್ರ ಯಾವುದೇ ಬದಲಾವಣೆಯಾಗಿಲ್ಲ. ಒಂದು ಕೆಜಿ ಬೆಳ್ಳಿ ದರ 61,700 ರೂಪಾಯಿ ಇದೆ. 

ಚೆನ್ನೈಯಲ್ಲಿ(Chennai) ದರ ಹೀಗಿದೆ

ಚೆನ್ನೈಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ದರ ಇಂದು 45,170ರೂ. ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ದರ 49,230 ರೂಪಾಯಿಯಾದರೆ, ಒಂದು ಕೆ.ಜಿ. ಬೆಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿ ಒಂದು ಕೆಜಿಗೆ 65,700 ರೂಪಾಯಿ ಆಗಿದೆ. 

ಒಂದು ದಿನ ಕುಸಿಯುವ ಚಿನ್ನದ ದರ ಮರುದಿನವೇ ಏರಿಕೆಯ ಹಾದಿ ಹಿಡಿರುವುದು ಗ್ರಾಹಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹೀಗಿರುವಾಗ ಚಿನ್ನ ಖರೀದಿಸಲು ಇದು ಉತ್ತಮ ಸಮಯವಾ? ಅಥವಾ ಇನ್ನೂ ಕೊಂಚ ಕಾಯುವುದು ಸರಿನಾ? ಎಂಬ ಪ್ರಶ್ನೆಯೂ ಈ ಗೊಂದಲಕ್ಕೆ ಕಾರಣವಾಗಿದೆ. ಹೀಗಿದ್ದರೂ ಇಂದು ಚಿನ್ನ, ಬೆಳ್ಳಿ ದರದಲ್ಲಿ ಏರಿಕೆಯಾಗದಿರುವುದು ಗ್ರಾಹಕರಿಗೆ ಕೊಂಚ ಸಮಾಧಾನ ಕೊಟ್ಟಿದೆ. ಹೌದು ಇಂದು ಮುಂಬೈ ಹೊರತುಪಡಿಸಿ ಉಳಿದೆಡೆ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೀಗಿದ್ದರೂ ಒಮಿಕ್ರಾನ್ ಆತಂಕದ ಮಧ್ಯೆ ಚಿನ್ನದ ದರ ಕುಸಿಯಲಿದೆ ಎಂಬ ಮಾತುಗಳು ಆರ್ಥಿಕ ತಜ್ಞರದ್ದಾಗಿದೆ.