ದಲಿತ ಸಮುದಾಯ ಸಂಘಟನೆಗಳ ಬಹುದಿನಗಳ ಒತ್ತಾಯವಾದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ ಸೆಕ್ಷನ್‌ 7(ಡಿ) ಕೈಬಿಡುವ ಆಶ್ವಾಸನೆಯನ್ನು ಬಜೆಟ್‌ನಲ್ಲಿ ಸರ್ಕಾರವು ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಗೆ 11,173 ಕೋಟಿ ರು. ಅನುದಾನ ಒದಗಿಸಲಾಗಿದೆ. 

ಬೆಂಗಳೂರು (ಜು.08): ದಲಿತ ಸಮುದಾಯ ಸಂಘಟನೆಗಳ ಬಹುದಿನಗಳ ಒತ್ತಾಯವಾದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ ಸೆಕ್ಷನ್‌ 7(ಡಿ) ಕೈಬಿಡುವ ಆಶ್ವಾಸನೆಯನ್ನು ಬಜೆಟ್‌ನಲ್ಲಿ ಸರ್ಕಾರವು ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಗೆ 11,173 ಕೋಟಿ ರು. ಅನುದಾನ ಒದಗಿಸಲಾಗಿದೆ. ದಲಿತ ಸಮುದಾಯಕ್ಕೆ ಹಂಚಿಕೆಯಾಗುವ ಅನುದಾನವು ಆ ಸಮುದಾಯಗಳ ಒಳಿತಿಗೆ ಬಳಕೆಯಾಗಬೇಕು ಎಂಬ ಸದಾಶಯವನ್ನು ವ್ಯಕ್ತಪಡಿಸಿದೆ. ಪ್ರಸ್ತುತ 7(ಡಿ) ಮೂಲಕ ಅನುದಾನವನ್ನು ಬೇರೆ ಇಲಾಖೆಗೆ ವರ್ಗಾಯಿಸಲಾಗುತ್ತಿತ್ತು. ಈಗ 7(ಡಿ) ಕೈಬಿಡುವ ಮೂಲಕ ಯಾವ ಉದ್ದೇಶಕ್ಕಾಗಿ ಅನುದಾನ ಮೀಸಲಿಡಲಾಗುತ್ತದೆಯೋ, ಅದೇ ಉದ್ದೇಶಕ್ಕಾಗಿ ಬಳಕೆ ಮಾಡಬೇಕಾಗುತ್ತದೆ.

ಐಎಸ್‌ಇಸಿ ಸಂಸ್ಥೆಯಲ್ಲಿ ಪಿಎಚ್‌ಡಿ ಮಾಡುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್‌. ಅಂಬೇಡ್ಕರ್‌ ಫೆಲೋಶಿಪ್‌ ನೀಡಲು ಎರಡು ಕೋಟಿ ರು. ಒದಗಿಸಿದೆ. ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಎಸ್‌ಸಿ/ಎಸ್‌ಟಿ ನಿರುದ್ಯೋಗಿ ಯುವಜನರು ಕಾರು ಖರೀದಿಗೆ ಪಡೆಯುವ ಸಾಲದ ಶೇ.75ರಷ್ಟು, ಗರಿಷ್ಠ ನಾಲ್ಕು ಲಕ್ಷ ರು. ಸಹಾಯಧನ ನೀಡಲಾಗುವುದು. ಈ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು. ನಿರುದ್ಯೋಗಿಗಳಿಗೆ ಆದಾಯ ಉತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ವಾಣಿಜ್ಯ ಬ್ಯಾಂಕ್‌ಗಳಿಂದ ಪಡೆಯುವ ಸಾಲಕ್ಕೆ ಗರಿಷ್ಠ ಶೇ.20ರಷ್ಟುಅಥವಾ ಒಂದು ಲಕ್ಷ ರು.ಗಳು ಮೀರದಂತೆ ಸಾಲ ಸಹಾಯಧನ ನೀಡುವ ಬಗ್ಗೆ ಪ್ರಸ್ತಾಪಿಸಲಾಗಿದೆ.

