Asianet Suvarna News Asianet Suvarna News

Invest Karnataka 2022: ಕೋವಿಡ್‌ ಕಾಲದಲ್ಲಿ ಕರ್ನಾಟಕದ ಕೆಲಸಕ್ಕೆ ರಾಜೀವ್‌ ಚಂದ್ರಶೇಖರ್‌ ಮೆಚ್ಚುಗೆ

ಮೂರು ದಿನಗಳ ಕಾಲ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಐಟಿ ಬಿಟಿ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಮಾತನಾಡಿದ, ಕರ್ನಾಟಕ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Global Investors Meet Invest Karnataka 2022 Union Minister  Rajeev Chandrasekhar san
Author
First Published Nov 2, 2022, 1:20 PM IST

ಬೆಂಗಳೂರು (ನ. 2): ರಾಜಧಾನಿಯ ಅರಮನೆಯ ಮೈದಾನದಲ್ಲಿ ಆರಂಭಗೊಂಡ ಮೂರು ದಿನಗಳ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಬುಧವಾರ ನರೇಂದ್ರ ಮೋದಿ ವರ್ಚುವಲ್‌ ಆಗಿ ಚಾಲನೆ ನೀಡಿದರು. ಈ ಬಳಿಕ ಮಾತನಾಡಿದ ಅವರು ಕರ್ನಾಟಕ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ಅಭಿವೃದ್ಧಿಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಗಿದ್ದರು. ಆ ಬಳಿಕ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಐಟಿ ಬಿಟಿ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌, ಕೋವಿಡ್‌ ಕಾಲದಲ್ಲಿ ಕರ್ನಾಟಕ ಸರ್ಕಾರ ಮಾಡಿದ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರು ವಿಶ್ವದ ಅತ್ಯಂತ ಸುಂದರ ನಗರ. ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ವಿಶ್ವದ ಎಲ್ಲಾ ಉದ್ಯಮಿಗಳಿಗೆ ಸ್ವಾಗತ ಎಂದ ರಾಜೀವ್‌ ಚಂದ್ರಶೇಖರ್‌, ಕೋವಿಡ್ ಸಮಯದಲ್ಲಿ ಕರ್ನಾಟಕ ಸರ್ಕಾರ ಉತ್ತಮ ಕೆಲಸ ಮಾಡಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಾರ್ಡ್ ವರ್ಕಿಂಗ್‌ ಸಿಎಂ ಬಸವರಾಜ್ ಬೊಮ್ಮಾಯಿ‌ ನೇತೃತ್ವದಲ್ಲಿ ಕರ್ನಾಟಕದಲ್ಲಿ ಉತ್ತಮ ಕೆಲಸವಾಗಿದೆ. ಇಂದು ವಿಶ್ವದಲ್ಲಿಯೇ ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಮುಂಚೂಣಿಯಲ್ಲಿದೆ. ಮೋದಿ ನೇತೃತ್ವದಲ್ಲಿ ಭಾರತ ಇನಷ್ಟು ಏಳಿಗೆಯಾಗಿದೆ ಎಂದು ಹೇಳಿದರು.

ಕರ್ನಾಟಕಕ್ಕೆ ಐಟಿ ಸೆಕ್ಟರ್ (IT Sector) ಬಂದು 25 ವರ್ಷವಾಗುತ್ತಿದೆ. ದೇಶದಲ್ಲಿ ತಂತ್ರಜ್ಞಾನದೊಂದಿಗೆ (technology) ಎಲೆಕ್ಟ್ರಾನಿಕ್ ಮತ್ತು ಸೆಮಿಕಂಡಕ್ಟರ್ ಉದ್ಯಮ ಕೂಡ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ. 2014 ರಲ್ಲಿ ನಾವು ಎಲ್ಲಾ ಮೊಬೈಲ್ ಉತ್ಪನ್ನಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿದ್ದೆವು. ಆದರೆ, ಈಗ ಶೇಕಡಾ 97 ರಷ್ಟು ಮೊಬೈಲ್ ಉತ್ಪನ್ನ ಭಾರತದಲ್ಲೇ ಆಗುತ್ತಿದೆ. ಇದು ನಿಜಕ್ಕೂ ಹೆಮ್ಮೆಯ ವಿಚಾರ ಎಂದು (Minister of State for Skill Development and Entrepreneurship of India Rajeev Chandrasekhar) ಹೇಳಿದರು.

