ಫಾಕ್ಸ್‌ಕಾನ್‌ ಸಿಇಒ ಯಂಗ್ ಲಿಯು ಬೆಂಗಳೂರಿಗೆ ಆಗಮನ: ಐಫೋನ್ ಕಂಪನಿಗೆ 300 ಎಕರೆ ಭೂಮಿ

ಆಪಲ್ ಫೋನ್ ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಯ ಸಿಇಒ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಭಾರೀ ಹೂಡಿಕೆ ಮಾಡಲು ಉದ್ದೇಶಿಸಿರುವ ಫಾಕ್ಸ್‌ಕಾನ್‌ಗೆ ಈಗಾಗಲೇ 300 ಎಕರೆ ಭೂಮಿ ಮಂಜೂರು ಮಾಡಲಾಗಿದೆ.

Foxconn CEO Young Liu came to Bengaluru 300 acre land allotment to iPhone company sat

ಬೆಂಗಳೂರು (ಆ.16): ಆಪಲ್ ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ನವದೆಹಲಿಯಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸರ್ಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಬರಮಾಡಿಕೊಂಡರು. ಇನ್ನು ಫಾಕ್ಸ್ ಕಾನ್ ಕಂಪನಿಯು ರಾಜ್ಯದಲ್ಲಿ ಭಾರೀ ಹೂಡಿಕೆ ಮಾಡುತ್ತಿದ್ದು, ಈ ಸಂಬಂಧ ವಿಸ್ತೃತ ಚರ್ಚೆ ನಡೆಸಲು ಯಂಗ್ ಲಿಯು ಇಲ್ಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ  ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್ ಹಾಜರಿದ್ದರು. 

ಭಾರತದ ಐಟಿ ಉದ್ಯಮ ಕುಸಿತ ಭೀತಿ: ಅಮೇರಿಕದ ಸಾಫ್ಟ್‌ವೇರ್ ಪ್ರಾಜೆಕ್ಟ್‌ಗಳು ವಿಯೆಟ್ನಾಂ, ಫಿಲಿಪೈನ್ಸ್ ಪಾಲು

ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ: ಬೆಂಗಳೂರು: ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ  ಕೈಗಾರಿಕೆ ಸ್ಥಾಪನೆಗಾಗಿ  ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಮೇ ತಿಂಗಳಲ್ಲಿ ತಿಳಿಸಿದ್ದರು. ನಂತರ ಈ ಗ್ರಾಮಗಳಲ್ಲಿ ಕಂಪನಿಗೆ ಮಂಜೂರಾಗಿರುವ ಭೂಮಿಗೆ ಭೂಸ್ವಾಧೀನ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು ಫೆನ್ಸಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲಾಗಿತ್ತು.

ಟ್ವಿಟರ್‌ನಿಂದ ಕಿತ್ತು ಹಾಕಿದ ಉದ್ಯೋಗಿಗೆ 5 ಕೋಟಿ ರೂ ಪರಿಹಾರಕ್ಕೆ ಆದೇಶ, ಕಂಗಾಲಾದ ಮಸ್ಕ್!

ಮತ್ತೊಂದೆಡೆ ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಗಾಗಿ ಭೂಸ್ವಾಧೀನ‌ ಮಾಡಿಕೊಳ್ಳಲಾಗಿದ್ದು. ಈ ಪೈಕಿ ಫಾಕ್ಸ್‌ಕಾನ್‌ ಕಂಪನಿಗೆ 300 ಎಕರೆ ಭೂಮಿಯನ್ನು  ಹಂಚಿಕೆ ಮಾಡಲಾಗಿರುತ್ತದೆ. ಇನ್ನು ಈ ಗ್ರಾಮಗಳಲ್ಲಿ ಸ್ವಾಧೀನ ಪಡಿಸಿಕೊಂಡ ಜಮೀನಿನ ಖಾತೆದಾರರಿಗೆ ದೇವನಹಳ್ಳಿ 3ನೇ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ನೇರವಾಗಿ ಪರಿಹಾರ ಕೊಡಬಾರದೆಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲಾಗುತ್ತದೆ ಎಂದು ಕೆಐಎಡಿಬಿ ಅಧಿಕಾರಿಗಳು ತಿಳಿಸಿದ್ದರು.

Latest Videos
Follow Us:
Download App:
  • android
  • ios