ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣ, ಸ್ವ ಉದ್ಯೋಗ ಸೃಷ್ಟಿಸುವ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. ಮುಸ್ಲಿಮರಿಗೆ ಮಾತ್ರವಲ್ಲದೆ, ಇತರ ಅಲ್ಪಸಂಖ್ಯಾತ ಸಮುದಾಯಗಳಾದ ಕ್ರೈಸ್ತ, ಜೈನ, ಸಿಖ್ಖರಿಗೆ ಭರಪೂರ ಅನುದಾನ ಘೋಷಿಸಿದೆ. ವಿಶೇಷವಾಗಿ ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗೆ ‘ಕರ್ನಾಟಕ ಕ್ರಿಶ್ಚಿಯನ್‌ ಅಭಿವೃದ್ಧಿ ನಿಗಮ’ ಸ್ಥಾಪಿಸಿ 100 ಕೋಟಿ ರು. ಅನುದಾನ ನೀಡಿದೆ.

ಬೆಂಗಳೂರು (ಜು.08): ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣ, ಸ್ವ ಉದ್ಯೋಗ ಸೃಷ್ಟಿಸುವ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಲಾಗಿದೆ. ಮುಸ್ಲಿಮರಿಗೆ ಮಾತ್ರವಲ್ಲದೆ, ಇತರ ಅಲ್ಪಸಂಖ್ಯಾತ ಸಮುದಾಯಗಳಾದ ಕ್ರೈಸ್ತ, ಜೈನ, ಸಿಖ್ಖರಿಗೆ ಭರಪೂರ ಅನುದಾನ ಘೋಷಿಸಿದೆ. ವಿಶೇಷವಾಗಿ ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗೆ ‘ಕರ್ನಾಟಕ ಕ್ರಿಶ್ಚಿಯನ್‌ ಅಭಿವೃದ್ಧಿ ನಿಗಮ’ ಸ್ಥಾಪಿಸಿ 100 ಕೋಟಿ ರು. ಅನುದಾನ ನೀಡಿದೆ.

10 ಹೊಸ ಶಾಲೆ: ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಮುಂದುವರೆಸುವುದಕ್ಕೆ 60 ಕೋಟಿ ರು., 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ರಿಂದ 12ನೇ ತರಗತಿಗಳನ್ನು ಇಂಟಿಗ್ರೆಡೇಟ್‌ ಶಾಲೆಗಳನ್ನಾಗಿ ಉನ್ನತೀಕರಿಸಲು 30 ಕೋಟಿ ರು. ನೀಡಿದೆ. ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗಕ್ಕೆ ಶೇ.2ರ ಬಡ್ಡಿ ದರದಲ್ಲಿ ವಾರ್ಷಿಕ ಒಂದು ಲಕ್ಷ ರು. ಸಾಲ ನೀಡಲು 75 ಕೋಟಿ ರು. ಮೀಸಲಿಟ್ಟಿದೆ. ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಐದು ಕೋಟಿ ರು. ವೆಚ್ಚದಲ್ಲಿ ಭಾಷಾ ಪ್ರಯೋಗಾಲಯ ಸ್ಥಾಪನೆಯ ಘೋಷಣೆ ಮಾಡಿದೆ.

Karnataka Budget 2023: ಬಿಜೆಪಿ ಸರ್ಕಾರವನ್ನು ದ್ವೇಷಿಸುವ ರಿವರ್ಸ್‌ಗೇರ್‌ ಬಜೆಟ್‌: ಬೊಮ್ಮಾಯಿ

ಪ್ರತಿಷ್ಠಿತ ತರಬೇತಿ: ಪ್ರತಿಷ್ಠಿತ ಸಂಸ್ಥೆಗಳ ಸಹಯೋಗದಲ್ಲಿ ಎಂಟು ಕೋಟಿ ರು. ವೆಚ್ಚದಲ್ಲಿ ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಎನ್‌ಇಇಟಿ, ಜೆಇಇ, ಸಿಇಟಿ ಹಾಗೂ ಇತರೆ ಪ್ರವೇಶ ಪರೀಕ್ಷೆಗಳಿಗೆ ತಯಾರಿ ಹಾಗೂ ಬೆಂಗಳೂರಿನ ಹಜ್‌ ಭವನದಲ್ಲಿ ಅಲ್ಪಸಂಖ್ಯಾತರ ಯುವ ಜನರಿಗೆ 10 ತಿಂಗಳ ವಸತಿ ಸಹಿತ ಐಎಎಸ್‌ ಹಾಗೂ ಕೆಎಎಸ್‌ ತರಬೇತಿ ಆರಂಭಿಸುವ ಘೋಷಣೆ ಮಾಡಿದೆ. ವಿದೇಶಿ ವಿಶ್ವವಿದ್ಯಾಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವ್ಯಾಸಂಗಕ್ಕೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ 20 ಲಕ್ಷ ರು. ಸಾಲ ಸೌಲಭ್ಯದ ಭರವಸೆ ನೀಡಿದೆ.