Karnataka Budget 2023: ಬ್ರ್ಯಾಂಡ್‌ ಬೆಂಗಳೂರಿಗೆ ಹರಿಯಲಿದೆ ಹಣ: ಬಿಬಿಎಂಪಿಗೆ 4093 ಕೋಟಿ ಅನುದಾನ

ಚರ್ಮ ಆಧಾರಿತ ಸಾಂಪ್ರದಾಯಿಕ ಕುಶಲಕರ್ಮಿಗಳ ಕುಟುಂಬಗಳ 100 ಯುವನಜನರಿಗೆ ಚರ್ಮ ಉದ್ಯಮದಲ್ಲಿನ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು, ಮಾರುಕಟ್ಟೆಯ ಬೇಡಿಕೆಗಳಿಗೆ ಪರಿಚಯಿಸಲು ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ನೀಡಲಾಗುವುದು. ಎಸ್‌ಟಿ ಜನಾಂಗದಲ್ಲಿ ಸೋಲಿಗ ಸಮುದಾಯ ಒಳಗೊಂಡಂತೆ ಜೇನುಕುರುಬ, ಕಾಡುಕುರುಬ, ಕೊರಗ, ಇರುಳಿಗ, ಬೆಟ್ಟಕುರುಬ ಇತ್ಯಾದಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಸಮಗ್ರ ಅಭಿವೃದ್ಧಿಗಾಗಿ 50 ಕೋಟಿ ರು. ಒದಗಿಸಲಾಗಿದೆ.

ರಾಜ್ಯದ ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ದಿ, ಹಲಸರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಗಳಿಗೆ ನೀಡುತ್ತಿದ್ದ ಪೌಷ್ಟಿಕ ಆಹಾರ ಯೋಜನೆಯನ್ನು ಆರು ತಿಂಗಳಿನಿಂದ ಒಂದು ವರ್ಷಕ್ಕೆ ವಿಸ್ತರಣೆ. ಇದಕ್ಕಾಗಿ ಬಜೆಟ್‌ನಲ್ಲಿ ವಾರ್ಷಿಕ 50 ಕೋಟಿ ರು. ನೀಡಲಾಗಿದೆ. ಎಸ್‌ಸಿ/ಎಸ್‌ಟಿಗೆ ಸೇರಿದ ಕ್ರೈಸ್‌ ವಸತಿ ಶಾಲೆಗಳಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಮತ್ತು ಉತ್ತಮ ಗುಣಮಟ್ಟದ ಕ್ರೀಡಾ ಸೌಲಭ್ಯವನ್ನು ಒದಗಿಸಲು 20 ಕೋಟಿ ರು. ನೀಡುವ ಭರವಸೆ ನೀಡಲಾಗಿದೆ.

45 ದಿನದಲ್ಲೇ ಪಕ್ಷದ ಭರವಸೆ ಈಡೇರಿಕೆ, ಎದೆ ಎತ್ತಿ ಉತ್ತರಿಸಿ: ಸಿಎಂ ಸಿದ್ದರಾಮಯ್ಯ

ಗುಣಾತ್ಮಕ ಬಜೆಟ್‌: ಎಸ್‌ಸಿ/ಎಸ್‌ಟಿ ವರ್ಗಕ್ಕೆ ಬಜೆಟ್‌ನಲ್ಲಿ ನೀಡಿರುವ ಭರವಸೆಗಳನ್ನು ಗಮನಿಸಿದರೆ ಇದೊಂದು ಗುಣಾತ್ಮಕ ಬಜೆಟ್‌ ಆಗಿದೆ. ಘೋಷಣೆಗಳು ಕೇವಲ ಘೋಷಣಗೆ ಸಿಮೀತವಾಗಿರದೆ ಕಾರ್ಯರೂಪಕ್ಕೆ ತರಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ ಸೆಕ್ಷನ್‌ 7(ಡಿ) ಕೈ ಬಿಡುವ ಪ್ರಸ್ತಾಪವು ಅತ್ಯಂತ ಶ್ಲಾಘನೀಯವಾದುದು. ಇದರಿಂದ ಅನುದಾನ ಬೇರೆಡೆಗೆ ವರ್ಗವಾಗುವುದಿಲ್ಲ. ಅಲ್ಲದೇ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಸಹ ಹೆಚ್ಚಳ ಮಾಡಿರುವುದು ಒಳ್ಳೆಯ ಕೆಲಸ. ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ನೀಡುವುದು, ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಉತ್ತೇಜನ ನೀಡಿರುವುದರಿಂದ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ಅನುಕೂಲವಾಗಲಿದೆ. ಒಳಮೀಸಲಾತಿ ಕಗ್ಗಂಟಾಗಿದ್ದು, ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು.