Karnataka Budget 2023 ಅಬಕಾರಿ ಸುಂಕ ಶೇ.20 ಹೆಚ್ಚಳ: ಮದ್ಯದ ದರ ಭಾರಿ ಏರಿಕೆ
ಗ್ಯಾರಂಟಿ ಯೋಜನೆಗಳ ಜಾರಿಗೆ ಹೆಚ್ಚಿನ ಅನುದಾನ ಬೇಕಿದ್ದರಿಂದ ಅಬಕಾರಿ ಸುಂಕವನ್ನು ಶೇ.20 ಹೆಚ್ಚಳ ಮಾಡುವ ಮೂಲಕ ಮದ್ಯದ ದರವನ್ನು ಹೆಚ್ಚಳ ಮಾಡಿದ್ದಾರೆ.
ಬೆಂಗಳೂರು (ಜು.07)): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನಲ್ಲಿ 3,24,478 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ, ಗ್ಯಾರಂಟಿ ಯೋಜನೆಗಳ ಜಾರಿಗೆ ಹೆಚ್ಚಿನ ಅನುದಾನ ಬೇಕಿದ್ದರಿಂದ ಅಬಕಾರಿ ಸುಂಕವನ್ನು ಶೇ.20 ಹೆಚ್ಚಳ ಮಾಡುವ ಮೂಲಕ ಮದ್ಯದ ದರವನ್ನು ಹೆಚ್ಚಳ ಮಾಡಿದ್ದಾರೆ.
ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಅನುಬಂಧ (ಅ) ರಲ್ಲಿರುವಂತೆ ಹಾಲಿ ಇರುವ ದರಗಳ ಮೇಲೆ ಶೇ.20ರಷ್ಟು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಹಾಗೆಯೇ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175 ರಿಂದ ಶೇ.185ಕ್ಕೆ ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ. ಇದರೊಂದಿಗೆ, ಹೆಚ್ಚು ಪರಿಣಾಮಕಾರಿಯಾದ ಜಾರಿ ಮತ್ತು ನಿಯಂತ್ರಣಾ ಕ್ರಮಗಳ ಮೂಲಕ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
Karnataka Budget 2023 Live Updates |ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ...
ನೋಂದಣಿ ಮತ್ತು ಮುದ್ರಾಂಕ: 2018-19ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ, ದಿನಾಂಕ:01.01.2019 ತರಲಾಗಿತ್ತು. ನಂತರದಲ್ಲಿ ಕೋವಿಡ್-19 ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿರುವುದಿಲ್ಲ. ಪ್ರಸ್ತುತ ಸ್ವತ್ತುಗಳು ಭೌತಿಕ ಬದಲಾವಣೆಗೊಂಡು ಮಾರುಕಟ್ಟೆ ದರಗಳಲ್ಲಿ ವ್ಯತ್ಯಾಸಗಳು ಆಗಿರುವುದರಿಂದ ಇದನ್ನು ಸರಿಪಡಿಸಲು ಸರಿಯಾದ ಮಾರ್ಗಸೂಚಿ ದರಗಳನ್ನು ನಿಗದಿಪಡಿಸುವುದು ಅವಶ್ಯಕವಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ಜಾರಿಗೆ ತರಲು ಉದ್ದೇಶಿಸಲಾಗಿದೆ. 2023-24ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 25,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಸಾರಿಗೆ ಇಲಾಖೆ ಸರಳೀಕೃತ ತಂತ್ರಾಂಶ ಅಳವಡಿಕೆ: ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯನ್ನು ತಿದ್ದುಪಡಿಗೊಳಿಸಿ ಸರಳೀಕರಿಸಲು ಉದ್ದೇಶಿಸಿದೆ. ಮೋಟಾರು ವಾಹನ ತೆರಿಗೆ ವ್ಯವಹಾರಗಳ ನಿಖರವಾದ ಪರಿಶೀಲನೆಗಾಗಿ ಸರಳೀಕೃತ ತಂತ್ರಾಂಶವನ್ನು ತರಲಾಗುವುದು. ಪ್ರಸ್ತುತ ಆಯ್ದ ಪರಿಷ್ಕರಿಸಲಾಗುವುದು.2023-24ನೇ ಸಾಲಿನಲ್ಲಿ ಸಾರಿಗೆ ಇಲಾಖೆಗೆ ಒಟ್ಟು 11,500 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಸಾಮಾಜಿಕ ಭದ್ರತೆಗೆ 8,636 ರೂ. ಅನುದಾನ: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರವು ರಾಜ್ಯದ 14.13 ಲಕ್ಷ ಫಲಾನುಭವಿಗಳಿಗೆ ಮಾತ್ರ ಪಿಂಚಣಿಯನ್ನು ನೀಡುತ್ತಿದ್ದು, ರಾಜ್ಯ ಸರ್ಕಾರವು ತನ್ನ ಸ್ವಂತ ಸಂಪನ್ಮೂಲಗಳಿಂದ ಹೆಚ್ಚುವರಿ 64.21 ಲಕ್ಷ ಫಲಾನುಭವಿಗಳಿಗೆ ಪಿಂಚಣಿಯನ್ನು ನೀಡುತ್ತಿದೆ. 2022-23ರಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೇವಲ 447 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರವು 8,636 ಕೋಟಿ ರೂ.ಗಳನ್ನು ನೀಡಿರುತ್ತದೆ. ಅಂದರೆ, ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕೇಂದ್ರ ಸರ್ಕಾರವು ಕೇವಲ ಶೇ.4.9 ರಷ್ಟು ಅನುದಾನ ನೀಡಿದರೆ ಬಾಕಿ ಶೇ.95.1 ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ.
KARNATAKA BUDGET 2023: ಬಜೆಟ್‌ನಲ್ಲಿ ಪುನೀತ್ ನೆನಪು, ಪವರ್‌ಸ್ಟಾರ್ ಸ್ಮರಣಾರ್ಥ ಜಿಲ್ಲಾಸ್ಪತ್ರೆಗಳಲ್ಲಿ AED
ಸರ್ಕಾರದ ವೆಚ್ಚ ಶೇ.81 ಹೆಚ್ಚಳ: ಹಿಂದಿನ ಸರ್ಕಾರವು ಬದ್ಧ ವೆಚ್ಚಗಳಿಗೆ ಕಡಿವಾಣ ಹಾಕಿ ಜನಕಲ್ಯಾಣ ಕಾರ್ಯಕ್ರಮಗಳಿಗೆ ಸಂಪನ್ಮೂಲ ಕ್ರೋಢೀಕರಿಸಲು ವಿಫಲವಾಗಿರುತ್ತದೆ. ಆಯವ್ಯಯ ಗಾತ್ರವು 2018-19 ರಿಂದ 2023-24ರವರೆಗೆ ಶೇ.50ರಷ್ಟು ಹೆಚ್ಚಳವಾಗಿರುತ್ತದೆ. ಆದರೆ, ಬದ್ಧ ವೆಚ್ಚಗಳಾದ ವೇತನ, ಬಡ್ಡಿ ಪಾವತಿ ಮತ್ತು ಪಿಂಚಣಿ ವೆಚ್ಚಗಳು ಈ ಐದು ವರ್ಷಗಳಲ್ಲಿ ಶೇ.81ರಷ್ಟು ಹೆಚ್ಚಾಗಿರುತ್ತದೆ.