ಹಲವು ಸಹಾಯಧನ: ಅಲ್ಪಸಂಖ್ಯಾತ ಸಮುದಾಯದ 10 ಸಾವಿರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗಕ್ಕೆ ಶೇ.20 ರಷ್ಟುಅಥವಾ ಗರಿಷ್ಠ ಒಂದು ಲಕ್ಷ ರು. ವರೆಗೆ ಸಹಾಯಧನ ನೀಡುವುದು. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ 3 ಲಕ್ಷ ರು. ಸಹಾಯಧನ. 126 ಶಾದಿ ಮಹಲ್‌ ಮತ್ತು ಸಮುದಾಯ ಭವನ ನಿರ್ಮಾಣ ಕಾರ್ಯ ಪೂರ್ಣಕ್ಕೆ 54 ಕೋಟಿ ರು. ಅನುದಾನ ನೀಡುವುದು. ರಾಜ್ಯದಲ್ಲಿ 40 ಸಾವಿರಕ್ಕೂ ಅಧಿಕ ವಕ್‌್ಛ ಆಸ್ತಿಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಅಭಿವೃದ್ದಿಗೆ 50 ಕೋಟಿ ರು. ಮೀಸಲಿಡಲಾಗಿದೆ.

ಗ್ರಂಥಿಗಳಿಗೆ ಮಾಸಿಕ ಗೌರವ ಧನ: ಜೈನ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ರು. ಅನುದಾನ. ಹಲಸೂರಿನಲ್ಲಿರುವ ಗುರುದ್ವಾರದ ಅಭಿವೃದ್ಧಿಗೆ 25 ಕೋಟಿ ರು. ಅನುದಾನ ಜತೆಗೆ, ಅದೇ ಮಾದರಿಯಲ್ಲಿ ಮೈಸೂರು, ಕಲಬುರಗಿ ಮತ್ತು ಹುಬ್ಬಳ್ಳಿಯಲ್ಲಿರುವ ಗುರುದ್ವಾರಗಳ ಅಭಿವೃದ್ಧಿಗೆ ಐದು ಕೋಟಿ ರು. ಹಾಗೂ ಗುರುದ್ವಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಂಥಿಗಳ ದೈನಂದಿನ ಜೀವನ ನಿರ್ವಹಣೆಗೆ ಮಾಸಿಕ ಗೌರವ ಧನ ನೀಡುವುದಾಗಿ ಘೋಷಿಸಲಾಗಿದೆ.

ಕಾಂಗ್ರೆಸ್‌ ಮುಖಂಡ ರಾಮುಲು ಮನೆಗೆ ಕರಡಿ ಸಂಗಣ್ಣ ಭೇಟಿ: ಕಾಂಗ್ರೆಸ್ ಸೇರ್ತಾರಾ ಬಿಜೆಪಿ ಸಂಸದ?

ಶಿಕ್ಷಣಕ್ಕೆ ಆದ್ಯತೆ ಸ್ವಾಗತಾರ್ಹ: ಶೈಕ್ಷಣಿಕವಾಗಿ ಹಿಂದುಳಿದ ಮುಸ್ಲಿಂ ಸಮುದಾಯದ ಶಿಕ್ಷಣ ಪ್ರಗತಿಗೆ ಹೆಚ್ಚಿನ ಒತ್ತು ನೀಡಿರುವುದು ಸ್ವಾಗತಾರ್ಹ. ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಶಾಲೆಗಳಿಗೆ ಸಾಕಷ್ಟುಅನುದಾನ ನೀಡಲಾಗಿದೆ. ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿವಿ ವಿದ್ಯಾಭ್ಯಾಸಕ್ಕೆ ಸಾಲ ಸೌಲಭ್ಯ ಮತ್ತು ಸಹಾಯಧನ ನೀಡಲಾಗಿದೆ. ರಾಜ್ಯದಲ್ಲಿ ಸುಮಾರು ಶೇ.13 ರಷ್ಟುಮುಸ್ಲಿಂ ಸಮುದಾಯವಿದ್ದು, ಮುಂದಿನ ಸಾಲಿನಿಂದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಬೇಕು.
-ಮೌಲಾನಾ ಎನ್‌ ಕೆ ಎಂ ಶಾಫಿ ಸಅದಿ, ಅಧ್ಯಕ್ಷರು, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