ವಾಣಿಜ್ಯ ಸಿಲಿಂಡರ್ ದರ ದಿಢೀರ್ 209 ರೂ. ಏರಿಕೆ: ಇಂದಿನಿಂದಲೇ ಜಾರಿ
ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಓಎಂಸಿ) 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ದಿಢೀರ್ ಏರಿಕೆ ಮಾಡಿವೆ.
ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಓಎಂಸಿ) 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ದಿಢೀರ್ ಏರಿಕೆ ಮಾಡಿವೆ. ಇಂದಿನಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ದರದಲ್ಲಿ 209 ರೂಪಾಯಿ ಹೆಚ್ಚಳ ಮಾಡಿದ್ದು, ಹೀಗಾಗಿ ಪ್ರಸ್ತುತ ವಾಣಿಜ್ಯ ಸಿಲಿಂಡರ್ ದರ 1731.50 ಆಗಿದೆ. ಪ್ರತಿ ತಿಂಗಳು 1ನೇ ತಾರೀಕು ಸಾಮಾನ್ಯವಾಗಿ ಎಲ್‌ಪಿಜಿ ಬೆಲೆಯನ್ನು ಏರಿಕೆ ಅಥವಾ ಇಳಿಕೆ ಮಾಡಲಾಗುತ್ತಿರುತ್ತದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಏರಿಕೆ ಇಲ್ಲ.
ಇತ್ತೀಚೆಗಷ್ಟೇ ಮೋದಿ ಸರ್ಕಾರ ಜನಸಾಮಾನ್ಯರಿಗೆ ಗೃಹ ಬಳಕೆಯ ಸಿಲಿಂಡರ್ ದರ ಇಳಿಕೆ ಮಾಡಿ ಗುಡ್‌ನ್ಯೂಸ್ ನೀಡಿತ್ತು. ಆದರೆ ಈಗ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ದರವನ್ನು ಒಮ್ಮೆಲೇ 209 ರೂ.ನಷ್ಟು ಏರಿಕೆ ಮಾಡಿದ್ದು, ಇದರಿಂದ ಈಗಾಗಲೇ ದಿನಸಿ ಧಾನ್ಯಗಳ ಬೆಲೆ ಏರಿಕೆಯಿಂದ ಸಂಕಷ್ಟಕ್ಕೀಡಾಗಿರುವ ಹೊಟೇಲ್ ಹಾಗೂ ಇತರ ಆಹಾರೋದ್ಯಮ ನಡೆಸುತ್ತಿರುವವರಿಗೆ ಮತ್ತಷ್ಟು ಸಂಕಟವಾಗಲಿದೆ.