ಕೊರೋನಾ ರೂಪಾಂತರಿ ಒಮಿಕ್ರಾನ್  ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲೆ ಪರಿಣಾಮ ಬೀರಿದಂತೆ ಕಾಣುತ್ತಿಲ್ಲ.ಇಂದು ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.

ಬೆಂಗಳೂರು (ಡಿ.9): ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ (Cities) ಪೆಟ್ರೋಲ್ (Petrol) ಹಾಗೂ ಡೀಸೆಲ್(Diesel) ದರ(Price) ಇಂದು (ಡಿ.9) ಕೂಡ ಯಥಾಸ್ಥಿತಿ ಕಾಯ್ದುಕೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ(Crude Oil) ಬೆಲೆ ನಿನ್ನೆ (ಡಿ.8) ಏರಿಕೆಯಾಗಿತ್ತು. ಡಿಸೆಂಬರ್ ಮೊದಲ ದಿನದಿಂದ ಈ ತನಕ ಕಚ್ಚಾ ತೈಲದ ಬೆಲೆಯಲ್ಲಿ ಶೇ.10ರಷ್ಟು ಏರಿಕೆ ಕಂಡುಬಂದಿದೆ. ಆದ್ರೆ ದೇಶೀಯ ಮಾರುಕಟ್ಟೆಯಲ್ಲಿ ಮಾತ್ರ ಇಂಧನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮೇಲಿನ ಅಬಕಾರಿ ಸುಂಕವನ್ನು (Excise duty)ತಗ್ಗಿಸಿದ ಕಾರಣ ನವೆಂಬರ್ 4ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿತ್ತು. ಇದಕ್ಕೂ ಮುನ್ನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರಿ ವಾಹನಸವಾರರ ನಿದ್ದೆಗೆಡಿಸಿತ್ತು. ಹೀಗಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ತುಸು ಇಳಿಕೆ ಕಂಡಿದ್ದು ಜನರಿಗೆ ಸ್ವಲ್ಪ ಮಟ್ಟಿಗೆ ಸಮಾಧಾನ ಮೂಡಿಸಿತ್ತು. ಆದ್ರೆ ದೇಶದಲ್ಲಿ ಅಂದು ಇಳಿಕೆ ಕಂಡ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಈ ತನಕ ಯಾವುದೇ ಏರಿಳಿತ ಕಂಡುಬಂದಿಲ್ಲ. ದೆಹಲಿಯಲ್ಲಿ ಮಾತ್ರ ಅಲ್ಲಿನ ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ (VAT)ಕಡಿತಗೊಳಿಸಿದ ಕಾರಣ ಬೆಲೆಯಲ್ಲಿ ಲೀಟರ್ ಗೆ 8ರೂ. ಇಳಿಕೆಯಾಗಿತ್ತು. ರಾಜ್ಯದ ಪ್ರಮುಖ ನಗರಗಳಲ್ಲಿ (Cities)ಇಂದು (ಡಿ.9) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ? 

Add Asianetnews Kannada as a Preferred SourcegooglePreferred

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದ್ದು, ಕಳೆದ 16 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ(Mysore)ಪೆಟ್ರೋಲ್ ದರ ಲೀಟರ್ ಗೆ 100.08ರೂ. ಹಾಗೂ ಡೀಸೆಲ್ ದರ ಲೀಟರ್ ಗೆ 84.56ರೂ.ಇದೆ. ಕಲಬುರಗಿಯಲ್ಲಿ(Kalburgi)ಪೆಟ್ರೋಲ್ ಗೆ 100.28ರೂ. ಹಾಗೂ ಡೀಸೆಲ್ ಗೆ 84.77ರೂ.ಇದೆ. 

Bombay Stock Exchange: ಒಮಿಕ್ರಾನ್ ಭೀತಿಯಿಂದ ಹೊರಬಂದ ಷೇರುಮಾರುಕಟ್ಟೆ, ಮತ್ತೆ ಪುಟಿದ್ದೆದ್ದ ಸೆನ್ಸೆಕ್ಸ್

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Repo Rate:ಸತತ 9ನೇ ಬಾರಿ ರೆಪೋ, ರಿವರ್ಸ್ ರೆಪೋ ದರ ಬದಲಾಯಿಸದ RBI

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"