Asianet Suvarna News Asianet Suvarna News

Petrol Rate:ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು,ದೆಹಲಿ ಹೊರತುಪಡಿಸಿ ದೇಶದ ಪ್ರಮುಖ ನಗರಗಳಲ್ಲಿ ಸತತ 30 ದಿನಗಳಿಂದ ಯಾವುದೇ ಬದಲಾವಣೆಯಾಗಿಲ್ಲ.

Check todays fuel prices in major cities of Karnataka Dec 4 2021 anu
Author
Bangalore, First Published Dec 4, 2021, 10:46 AM IST

ಬೆಂಗಳೂರು (ಡಿ.4): ಈ ವರ್ಷದ ಕೊನೆಯ ತಿಂಗಳ ಆರಂಭದಲ್ಲಿ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ದರ (Price) ಇಳಿಕೆ ದಾಖಲಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ದೆಹಲಿ (Delhi) ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ (VAT) ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜ್ಯಧಾನಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್ ಗೆ 8ರೂ.ಇಳಿಕೆಯಾಗಿದೆ. ಆದ್ರೆ ಬೇರೆ ಯಾವ ರಾಜ್ಯಗಳಲ್ಲಿಯೂ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ಇಳಿಕೆಯಾದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಾದ್ರೂ ಇಂಧನ ದರ ತಗ್ಗಬಹುದು ಎಂಬ ಅಭಿಪ್ರಾಯವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ. ಬೆಂಗಳೂರು (Bangalore) ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದ್ದು,ಇಂದು (ಡಿ.4) ಕೂಡ ಯಾವುದೇ ಬದಲಾವಣೆಯಾಗಿಲ್ಲ. ರಾಜ್ಯದ ಪ್ರಮುಖ ನಗರಗಳಲ್ಲಿ (Cities) ಇಂದು (ಡಿ.4) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bangalore) ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದ್ದು, ಕಳೆದ 11 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubli) ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಕೆಲವೇ ಕೆಲವು ಪೈಸೆಗಳಷ್ಟು ಏರಿಕೆ ಹಾಗೂ ಇಳಿಕೆ ಕಂಡುಬರುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ನಿನ್ನೆ 0.09 ರೂ. ಏರಿಕೆಯಾಗಿದ್ರೆ ಇಂದು 0.09 ರೂ.ಇಳಿಕೆಯಾಗಿದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದ್ದು, ಹಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ(Mysore) ಪೆಟ್ರೋಲ್ ದರದಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ. ಲೀಟರ್ ಗೆ 100.08ರೂ.ಇದೆ. ಡೀಸೆಲ್ ದರ ಇಂದು ಲೀಟರ್ ಗೆ 84.56ರೂ.ಇದೆ.ಬಿಸಿಲ ನಗರಿ ಕಲಬುರಗಿಯಲ್ಲಿ(Kalburgi) ಪೆಟ್ರೋಲ್ ಗೆ 101.28ರೂ. ಹಾಗೂ ಡೀಸೆಲ್ ಗೆ 84.77ರೂ.ಇದೆ. ಪೆಟ್ರೋಲ್ ದರದಲ್ಲಿ ನಿನ್ನೆಗಿಂತ ೦.77 ಹಾಗೂ ಡೀಸೆಲ್ ದರದಲ್ಲಿ0.69ರೂ. ಇಳಿಕೆಯಾಗಿದೆ.

Mobile Payments: ಭಾರತದಲ್ಲಿಎಟಿಎಂ ವಿತ್ ಡ್ರಾಕ್ಕಿಂತ ಮೊಬೈಲ್ ಪಾವತಿಯೇ ಹೆಚ್ಚು: ಪ್ರಧಾನಿ

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.

ಜ.1ರಿಂದ ಎಟಿಎಂ ಹಣ ವಿತ್ ಡ್ರಾ ಶುಲ್ಕ ಹೆಚ್ಚಳ

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ.

"

Follow Us:
Download App:
  • android
  • ios