EPF ಅಧಿಕ ಪಿಂಚಣಿ ಅರ್ಜಿ ಸಲ್ಲಿಕೆಗೆ ಮೇ 3 ಅಂತಿಮ ಗಡುವು; ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ?

ಉದ್ಯೋಗಿಗಳು ಅಧಿಕ ಪಿಂಚಣಿ ಕೋರಿ ಅರ್ಜಿ ಸಲ್ಲಿಸಲು ಮೇ 3 ಅಂತಿಮ ಗಡುವಾಗಿದೆ. ಅಧಿಕ ಪಿಂಚಣಿ ಅರ್ಜಿಯನ್ನು ಫೀಲ್ಡ್ ಆಫೀಸ್ ನಿಂದ ಪರಿಶೀಲಿಸಲಾಗುತ್ತದೆ. ಆ ಬಳಿಕ ಫೀಲ್ಡ್ ಆಫೀಸ್ ನಲ್ಲಿರುವ ಮಾಹಿತಿ ಜೊತೆಗೆ ಹೋಲಿಕೆ ಮಾಡಲಾಗುತ್ತದೆ. ಹಾಗಾದ್ರೆ ಈ ಅಧಿಕ ಪಿಂಚಣಿಗೆ ಯಾರು ಅರ್ಜಿ ಸಲ್ಲಿಸಬಹುದು, ಹೇಗೆ? ಇಲ್ಲಿದೆ ಮಾಹಿತಿ.
 

EPFO higher pension scheme Only few days left to apply check eligibility interest and other details anu

Business Desk:ಉದ್ಯೋಗಿಗಳ ಪಿಂಚಣಿ ಯೋಜನೆ (ಇಪಿಎಸ್ ) ಅಡಿಯಲ್ಲಿ ನಿಗದಿಗಿಂತ ಹೆಚ್ಚಿನ ಮೊತ್ತದ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಕೆಗೆ ಮೇ 3 ಅಂತಿಮ ಗಡುವಾಗಿದೆ. ಹೀಗಾಗಿ ಅಧಿಕ ಪಿಂಚಣಿಗಾಗಿ ಅರ್ಜಿ ಸಲ್ಲಿಸಲು ಉದ್ಯೋಗಿಗಳಿಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಅಧಿಕ ಪಿಂಚಣಿಗೆ ಸಂಬಂಧಿಸಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ ಒ) ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದರೂ ಆ ಕುರಿತು ಸಾಕಷ್ಟು ಗೊಂದಲಗಳಂತೂ ಉದ್ಯೋಗಿಗಳಿಗೆ ಇದ್ದೇಇದೆ. ಇನ್ನು ಅಧಿಕ ಪಿಂಚಣಿಗಾಗಿ ಉದ್ಯೋಗಿಗಳು ಹಾಗೂ ಉದ್ಯೋಗದಾತ ಸಂಸ್ಥೆಗಳು ಸಲ್ಲಿಕೆ ಮಾಡಿರುವ ವೇತನ ಹಾಗೂ ಇತರ ಮಾಹಿತಿಗಳನ್ನು ಪರಿಶೀಲಿಸುವ ಸಂಬಂಧ ಇಪಿಎಫ್ ಒ ಕೆಲವು ದಿನಗಳ ಹಿಂದೆ ನವೀಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.ಅದರ ಅನ್ವಯ ಅಧಿಕ ಪಿಂಚಣಿಗಾಗಿ ಸಲ್ಲಿಕೆ ಮಾಡಿರುವ ಅರ್ಜಿಯನ್ನು ಫೀಲ್ಡ್ ಆಫೀಸ್ ಪರಿಶೀಲನೆ ನಡೆಸಲಿದೆ. ಹಾಗೆಯೇ ಈ ರೀತಿ ಪರಿಶೀಲಿಸಿದ ಮಾಹಿತಿಯನ್ನು ಫೀಲ್ಡ್ ಕಚೇರಿಯಲ್ಲಿರುವ ಮಾಹಿತಿ ಜೊತೆಗೆ ಹೋಲಿಕೆ ಮಾಡಲಾಗುತ್ತದೆ. ಇಪಿಎಫ್ ಖಾತೆಯಲ್ಲಿರುವ ಹಣಕ್ಕೆ ಪ್ರಸ್ತುತ ಶೇ.8.15ರಷ್ಟು ಬಡ್ಡಿ ನೀಡಲಾಗುತ್ತಿದೆ. 

2014ರ ಆಗಸ್ಟ್ 22ರಂದು ಇಪಿಎಸ್ ಪರಿಷ್ಕರಣೆ ಮಾಡಲಾಗಿದ್ದು, ಪಿಂಚಣಿ ಪಡೆಯಲು ವೇತನ ಮಿತಿಯನ್ನು ತಿಂಗಳಿಗೆ 6,500ರೂ.ನಿಂದ 15,000 ರೂ.ಗೆ ಏರಿಕೆ ಮಾಡಲಾಗಿತ್ತು. ಜೊತೆಗೆ ಉದ್ಯೋಗಿಗಳು ಹಾಗೂ ಉದ್ಯೋಗದಾತ ಸಂಸ್ಥೆಗಳು ಅವರ ವೇತನದ ಶೇ.8.33ರಷ್ಟನ್ನು ಇಪಿಎಸ್ ಗೆ ಕೊಡುಗೆಯಾಗಿ ನೀಡಲು ಅನುಮತಿ ನೀಡಲಾಗಿತ್ತು. ಸುಪ್ರೀಂ ಕೋರ್ಟ್ ಉದ್ಯೋಗಿಗಳ ಪಿಂಚಣಿ (ತಿದ್ದುಪಡಿ) ಯೋಜನೆ 2014 ಅನ್ನು ಕಳೆದ ವರ್ಷ ನವೆಂಬರ್ ನಲ್ಲಿ ಎತ್ತಿ ಹಿಡಿದಿತ್ತು ಕೂಡ. 

