BSY ಬಜೆಟ್ಗೆ ಕಾಂಗ್ರೆಸ್ ನಾಯಕರ ಖಡಕ್ ಪ್ರತಿಕ್ರಿಯೆ!
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಡಿಸಿದ 7 ಬಜೆಟ್‌ಗಳ ಪೈಕಿ ಈ ಬಾರಿ ಮಂಡಿಸಿದ ಬಜೆಟ್ ಅತ್ಯಂತ ನೀರಸ ಬಜೆಟ್ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಾರಿಯ ಬಜೆಟ್‌ನಲ್ಲಿ ಯಾರಿಗೂ ಯಾವುದೇ ಪ್ರಯೋಜನವಿಲ್ಲ ಎಂದಿದೆ. ಬಜೆಟ್ ಕುರಿತು ಕಾಂಗ್ರೆಸ್ ನಾಯಕ ಪ್ರತಿಕ್ರಿಯೆ ಇಲ್ಲಿದೆ.
ಬೆಂಗಳೂರು(ಮಾ.05) ರಾಜ್ಯದ ಎಲ್ಲಾ ವರ್ಗದ ಜನರಿಗೆ ಮುಟ್ಟುವಂತ ಯಾವುದೇ ಯೋಜನೆಗಳಿಲ್ಲ. ಸ್ವತಃ ಯಡಿಯೂರಪ್ಪನವರೇ ಕೇಂದ್ರದ ಅನ್ಯಾಯವಾಗಿದೆ ಎಂದು ಬಜೆಟ್ ಮಂಡನೆಯಲ್ಲಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
"
ಯಡಿಯೂರಪ್ಪ ಮಂಡಿಸಿರುವ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದೆ. ರೈತರ ಹೆಸರಿನಲ್ಲಿ ರೈತರಿಗೆ ಮೋಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಈಶ್ವರ್ ಖಂಡ್ರೆ ಹೇಳಿದ್ದಾರೆ.
"
ಕೋಟಿ ಕೋಟಿ ಮೀಸಲಿಡುತ್ತೇವೆ, ಅತ್ಯುತ್ತಮ ಬಜೆಟ್ ಮಂಡಿಸುತ್ತೇವೆ ಎಂದಿದ್ದ ಬಿಜೆಪಿ ಇದೀಗ ರಾಜ್ಯ ಜನರಿಕೆ ನಿರಾಸೆ ಮಾಡಿದೆ. ನೀರಾವರಿಗೆ ಮೀಸಲಿಟ್ಟ ಹಣ ಎಳ್ಳಷ್ಟು ಸಾಕಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಹೇಳಿದ್ದಾರೆ.
"