Asianet Suvarna News Asianet Suvarna News

Gold Rate:ಇಳಿಕೆಯತ್ತ ಮುಖ ಮಾಡಿದ ಚಿನ್ನ,ಬೆಳ್ಳಿ ದರ

ಕಳೆದ ಕೆಲವು ದಿನಗಳಿಂದ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ ಕಂಡುಬಂದಿದೆ. ಇಂದು (ಡಿ.1) ಕೂಡ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸೋ ಯೋಚನೆಯಲ್ಲಿರೋರು ಮುಂದುವರಿಯಬಹುದು.

Check gold, Silver rate in major cities of India Dec 1 2021
Author
Bangalore, First Published Dec 1, 2021, 12:15 PM IST
  • Facebook
  • Twitter
  • Whatsapp

ಬೆಂಗಳೂರು (ಡಿ.1): ಎಷ್ಟೋ ದಿನಗಳಿಂದ ಚಿನ್ನ (Gold) ಖರೀದಿಸೋ ಯೋಚನೆಯಲ್ಲಿರೋರಿಗೆ ಈಗ ಕಾಲ ಕೂಡಿಬಂದಿದೆ. ಕಳೆದ ಕೆಲವು ದಿನಗಳಿಂದ ಚಿನ್ನ(Gold) ಹಾಗೂ ಬೆಳ್ಳಿ(Silver) ದರದಲ್ಲಿ (Price) ಇಳಿಕೆ ಕಂಡುಬಂದಿದೆ. ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ಹಾಗೂ ಚಿನ್ನದ ಬೆಲೆಗಳು ಇಂದು(ಡಿ.1) ಕೂಡ ಇಳಿಕೆ ದಾಖಲಿಸಿವೆ. ಈ ವರ್ಷದ ಜನವರಿಯಿಂದ ಏರಿಕೆಯತ್ತ ಮುಖ ಮಾಡಿದ್ದ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ ಕಂಡುಬರುತ್ತಿರೋದು ಗ್ರಾಹಕರಿಗೆ ಸಂತಸ ಮೂಡಿಸಿದೆ. ಜಗತ್ತಿನಾದ್ಯಂತ ಓಮಿಕ್ರಾನ್ (Omicron) ವೈರಸ್ (Virus) ಭೀತಿ ಹೆಚ್ಚಿದ್ದು, ಇದು ಚಿನ್ನದ ಬೇಡಿಕೆ ಮೇಲೂ ಪರಿಣಾಮ ಬೀರೋ ನಿರೀಕ್ಷೆಯಿದೆ. ಕೊರೋನಾ ಕಾಣಿಸಿಕೊಂಡ ಬಳಿಕ  ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಗಣನೀಯ ಏರಿಕೆ ಕಂಡುಬಂದಿತ್ತು. ದೇಶದ ಪ್ರಮುಖ ನಗರಗಳಲ್ಲಿ ಇಂದು (ಡಿ.1) ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ? 

ಬೆಂಗಳೂರಿನಲ್ಲಿ ದರ ಎಷ್ಟಿದೆ?
ದೇಶದ ಇತರ ನಗರಗಳಿಗೆ ಹೋಲಿಸಿದ್ರೆ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಿನ ಇಳಿಕೆ ಕಂಡುಬಂದಿದೆ. 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ನಿನ್ನೆಗಿಂತ ಇಂದು 250ರೂ. ಇಳಿಕೆಯಾಗಿದೆ. ಇಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 44,600ರೂ.ಇದ್ರೆ ನಿನ್ನೆ 44,850ರೂ.ಇತ್ತು. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ ನಿನ್ನೆ 48,930 ರೂ.ಇದ್ದು,ಇಂದು 48,650 ರೂ.ಆಗಿದೆ. ಅಂದ್ರೆ ನಿನ್ನೆಗಿಂತ ಇಂದು 280ರೂ. ಇಳಿಕೆಯಾಗಿದೆ. ಇನ್ನು ಬೆಳ್ಳಿ ದರದಲ್ಲಿ ಕೂಡ ಇಳಿಕೆ ಕಂಡುಬಂದಿದೆ. ನಿನ್ನೆಗಿಂತ ಇಂದು 200ರೂ. ಇಳಿಕೆಯಾಗಿದೆ. ಒಂದು ಕೆ.ಜಿ. ಬೆಳ್ಳಿಗೆ ನಿನ್ನೆ 61,900ರೂ.ಇತ್ತು. ಆದ್ರೆ ಇಂದು 61,700ರೂ. ಆಗಿದೆ. 

