ದೇಶದಲ್ಲಿ ಸಗಟು ಹಣದುಬ್ಬರ ಏರಿಕೆಯಾಗಿರೋದು ಚಿಂತೆ ಮೂಡಿಸಿರೋ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ದರ ಇಂದು ಕೂಡ ಸ್ಥಿರತೆ ಕಾಯ್ದುಕೊಂಡಿರೋದು ಸಾಮಾನ್ಯ ಜನತೆಗೆ ಸ್ವಲ್ಪ ಮಟ್ಟಿಗೆ ನೆಮ್ಮದಿ ನೀಡಿದೆ. 

ಬೆಂಗಳೂರು (ಡಿ.15): ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಡಿ.15) ಕೂಡ ಪೆಟ್ರೋಲ್ (Petrol)ಹಾಗೂ ಡೀಸೆಲ್ (Diesel)ಬೆಲೆ (Price) ಯಥಾಸ್ಥಿತಿ ಕಾಯ್ದುಕೊಂಡಿದೆ. ಒಂದು ತಿಂಗಳಿಗೂ ಅಧಿಕ ಸಮಯದಿಂದ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude oil) ಬೆಲೆ ಏರಿಕೆ ಕಾಣುತ್ತಿದ್ದರೂ ದೇಶದಲ್ಲಿ ಮಾತ್ರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ತಿಂಗಳ ಪ್ರಾರಂಭದಲ್ಲಿ ದೆಹಲಿ (Delhi) ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ (VAT)ಕಡಿತಗೊಳಿಸಿದ ಕಾರಣ ಅಲ್ಲಿ ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಇನ್ನು ಅಕ್ಟೋಬರ್ ನಲ್ಲಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನವೆಂಬರ್ ಮೊದಲ ವಾರದಲ್ಲಿ ಇಂಧನ ಬೆಲೆ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿತ್ತು. ಇದ್ರಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿತ್ತು. ಆ ನಂತರದ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. ಒಮಿಕ್ರಾನ್ ವೈರಸ್ ಭೀತಿ, ಅಮೆರಿಕದಲ್ಲಿ ಹೆಚ್ಚುತ್ತಿರೋ ಹಣದುಬ್ಬರದ ಜೊತೆಗೆ ಭಾರತದಲ್ಲೂ ಸಗಟು ಹಣದುಬ್ಬರ ಕಳೆದ 30 ವರ್ಷಗಳಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿರೋದು ಮುಂದಿನ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮೇಲೆ ಪರಿಣಾಮ ಬೀರೋ ಸಾಧ್ಯತೆಯಿದೆ. ಈ ನಡುವೆ ಇಂದು (ಡಿ.15) ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ (ಡಿ.15) ಪೆಟ್ರೋಲ್ ಹಾಗೂ ಡೀಸೆಲ್ ದರದ ಮಾಹಿತಿ ಇಲ್ಲಿದೆ.

Add Asianetnews Kannada as a Preferred SourcegooglePreferred

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಈ ಮೂರು ನಗರಗಳಲ್ಲಿ ಇಂಧನ ದರ ಸ್ಥಿರವಾಗಿದೆ. ಮೈಸೂರಿನಲ್ಲಿ (Mysore)ಪೆಟ್ರೋಲ್ ದರ ಲೀಟರ್ ಗೆ 100.32ರೂ. ಇದ್ದು, ನಿನ್ನೆ 100.08ರೂ.ಇತ್ತು. ಅಂದ್ರೆ ನಿನ್ನಗಿಂತ ಇಂದು 0.24ರೂ. ಏರಿಕೆಯಾಗಿದೆ. ಇನ್ನು ಡೀಸೆಲ್ ದರ ಇಂದು ಲೀಟರ್ ಗೆ 84.77ರೂ.ಇದೆ. ನಿನ್ನೆ ಲೀಟರ್ ಗೆ 84.56ರೂ. ಇತ್ತು. ಕಲಬುರಗಿಯಲ್ಲಿ(Kalburgi)ಪೆಟ್ರೋಲ್ ದರದಲ್ಲಿ ನಿನ್ನೆಗಿಂತ ಇಂದು 0.15ರೂ. ಇಳಿಕೆ ಕಂಡುಬಂದಿದೆ. ನಿನ್ನೆ ಪೆಟ್ರೋಲ್ ಲೀಟರ್ ಗೆ 101.04ರೂ. ಇತ್ತು. ಡೀಸೆಲ್ ಲೀಟರ್ ಗೆ ನಿನ್ನೆ 85.45ರೂ.ಇದ್ರೆ ಇಂದು 0.14ರೂ. ಇಳಿಕೆಯಾಗಿ 85.31ರೂ. ಇದೆ.

Nominee To PF:ನಾಮಿನಿ ಸೇರ್ಪಡೆಗೆ ಡಿ.31 ಕೊನೆಯ ದಿನಾಂಕ; ನಾಮಿನಿ ಸೇರಿಸೋದು ಹೇಗೆ? ಇಲ್ಲಿದೆ ಮಾಹಿತಿ

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

ಜನ ಸಾಮಾನ್ಯರಿಗೆ ಡಬಲ್ ಶಾಕ್, 30 ವರ್ಷದ ಗರಿಷ್ಠಕ್ಕೆ Wholesale Inflation!

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"