Asianet Suvarna News Asianet Suvarna News

Karnataka Budget 2022:ಕಲ್ಯಾಣ ಕರ್ನಾಟಕಕ್ಕೆ ಹಲವು ಯೋಜನೆಗಳು, ಅಂಜನಾದ್ರಿ ಬೆಟ್ಟಕ್ಕೆ ಬಂಪರ್

* ಕಲ್ಯಾಣ ಕರ್ನಾಟಕಕ್ಕೆ ಹಲವು ಯೋಜನೆಗಳು ಘೋಷಣೆ
* ಕರ್ನಾಟಕ ಬಜೆಟ್‌ನಲ್ಲಿ  ಅಂಜನಾದ್ರಿ ಬೆಟ್ಟಕ್ಕೆ ಬಂಪರ್
* ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 3000 ಕೋಟಿ ರೂ. ಅನುದಾನ

CM Basavaraj Bommai announces several projects for kalyana karnataka 2022-23 Budget rbj
Author
Bengaluru, First Published Mar 4, 2022, 3:32 PM IST

ಬೆಂಗಳೂರು, (ಮಾ.04): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು 2022-23ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ (karnataka Budget 2022-23)  ಹಿಂದುಳಿದ ಭಾಗ ಎಂದೇ ಹಣೆಪಟ್ಟಿ ಕಟ್ಟಿರುವ ಕಲ್ಯಾಣ ಕರ್ನಾಟಕ (kalyana karnataka) (ಹೈದರಾಬಾದ್ ಕರ್ನಾಟಕ) ಭಾಗಕ್ಕೆ ಅನೇಕ ಕೊಡುಗೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ  ಕೊಪ್ಪಳದ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲು ನೀಡಲಾಗಿದೆ.

ಹೌದು...  ತಮ್ಮ ಚೊಚ್ಚಲ ಬಜೆಟ್‌ನಲ್ಲಿ ನಾವಿನ್ಯತೆಯುಳ್ಳ ಕಲ್ಯಾಣ ಕರ್ನಾಟಕ ಭಾಗದ 25 ನವೋದ್ಯಮಗಳನ್ನು ಉತ್ತೇಜಿಸಲು Elevate Kalyana Karnataka ಕಾರ್ಯಕ್ರಮವನ್ನು ಘೋಷಣೆ ಮಾಡಿದ್ದು, ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ಹಿನ್ನೆಲೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 3000 ಕೋಟಿ ರೂ. ಅನುದಾನ ನೀಡಿದ್ದಾರೆ.

Karnataka Budget 2022 Live: ತೆರಿಗೆ ಬರೆ ಇಲ್ಲ, ವಾಣಿಜ್ಯ ತೆರಿಗೆ ಹೆಚ್ಚಳ ಪ್ರಸ್ತಾಪವೂ ಇಲ್ಲ! 

ಕಲ್ಯಾಣ ಕರ್ನಾಟಕದ ಶಿಕ್ಷಣ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಯೋಜನೆಗಳಿಗೆ 1,500 ಕೋಟಿ ರೂ. ಹಾಗೂ ಮೈಕ್ರೋ ಯೋಜನೆಗಳಿಗೆ 1,500 ಕೋಟಿ ರೂ. ಮೀಸಲಿಡಲಾಗಿದೆ. ಇನ್ನು, ಕೊಪ್ಪಳ, ರಾಯಚೂರು ಜಿಲ್ಲೆಯ ರೈತರ ಬಹುದಿನದ ಕನಸಾಗಿದ್ದ ಕೊಪ್ಪಳದ ನವಲಿ ಬಳಿ ಸಮತೋಲನ ಜಲಾಶಯಕ್ಕೆ 1,000 ಕೋಟಿ ರೂ. ಮೀಸಲಿಡಲಾಗಿದೆ. 

ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಹೈಟೆಕ್‌ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದು, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ನಾಳದಲ್ಲಿ ಬೊಂಬೆ, ಶಹಾಪುರದಲ್ಲಿ ಸೀರೆ ಮೈಕ್ರೋಕ್ಲಸ್ಟರ್‌ ಅಭಿವೃದ್ಧಿ ಮಾಡುವುದಾಗಿ ಎಂದಿದ್ದಾರೆ. 

ಕಲ್ಯಾಣ ಕರ್ನಾಟಕಕ್ಕೆ ಘೋಷಿಸಿದ ಕೊಡುಗೆಗಳು
* ಬೀದರ್‌ ಮತ್ತು ಕೊಪ್ಪಳದಲ್ಲಿ ವಿನೂತನ ಮಾದರಿಯ ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ
* ಕಲಬುರಗಿಯಲ್ಲಿ 1000 ಸಾಮರ್ಥ್ಯದ ಬಹುಮಹಡಿಯ ದೀನ್‌ದಯಾಳ್‌ ಉಪಾಧ್ಯಯ ಸೌಹಾರ್ದ ವಿದ್ಯಾರ್ಥಿನಿಲಯ ಸಮುಚ್ಛಯ ನಿರ್ಮಾಣ
* 186 ಕೋಟಿ ರೂ. ವೆಚ್ಚದಲ್ಲಿ ರಾಯಚೂರಿನಲ್ಲಿ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ನಿರ್ಮಾಣ
* ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಕಾರ್ಯಸಾಧ್ಯತಾ ವರದಿ ತಯಾರಿ
* ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಟೂರಿಸಂ ಸರ್ಕ್ಯೂಟ್‌ ಅಭಿವೃದ್ಧಿಗೆ ಕ್ರಮ
* ಕೊಪ್ಪಳದ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲು
* ಬೀದರ್‌ ಹಾಗೂ ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಕ್ರಮ
* ಹೊಸಪೇಟೆ, ಬಳ್ಳಾರಿ, ಬೀದರ್‌, ಯಾದಗಿರಿಯಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣ
* ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 3000 ಕೋಟಿ ರೂ. ಮೀಸಲಿಡಲಾಗಿದೆ.
* ಕೊಪ್ಪಳದ ನವಲಿ ಬಳಿ ಸಮತೋಲನ ಜಲಾಶಯಕ್ಕೆ 1,000 ಕೋಟಿ ರೂ. ಮೀಸಲು.
* ಕಲಬುರಗಿಯಲ್ಲಿ ಹೈಟೆಕ್‌ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ

Follow Us:
Download App:
  • android
  • ios