ಬೆಲೆ ಏರಿಕೆ ಬಿಸಿ, ಗ್ಯಾಸ್‌ ಸಿಲಿಂಡರ್‌ ಬೆಲೆ ಮತ್ತೆ 103.50ರೂ. ಹೆಚ್ಚಳ!

ದೆಹಲಿಯಲ್ಲಿ ಹೇಗಿದೆ?
ದೆಹಲಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಇಂದು 46,990ರೂ.ಆಗಿದ್ದು, ನಿನ್ನೆ47,000ರೂ.ಇತ್ತು. ಅಂದ್ರೆ ನಿನ್ನೆಗಿಂತ ಇಂದು 10ರೂ.ಇಳಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ದರದಲ್ಲಿ ಕೂಡ 10ರೂ.ಇಳಿಕೆಯಾಗಿದೆ. ನಿನ್ನೆ 51,270 ರೂ. ಇತ್ತು,ಇಂದು 51,260 ರೂ. ಆಗಿದೆ. ಬೆಳ್ಳಿ ದರದಲ್ಲಿ 200ರೂ.ಇಳಿಕೆಯಾಗಿದೆ. ನಿನ್ನೆ ಒಂದು ಕೆ.ಜಿ. ಬೆಳ್ಳಿಗೆ 61,900ರೂ.ಇತ್ತು. ಆದ್ರೆ ಇಂದು 61,700ರೂ. ಆಗಿದೆ. 

ಮುಂಬೈನಲ್ಲಿ ಎಷ್ಟಿದೆ ದರ?
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ ನಿನ್ನೆ 47,120ರೂ.ಇದ್ದು,ಇಂದು 47,110ರೂ. ಇದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ದರ ನಿನ್ನೆ48,120 ರೂ. ಇತ್ತು,ಇಂದು  48,110ರೂ. ಇದೆ. ಒಂದು ಕೆ.ಜಿ. ಬೆಳ್ಳಿಗೆ ನಿನ್ನೆ 61,900 ರೂ. ಇತ್ತು.ಆದ್ರೆ ಇಂದು 61,700ರೂ. ಆಗಿದೆ. ಅಂದ್ರೆ ನಿನ್ನೆಗಿಂತ ಇಂದು 200 ರೂ. ಇಳಿಕೆಯಾಗಿದೆ.

ಪೆಟ್ರೋಲ್‌, ಡೀಸೆಲ್‌ ಸುಂಕದಿಂದ ಕೇಂದ್ರ ಸರ್ಕಾರಕ್ಕೆ ಡಬಲ್‌ ಆದಾಯ!

ಚೆನ್ನೈಯಲ್ಲಿ ದರ ಹೀಗಿದೆ
ಚೆನ್ನೈಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ ಇಂದು 44,880ರೂ. ಇದೆ. ನಿನ್ನೆ 45,150ರೂ. ಇತ್ತು. ಅಂದ್ರೆ ನಿನ್ನೆಗಿಂತ ಇಂದು 270ರೂ.ಇಳಿಕೆಯಾಗಿದೆ.  24 ಕ್ಯಾರಟ್ 10 ಗ್ರಾಂ ಚಿನ್ನದ ದರದಲ್ಲಿ ಕೂಡ ನಿನ್ನೆಗಿಂತ ಇಂದು 300ರೂ. ಇಳಿಕೆಯಾಗಿದೆ. ನಿನ್ನೆ 49,260 ರೂ.ಇತ್ತು,ಇಂದು 48,960 ರೂ. ಆಗಿದೆ. ಒಂದು ಕೆ.ಜಿ. ಬೆಳ್ಳಿಗೆ ನಿನ್ನೆ 66,500 ರೂ. ಇತ್ತು. ಆದ್ರೆ ಇಂದು 66,300ರೂ. ಆಗಿದೆ.ಅಂದ್ರೆ 200ರೂ.ಇಳಿಕೆಯಾಗಿದೆ.

"

 

Follow Us:
Download App:
  • android
  • ios