ನವದೆಹಲಿ(ನ.2): ಸತತ ಮೂರನೇ ವಾರವೂ ತೈಲೋತ್ಪನ್ನಗಳ ದರ ಇಳಿಕೆಯಾಗಿದ್ದು, ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.

ಇಂದು ಪೆಟ್ರೋಲ್ ದರಲ್ಲಿ 19 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 14 ಪೈಸೆಯಷ್ಟು ಇಳಿಕೆ ಕಂಡು ಬಂದಿದೆ. ರಾಜಧಾನಿ ನವದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 79.18ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 73.64ಕ್ಕೆ ಇಳಿಕೆಯಾಗಿದೆ.

ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲೂ ಪೆಟ್ರೋಲ್ ದರದಲ್ಲಿ 18ಪೈಸೆಯಷ್ಟು ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರ 84.68 ರೂಗಳಿಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 14 ಪೈಸೆಯಷ್ಟು ಕಡಿಮೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 77.18ಕ್ಕೆ ಇಳಿಕೆಯಾಗಿದೆ.

ಅದರಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 79.82 ರೂ. ಮತ್ತು ಡೀಸೆಲ್ ದರ 74.12 ರೂ. ಆಗಿದೆ.