ಮೇ 1ರಿಂದ ಜನಸಾಮಾನ್ಯರ ಜೇಬಿನ ಮೇಲೆ ಪರಿಣಾಮ ಬೀರಲಿವೆ ಈ 5 ಬದಲಾವಣೆಗಳು! ಯಾರು ಅರ್ಜಿ ಸಲ್ಲಿಸಬಹುದು?

ಇಪಿಎಫ್ಒ ನಿನ್ನೆ (ಫೆ.21) ಬಿಡುಗಡೆಗೊಳಿಸಿರುವ ಮಾರ್ಗಸೂಚಿ ಅನ್ವಯ 5,000ರೂ. ಅಥವಾ 6,500 ರೂ. ವೇತನ ಮಿತಿ ಮೀರಿದ ಇಪಿಎಫ್ಒಗೆ ಕೊಡುಗೆ ನೀಡಿದ ಎಲ್ಲ ಉದ್ಯೋಗಿಗಳು ಹಾಗೂ ಉದ್ಯೋಗದಾತರು ಅಧಿಕ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸಬಹುದು. ಇನ್ನು ನಿವೃತ್ತಿಗೂ ಮುನ್ನ ಅಧಿಕ ಪಿಂಚಣಿ ಆಯ್ಕೆ ಮಾಡಿಕೊಂಡವರು ಹಾಗೂ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಅಡಿಯಲ್ಲಿ ಅಧಿಕ ವೇತನದ ಕೊಡುಗೆ ನೀಡಿದ ಉದ್ಯೋಗಿಗಳು ಕೂಡ ಅಧಿಕ ಪಿಂಚಣಿ ಸೌಲಭ್ಯ ಪಡೆಯಲು ಅರ್ಹರು.  2014ರ ಸೆಪ್ಟೆಂಬರ್ 1ರಂದು ಇಪಿಎಸ್ ಸದಸ್ಯರಾಗಿರುವ ಉದ್ಯೋಗಿಗಳು 1995ರ ನಿಯಮ 11(3) ಅನ್ವಯ ಹೆಚ್ಚು ಪಿಂಚಣಿ ಪಡೆಯಲು ಅರ್ಹರಾಗಿದ್ದಾರೆ ಎಂದು ಇಪಿಎಫ್ಒ ತಿಳಿಸಿದೆ. ಇವರು ತಮ್ಮ ವೇತನದ ಶೇ.8.33ರಷ್ಟನ್ನು ಪಿಂಚಣಿಗೆ ಕೊಡುಗೆಯಾಗಿ ನೀಡಬಹುದು.ಇನ್ನು 2014ರ ಸೆಪ್ಟೆಂಬರ್ 1ಕ್ಕಿಂತ ಮುನ್ನ ನಿವೃತ್ತಿ ಹೊಂದಿದ ಹಾಗೂ ಅಧಿಕ ಪಿಂಚಣಿ ಆಯ್ಕೆ ಮಾಡದ ಉದ್ಯೋಗಿಗಳು ಈ ಸೌಲಭ್ಯ ಪಡೆಯಲು ಅರ್ಹರಾಗಿಲ್ಲ.

ಹೂಡಿಕೆ ಮಾಡೋ ಮುನ್ನ ಟ್ರೆಂಡ್ ತಿಳಿದುಕೊಳ್ಳಿ; ಎಲ್ಲಿ ಹೂಡಿಕೆ ಮಾಡೋದು ಬೆಸ್ಟ್?ಅರ್ಜಿ ಸಲ್ಲಿಕೆ ಹೇಗೆ?

ಒಂದು ವೇಳೆ ನೀವು ಅಧಿಕ ಪಿಂಚಣಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದರೆ, ನಿಗದಿತ ಫಾರ್ಮ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹ ಸದಸ್ಯರು  ಸಂಬಂಧಪಟ್ಟ ಪ್ರಾದೇಶಿಕ ಇಪಿಎಫ್ ಒ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬೇಕು. ಜೊತೆಗೆ ಅಗತ್ಯ ದಾಖಲೆಗಳನ್ನು ಕೂಡ ಒದಗಿಸಬೇಕಿದೆ. ಹೆಚ್ಚು ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸುವಾಗ ಆಯುಕ್ತರು ಸೂಚಿಸಿದ ವಿಧಾನದಲ್ಲೇ ಅರ್ಜಿ ಸಲ್ಲಿಕೆ ಮಾಡಬೇಕು ಎಂದು ಇಪಿಎಫ್ಒ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಇನ್ನು ಭವಿಷ್ಯ ನಿಧಿಯಿಂದ ಪಿಂಚಣಿ ನಿಧಿಗೆ ಮರು ಹೊಂದಾಣಿಕೆ ಮಾಡಲು ಪಿಂಚಣಿದಾರರು ಅರ್ಜಿಯಲ್ಲಿ ಆತ/ಆಕೆಯ ಒಪ್ಪಿಗೆ ನೀಡೋದು ಅಗತ್ಯ. ಇನ್ನು ನಿಧಿ ಠೇವಣಿಗೆ ಸಂಬಂಧಿಸಿ ಸಂಬಂಧಪಟ್ಟ ಸುತ್ತೋಲೆಗಳಲ್ಲಿ ಸೂಚಿಸಿರುವ ವಿಧಾನವನ್ನು ಬಳಸಲಾಗುತ್ತದೆ.
 

Latest Videos
Follow Us:
Download App:
  • android
  • ios