ಸೋಷಿಯಲ್‌ ಮೀಡಿಯಾಗಳಿಗೆ ಹೊಸ ನಿಯಮ: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌

ಮೊದಲ ದಿನವೇ ಬಂಪರ್‌ ಹೂಡಿಕೆ: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ(global investors meet,) ಮೊದಲ ದಿನವೇ ಬಂಪರ್ ಹೂಡಿಕೆಯಾಗಿದೆ. ಜೆಎಸ್‌ಡಬ್ಲ್ಯು ಗ್ರೂಪ್‌ ಮುಂದಿನ ವರ್ಷಗಳಲ್ಲಿ ಒಂದು ಲಕ್ಷ ಕೋಟಿ ಹೂಡಿಕೆ ಮಾಡಲಿದೆ ಎಂದು ಜೆಎಸ್‌ಡಬ್ಲ್ಯು ಅಧ್ಯಕ್ಷ ಸಜ್ಜನ್‌ ಜಿಂದಾಲ್‌ ಘೋಷಣೆ ಮಾಡಿದ್ದಾರೆ.  ಇನ್ನೊಂದೆಡೆ ರಾಜ್ಯದಲ್ಲಿ 50 ಸಾವಿರ ಕೋಟಿ ಹೂಡಿಕೆ ಮಾಡಲಿದ್ದೇವೆ ಸ್ಟೈರ್ಲೈಟ್ ಪವರ್  ಸಿಇಓ ಪ್ರತೀಕ್ ಅಗರ್ವಾಲ್ ಘೋಷಣೆ ಮಾಡಿದ್ದಾರೆ. ಇವಿಷ್ಟು ಹಣವನ್ನು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡುವುದಾಗಿ ತಿಳಿಸಿದ್ದು, ಗ್ರೀನ್ ಎನರ್ಜಿಯ ಸಂಶೋಧನೆಯಲ್ಲಿ ಹೂಡಿಕೆ ಮಾಡಲಿದ್ದೇವೆ ಎಂದು (Invest Karnataka 2022) ಹೇಳಿದರು.

iPhone 14 Pro ಸ್ಟಾಕ್‌ ಖಾಲಿ, ಆಪಲ್‌ ಜೊತೆ ಮಾತನಾಡಿದ ಕೇಂದ್ರ ಸಚಿವ!

ಮೊದಲ ದಿನ 3.61 ಲಕ್ಷ ಕೋಟಿ ರೂ ಮೊತ್ತದ ಒಡಂಬಡಿಕೆಗಳಿಗೆ ಸಹಿ ಹಾಕಲಾಗಿದೆ. ಗ್ರೀನ್ ಹೈಡ್ರೋಜನ್, ಗ್ರೀನ್ ಅಮೋನಿಯಂ, ಸೋಲಾರ್ ಇಂಧನ ಕ್ಚೇತ್ರ, ಸೆಮಿ ಕಂಡಕ್ಟರ್ ವಲಯ, ಎಲೆಕ್ಟ್ರಾನಿಕ್ಸ್, ಉತ್ಪಾದನಾ ವಲಯಗಳ ಕೈಗಾರಿಕೋದ್ಯಮಿಗಳಿಂದ ಮೊದಲ ದಿನ ಹೂಡಿಕೆಯಾಗಿದೆ.

ಮೂರು ದಿನಗಳ ಕಾಲ ನಡೆಯುವ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಆಗಿ ಚಾಲನೆ ನೀಡಿದರು. ಕೈಗಾರಿಕಾ ವಲಯದಲ್ಲಿ ಹೊಸ ಕ್ರಾಂತಿ ಸೃಷ್ಟಿಸುವ ನಿರೀಕ್ಷೆಯೊಂದಿಗೆ ಸಮಾವೇಶ ನಡೆಸಲಾಗುತ್ತಿದೆ. 5 ಲಕ್ಷ ಕೋಟಿ ರೂ ಬಂಡವಾಳ ಹೂಡಕೆಯಾಗುವ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾವಿದೆ.  ರಾಜ್ಯದಲ್ಲಿ ಈ ಬಾರಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಹೇಳಿದ್ದಾರೆ. ಬಿಲ್ಡ್ ಫಾರ್ ದಿ ವಲ್ರ್ಡ್ ಎಂಬ ಪರಿಕಲ್ಪನೆಯೊಂದಿಗೆ ಮೂರು ದಿನಗಳ ಸಮಾವೇಶ ನಡೆಯಲಿದೆ.  ಇನ್ವೆಸ್ಟ್‌ ಕರ್ನಾಟಕ 2022 ಜಾಗತಿಕ ಸಮಾವೇಶಕ್ಕೆ 50 ಕ್ಕೂ ಹೆಚ್ಚು ದೇಶಗಳು ಭಾಗಿಯಾಗಿವೆ. ಫ್ರಾನ್ಸ್, ನೆದರ್ಲ್ಯಾಂಡ್, ಜರ್ಮನಿ, ಜಪಾನ್ ಸೇರಿದಂತೆ ಪಾಲುದಾರ ದೇಶಗಳು ಭಾಗಿಯಾಗಿದೆ.

Follow Us:
Download App:
  • android
  • ios