ಸತತ ನಾಲ್ಕನೇ ದಿನವೂ ಇಳಿದ ತೈಲದರ! ಹಬ್ಬದ ಸಂದರ್ಭದಲ್ಲಿ ಜನತೆಗೆ ರಿಲೀಫ್ ನೀಡಿದ ಕೇಂದ್ರ ಸರ್ಕಾರ! ಮಹಾನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ(ಅ.21): ಹಬ್ಬದ ನಿಮಿತ್ತ ಕಳೆದ ಮೂರು ದಿನಗಳಿಂದ ಸತತವಾಗಿ ತೈಲದರದಲ್ಲಿ ಇಳಿಕೆಯಾಗುತ್ತಿದ್ದು, ಇಂದೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. 

ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ತೈಲದರ ಇಳಿದಿದ್ದು, ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಕ್ರಮವಾಗಿ 85 ಪೈಸೆ ಮತ್ತು 33 ಪೈಸೆ ಇಳಿಕೆಯಾಗಿದೆ.

Scroll to load tweet…

ಅದರಂತೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ 25 ಪೈಸೆಯಷ್ಟು ಇಳಿದಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 81.74 ರೂ. ಆಗಿದೆ. ಅಲ್ಲದೇ ಡೀಸೆಲ್ ಬೆಲೆಯಲ್ಲಿ 17 ಪೈಸೆ ಕಡಿಮೆಯಾಗಿದ್ದು, 75.19 ರೂ. ಆಗಿದೆ.