Asianet Suvarna News Asianet Suvarna News

Karnataka Budget 2022-23: ನಿರೀಕ್ಷೆಯಂತೆಯೇ ಬಜೆಟ್‌ನಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್


ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಬಜೆಟ್ 2022-23 ಘೋಷಣೆ ಮಾಡಿದ್ದು,  ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಗೌರವ ಧನ ಘೋಷಣೆ ಮಾಡಲಾಗಿದೆ.

cm basavaraj bommai  announces increase in remuneration for ASHA and Anganwadi workers gow
Author
Bengaluru, First Published Mar 4, 2022, 2:41 PM IST

ಬೆಂಗಳೂರು(ಮಾ.4): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj bommai) ಇಂದು ತಮ್ಮ ಚೊಚ್ಚಲ ಬಜೆಟ್​ ಅನ್ನು  ಮಂಡಿಸಿದ್ದು, ನಿರೀಕ್ಷೆಯಂತೆಯೇ ಅಂಗನವಾಡಿ ಕಾರ್ಯಕರ್ತೆಯರು (Anganwadi Workers)ಮತ್ತು ಅಂಗನವಾಡಿ ಸಹಾಯಕಿಯರ (Anganwadi helper) ವೇತನ ಹಾಗೂ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ.  ಮಾತ್ರವಲ್ಲ ಆಶಾ ಕಾರ್ಯಕರ್ತರು (asha workers), ಗ್ರಾಮ ಸಹಾಯಕರು ಮತ್ತು ಬಿಸಿಯೂಟ ತಯಾರಕರಿಗೂ  ಗೌರವ ಧನ ಹೆಚ್ಚಿಸಲಾಗಿದೆ. 

20 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ 1,500 ರೂ. 15 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ 1,200 ರೂ. ಹಾಗೂ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ರೂ. ಗೌರವಧನ ಹೆಚ್ಚಳ ಮಾಡಲಾಗಿದೆ.

Karnataka Education budget 2022: ಶೈಕ್ಷಣಿಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸರಕಾರಿ ಶಾಲೆಗಳ ಅಭಿವೃದ್ದಿಗೆ 500 ಕೋಟಿ ಘೋಷಣೆ

ಇದರ ಜೊತೆಗೆ ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ ಮತ್ತು ಬಿಸಿಯೂಟ ತಯಾರಕರಿಗೆ ತಲಾ 1,000 ಗೌರವ ಧನ ಹೆಚ್ಚಳ ಮಾಡಲಾಗಿದೆ. 

ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ 30,000 ಮತ್ತು 50,000 ಇಡಿಗಂಟು ನೀಡುವುದಾಗಿ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಜೊತೆಗೆ ವಾಸಿ ಗೈಡ್‌ಗಳಿಗೆ ಮಾಸಿಕ 2,000 ಪ್ರೋತ್ಸಾಹ ಗೌರವಧನ ನೀಡಲಾಗುವುದು ಎಂದು  ಹೇಳಿದ್ದಾರೆ.

ಕರ್ನಾಟಕ ಬಜೆಟ್ ಲೈವ್ ಅಪ್ಡೇಟ್ ಇಲ್ಲಿದೆ.

ಸತ್ಯಾಗ್ರಹ ನಡೆಸಿದ್ದ ಕಾರ್ಯಕರ್ತೆಯರು: ವೇತನ ಹಾಗೂ ಭತ್ಯೆ ಹೆಚ್ಚಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ನಡೆಸಿದ್ದರು. ರಾಜ್ಯ ಸರ್ಕಾರದ ನಿಯಮಾವಳಿ ಪ್ರಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 18 ಸಾವಿರ ರು.ಕನಿಷ್ಠ ವೇತನ ಕೊಡಬೇಕು. ಆದರೆ, ಈಗಲೂ 10 ಸಾವಿರ ರೂ.ಗಳಿಗೆ ದುಡಿಸಲಾಗುತ್ತಿದೆ. ರಾಜ್ಯದಲ್ಲಿ 62 ಸಾವಿರ ಅಂಗನವಾಡಿಗಳಲ್ಲಿ 1.24 ಲಕ್ಷ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ. 

2017ರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸತ್ಯಾಗ್ರಹ ನಡೆಸಿದಾಗ ಸರ್ಕಾರ ವೇತನ ಹೆಚ್ಚಿಸುವ ಆಶ್ವಾಸನೆ ನೀಡಿತ್ತು. ಅದನ್ನು ನಂಬಿ ನಾವು ಹೋರಾಟ ನಿಲ್ಲಿಸಿದ್ದೆವು. ಇದಾಗಿ ಐದು ವರ್ಷವಾದರೂ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಕೋವಿಡ್‌ ಕಾರಣದಿಂದಾಗಿ ಕಳೆದೆರಡು ವರ್ಷ ಸುಮ್ಮನಿದ್ದೆವು. ಈ ಬಾರಿ ಅನಿವಾರ್ಯವಾಗಿ ಬೀದಿಗಿಳಿದಿದ್ದೇವೆ.  ಎಂದು ಪ್ರತಿಭಟನಾನಿರತರು ಹೇಳಿಕೆ ನೀಡಿದ್ದರು. 2006ಕ್ಕೂ ಮೊದಲು ಸೇರ್ಪಡೆಯಾದವರು, ನಿವೃತ್ತರಾದವರಿಗೆ ಪಿಂಚಣಿ ಸವಲತ್ತು ನೀಡಬೇಕು ಎಂದು ಒತ್ತಾಯಿಸಿದರು.

KARNATAKA BUDGET 2022: ಕೃಷಿ ಕ್ಷೇತ್ರಕ್ಕೆ ಬಂಪರ್, 33,700 ಕೋಟಿ ಘೋಷಣೆ, ರೈತರಿಗೆ ಏನೆಲ್ಲಾ ಸಿಕ್ಕಿದೆ?

ಈ ಹಿಂದೆ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾಗ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ವಾಗ್ದಾನ  ನೀಡಿತ್ತು. ಆದರೆ ಪರಿಸ್ಥಿತಿಯಲ್ಲಿ ಯಾವುದೆ ಬದಲಾವಣೆ ಆಗದ ಕಾರಣ ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದರು. ಮೈಸೂರು ಜಿಲ್ಲೆ ದೊಡ್ಡ ಮಾರಗೌಡನಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ(Anganwadi Worker) ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೋರ್ವ ಅಂಗನವಾಡಿ ಕಾರ್ಯಕರ್ತೆ ಆತ್ಮಹತ್ಯೆ ಪ್ರಯತ್ನ ಮಾಡಿದ್ದಳು .ಅಂಗನವಾಡಿ ಕಾರ್ಯಕರ್ತೆಯೊಬ್ಬರು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು  ಜಿಲ್ಲೆಯಿಂದ ವರದಿಯಾಗಿತ್ತು . ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇವರ ಹೋರಾಟಕ್ಕೆ ಫಲ ಸಿಕ್ಕಿದೆ  ಗೌರವ ಧನ ಹೆಚ್ಚಿಸಲಾಗಿದೆ.

Karnataka Budget 2022: ಕರ್ನಾಟಕದ ಅಭಿವೃದ್ಧಿಗಾಗಿ ಯಾವ ಇಲಾಖೆಗೆ ಎಷ್ಟು ಅನುದಾನ?

 

Follow Us:
Download App:
  • android
  • ios