ನವದೆಹಲಿ(ಡಿ.12): ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೇ, ದೇಶದ ರಾಜಕೀಯ ವಲಯದಲ್ಲಿ ಜಹಲವು ಬದಲಾವಣೆಗಳು ಸ್ಪಷ್ಟವಾಗಿ ಗೋಚರವಾಗುತ್ತಿವೆ. ಉತ್ತರದ ತನ್ನ ಮೂರೂ ಹಾರ್ಟ್ ಲ್ಯಾಂಡ್‌ಗಳನ್ನು ಕಳೆದುಕೊಂಡಿರುವ ಬಿಜೆಪಿ ಸಪ್ಪೆ ಮೊರೆ ಹಾಕಿಕೊಂಡಿದ್ದರೆ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಡ್ ರಾಜ್ಯಗಳನ್ನು ಗೆದ್ದು ಕಾಂಗ್ರೆಸ್ ಬೀಗುತ್ತಿದೆ.

ಅದರಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತದಿಂದಾಗಿ ದೇಶಾದ್ಯಂತ ಇಂಧನ ಬೆಲೆಯಲ್ಲಿ ತುಸು ಏರಿಕೆ ಕಂಡುಬಂದಿದೆ. ಕಳೆದ 20 ದಿನಗಳಿಂದ ಸತತವಾಗಿ ಇಳಿಕೆಯತ್ತ ಮುಖ ಮಾಡಿದ್ದ ತೈಲೋತ್ಪನ್ನಗಳ ದರ, ಇದೀಗ  ಒಂದೇ ದಿನದಲ್ಲಿ ಏರಿಕೆಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಇಂದು ಕೆಲವೆಡೆ ಇಳಿಕೆಯಾಗಿದ್ದರೆ, ಮತ್ತೆ ಕೆಲವೆಡೆ ಏರಿಕೆಯಾಗಿದೆ. ಆದರೆ ಈ ಏರಿಕೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರದಲ್ಲಿ ಏರಿಕೆ ಕಾರಣವೇ ಹೊರತು ಚುನಾವಣೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ.

ಅದರಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರಗಳತ್ತ ಗಮನಹರಿಸುವುದಾದರೆ...

ರಾಷ್ಟ್ರ ರಾಜಧಾನಿ ನವದೆಹಲಿ-

ಪೆಟ್ರೋಲ್- 70.20 ರೂ.

ಡೀಸೆಲ್- 64.66 ರೂ.

ವಾಣಿಜ್ಯ ರಾಜಧಾನಿ ಮುಂಬೈ-

ಪೆಟ್ರೋಲ್- 75.80 ರೂ.

ಡೀಸೆಲ್- 67.66 ರೂ.

ಪ.ಬಂಗಾಳ ರಾಜಧಾನಿ ಕೋಲ್ಕತ್ತಾ-

ಪೆಟ್ರೋಲ್- 73.28 ರೂ.

ಡೀಸೆಲ್- 67.40 ರೂ.

ತಮಿಳುನಾಡು ರಾಜಧಾನಿ ಚೆನ್ನೈ-

ಪೆಟ್ರೋಲ್- 72.82 ರೂ.

ಡೀಸೆಲ್- 68.26 ರೂ.

ರಾಜ್ಯ ರಾಜಧಾನಿ ಬೆಂಗಳೂರು-

ಪೆಟ್ರೋಲ್- 70.75 ರೂ.

ಡೀಸೆಲ್- 65 ರೂ.

ಇಳಿಕೆ ಕಂಡ ನಗರಗಳು:

ಬೆಂಗಳೂರು- ಪೆಟ್ರೋಲ್ ದರದಲ್ಲಿ 10 ಪೈಸೆ ಇಳಿಕೆ, ಡೀಸೆಲ್ ದರದಲ್ಲಿ 15 ಪೈಸೆ ಇಳಿಕೆ

ನವದೆಹಲಿ-ಡೀಸೆಲ್ ದರದಲ್ಲಿ 21 ಪೈಸೆ

ಏರಿಕೆ ಕಂಡ ನಗರಗಳು-

ಕೋಲ್ಕತ್ತಾ- ಪೆಟ್ರೋಲ್ ದರದಲ್ಲಿ 1 ರೂ.

ನೋಯ್ಡಾ- ಪೆಟ್ರೋಲ್ ದರದಲ್ಲಿ 17 ಪೈಸೆ ಏರಿಕೆ, ಡೀಸೆಲ್ ದರದಲ್ಲಿ 15 ಪೈಸೆ ಏರಿಕೆ

ಷೇರುಮಾರುಕಟ್ಟೆ ತಲ್ಲಣ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಪೆಟ್ರೋಲ್ ದರ ಏರಿಕೆಗೆ ಕಾರಣ ಎನ್ನಲಾಗುತ್ತಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದ ಹಿನ್ನೆಲೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.