ಲೋಕಸಭೆಯಲ್ಲಿ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ| ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ ಕೇಂದ್ರ ಹಣಕಾಸು ಸಚಿವೆ| ಅರ್ಥ ಪಥದ ನೀಲನಕ್ಷೆ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್| ಸ್ವಚ್ಛ ಭಾರತ ಅಭಿಯಾನದ ಮಾಹಿತಿ ನೀಡಿದ ವಿತ್ತ ಸಚಿವೆ| ಕೇಂದ್ರ ಸರ್ಕಾರದ ಅತ್ಯಂತ ಯಶಸ್ವಿ ಅಭಿಯಾನ ಎಂದ ನಿರ್ಮಾಲಾ| 1,700 ನಗರಗಳಲ್ಲಿ 45,000ಕ್ಕೂ ಹೆಚ್ಚು ಸಾರ್ವಜನಿಕ ಶೌಚಾಲಯ ನಿರ್ಮಾಣ| ಗೂಗಲ್ ಮ್ಯಾಪ್ ಮೂಲಕ ಶೌಚಾಲಯ ಹುಡುಕುವ ಅವಕಾಶ| ಪ್ರತಿ ಗ್ರಾಮದಲ್ಲೂ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಒತ್ತು|

ನವದೆಹಲಿ(ಜು.05): ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಟ್ಟಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಳಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ವಚ್ಛ ಭಾರತ ಅಭಿಯಾನದ ಬೆಳವಣಿಗೆ ಕುರಿತು ಎಳೆ ಎಳೆಯಾಗಿ ಬಿಚ್ಚಿಟ್ಟ ಹಣಕಸು ಸಚಿವೆ, ಸ್ವಚ್ಛ ಭಾರತದ ಅಭಿಯಾನ ಕೇಂದ್ರ ಸರ್ಕಾರದ ಅತ್ಯಂತ ಯಶಸ್ವಿ ಅಭಿಯಾನವಾಗಿ ಮುನ್ನುಗ್ಗುತ್ತಿದೆ ಎಂದು ಹೇಳಿದ್ದಾರೆ.

ಯೋಜನೆಯಡಿ 1,700 ನಗರಗಳಲ್ಲಿ 45,000ಕ್ಕೂ ಹೆಚ್ಚು ಸಾರ್ವಜನಿಕ ಶೌಚಾಲಯ ನಿರ್ಮಾಣವಾಗಿದ್ದು, ಶೌಚಾಲಯ ನಿರ್ಮಾಣಗಳನ್ನು ಗೂಗಲ್ ಮ್ಯಾಪ್ ಮೂಲಕವೂ ಹುಡುಕಬಹುದಾಗಿದೆ ಎಂದು ಸಚಿವರು ಪ್ರಕಟಿಸಿದ್ದಾರೆ.

Scroll to load tweet…

1 ಕೋಟಿಗೂ ಹೆಚ್ಚು ಜನರು ಸ್ವಚ್ಛತಾ ಆಪ್ ಡೌನ್ ಲೋಡ್ ಮಾಡಿದ್ದು, ಗ್ರಾಮೀಣ ಭಾಗದಲ್ಲೂ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಪ್ರತಿ ಗ್ರಾಮದಲ್ಲೂ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಮುಂದಾಗಿರುವ ಕೇಂದ್ರ, ನಗರ ಪ್ರದೇಶಗಳು ಶೇ.94ರಷ್ಟು ಬಯಲು ಶೌಚಾಲಯ ಮುಕ್ತವಾಗಿವೆ ಎಂದು ಸಚಿವರು ತಿಳಿಸಿದ್ದಾರೆ.

ಇದೇ ಅಕ್ಟೊಬರ್ 2ರಂದು ರಾಜಘಾಟ್'ನಲ್ಲಿ ಸ್ವಚ್ಛತಾ ಕೇಂದ್ರ ಉದ್ಘಾಟನೆಯಾಗಲಿದೆ ಎಂದು ಹಣಕಸು ಸಚಿವರು ತಿಳಿಸಿದರು.