ಈ ವರ್ಷದ ಅಂತ್ಯಕ್ಕೆ ಸರ್ಕಾರದ ಒಟ್ಟು ಸಾಲ .5,64,896 ಕೋಟಿ ಆಗುತ್ತದೆ ಎಂದು ಹೇಳಿದ್ದಾರೆ. ನಮ್ಮ 5 ವರ್ಷದ ಆಡಳಿತದಲ್ಲಿ 1.16 ಲಕ್ಷ ಸಾಲ ಆಗಿತ್ತು. ಆದರೆ, ಬಿಜೆಪಿಯವರು ಈ ನಾಲ್ಕೇ ವರ್ಷದಲ್ಲಿ 3.22 ಲಕ್ಷ ಕೋಟಿ ಸಾಲ ಮಾಡಿದ್ದಾರೆ.
ಬೆಂಗಳೂರು (ಫೆ.18): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು ‘ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್ ಹಾಗೂ ಇನ್ನು 2 ತಿಂಗಳಲ್ಲಿ ಚುನಾವಣೆ ಇರುವುದರಿಂದ ಇದನ್ನು ಸರ್ಕಾರದ ನಿರ್ಗಮನದ ಬಜೆಟ್’ ಎನ್ನಬಹುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷದ ಅಂತ್ಯಕ್ಕೆ ಸರ್ಕಾರದ ಒಟ್ಟು ಸಾಲ .5,64,896 ಕೋಟಿ ಆಗುತ್ತದೆ ಎಂದು ಹೇಳಿದ್ದಾರೆ. ನಮ್ಮ 5 ವರ್ಷದ ಆಡಳಿತದಲ್ಲಿ 1.16 ಲಕ್ಷ ಸಾಲ ಆಗಿತ್ತು. ಆದರೆ, ಬಿಜೆಪಿಯವರು ಈ ನಾಲ್ಕೇ ವರ್ಷದಲ್ಲಿ 3.22 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಈ ಸರ್ಕಾರ ರಾಜ್ಯದ ಜನರನ್ನು ಸಾಲಗಾರರನ್ನಾಗಿ ಮಾಡಿದೆ. ಮುಂದಿನ ವರ್ಷಕ್ಕೆ 77,750 ಕೋಟಿ ಸಾಲ ಮಾಡುವುದಾಗಿ ಸರ್ಕಾರ ಹೇಳಿದೆ. ಸಾಲದ ಪ್ರಮಾಣ 95% ಹೆಚ್ಚಾಗಿದೆ. ಇದರಿಂದ .34,000 ಕೋಟಿ ಬಡ್ಡಿಯನ್ನೇ ಪಾವತಿ ಮಾಡಬೇಕಾಗುತ್ತದೆ. ಹೀಗಾದಾಗ ಬಜೆಟ್ ಅಭಿವೃದ್ಧಿಪರವಾಗಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ದುರಾಡಳಿತದ ವಿರುದ್ಧ ಜನತೆಗೆ ಬೇಸರ: ಸಿದ್ದರಾಮಯ್ಯ
ನಮ್ಮ ಸರ್ಕಾರದ .2.2 ಲಕ್ಷ ಕೋಟಿ ಬಜೆಟ್‌ನಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಗೆ .30,000 ಕೋಟಿ ನೀಡಿದ್ದೆವು. ಆದರೆ ಈಗಿನ ಬಜೆಟ್ ಗಾತ್ರ .3.9 ಲಕ್ಷ ಕೋಟಿ ಇದ್ದರೂ ಈ ಯೋಜನೆಗಳಿಗೆ .30,000 ಕೋಟಿ ನೀಡಲಾಗಿದೆ. ನನ್ನ ಪ್ರಕಾರ ಕನಿಷ್ಠ .50,000 ಕೋಟಿ ನೀಡಬೇಕಿತ್ತು. ಇದು ದಲಿತರಿಗೆ, ಪರಿಶಿಷ್ಟಜಾತಿ ಮತ್ತು ವರ್ಗದ ಜನರಿಗೆ ಮಾಡಿರುವ ದೊಡ್ಡ ದ್ರೋಹ. ಸರ್ಕಾರಿ ನೌಕಕರಿಗೆ 7ನೇ ವೇತನ ಆಯೋಗ ರಚಿಸಿರುವುದರಿಂದ ಸಂಬಳ ಹೆಚ್ಚಾಗುವ ನಿರೀಕ್ಷೆ ಇತ್ತು. ನಮ್ಮ ಸರ್ಕಾರ ಇದ್ದಾಗ 6ನೇ ವೇತನ ಆಯೋಗ ಜಾರಿ ಮಾಡಿ .10,600 ಕೋಟಿ ಅನುದಾನ ನೀಡಿದ್ದೆ. ಈ ಬಜೆಟ್‌ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಎಲ್ಲೂ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ.
ಅಶ್ವತ್ಥ ನಾರಾಯಣ ಸಚಿವರಾಗಿರಲು ನಾಲಾಯಕ್: ಸಿದ್ದರಾಮಯ್ಯ
ನಮ್ಮ ಸರ್ಕಾರದ ಕೊನೆಯ ಬಜೆಟ್‌ನಲ್ಲಿ 5 ವರ್ಷದಲ್ಲಿ ನಮ್ಮ ಸರ್ಕಾರದ ಸಾಧನೆಗಳೇನು ಮತ್ತು ಮುಂದೆ ಅಧಿಕಾರಕ್ಕೆ ಬಂದಾಗ ಏನೇನು ಮಾಡುತ್ತೇವೆ ಎಂದು ಸ್ಪಷ್ಟವಾಗಿ ಹೇಳಿದ್ದೆವು, ಆದರೆ ಈ ಬಜೆಟ್ ಪುಸ್ತಕದಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳ ಮಾಹಿತಿಯೇ ಇಲ್ಲ. 2018ರಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಇದರಲ್ಲಿ 90% ಭರವಸೆಗಳನ್ನು ಈಡೇರಿಸಿಲ್ಲ. ಕಳೆದ ಬಜೆಟ್‌ನಲ್ಲಿ 206 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದರು. ಅದರಲ್ಲಿ 56 ಕಾರ್ಯಕ್ರಮಗಳನ್ನು ಜಾರಿ ಮಾಡೇ ಇಲ್ಲ.
- ಸಿದ್ದರಾಮಯ್ಯ, ವಿಧಾನಸಭೆ ಪ್ರತಿಪಕ್ಷ ನಾಯಕ
