Asianet Suvarna News Asianet Suvarna News

ಜಿಮ್‌ನಿಂದ 5 ಲಕ್ಷ ಕೋಟಿ ಬಂಡವಾಳ ನಿರೀಕ್ಷೆ: ಸಚಿವ ಮುರುಗೇಶ್‌ ನಿರಾಣಿ

ರಾಜ್ಯದಲ್ಲಿ ನ.2ರಿಂದ 4ರವರೆಗೆ ಬೆಂಗಳೂರಿನಲ್ಲಿ ‘ಇನ್ವೆಸ್ಟ್‌ ಕರ್ನಾಟಕ-2022’ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ನಿರೀಕ್ಷೆಯಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ಆರ್‌.ನಿರಾಣಿ ಹೇಳಿದ್ದಾರೆ. 

global investors meet state is expecting rs 5 lakh crore investment says murugesh nirani gvd
Author
First Published Oct 21, 2022, 11:09 AM IST

ಬೆಂಗಳೂರು (ಅ.21): ರಾಜ್ಯದಲ್ಲಿ ನ.2ರಿಂದ 4ರವರೆಗೆ ಬೆಂಗಳೂರಿನಲ್ಲಿ ‘ಇನ್ವೆಸ್ಟ್‌ ಕರ್ನಾಟಕ-2022’ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ನಿರೀಕ್ಷೆಯಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ಆರ್‌.ನಿರಾಣಿ ಹೇಳಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚುಯಲ್‌ ಮೂಲಕ ಚಾಲನೆ ನೀಡಲಿದ್ದಾರೆ. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ, ಭಗವಂತ ಖೂಬಾ, ಸ್ಮೃತಿ ಇರಾನಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

5 ಲಕ್ಷ ಉದ್ಯೋಗ ಸೃಷ್ಟಿನಿರೀಕ್ಷೆ: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆಯಿದ್ದು, 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆಯಾಗಲಿದೆ. ತನ್ಮೂಲಕ ಕನಿಷ್ಠ 5 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮಕ್ಕೆ ಬಲ: ಸಚಿವ ಮುರುಗೇಶ್ ನಿರಾಣಿ

ಬಂಡವಾಳ ಹೂಡಿಕೆಗೆ ಆಷರ್ಕಕ ತಾಣ: ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯುತ್ತಮ ಸ್ಥಾನ ಪಡೆದುಕೊಂಡಿದೆ ಎಂದರು. ಏಪ್ರಿಲ್‌ 2021ರಿಂದ 2022ರ ಮಾರ್ಚ್‌ ಅವಧಿಯಲ್ಲಿ 1.76 ಲಕ್ಷ ಕೋಟಿ ರು. ವಿದೇಶಿ ನೇರ ಹೂಡಿಕೆ ಆಕರ್ಷಿಸಲು ರಾಜ್ಯ ಯಶಸ್ವಿಯಾಗಿದೆ. ಕಳೆದ ಎರಡು ವರ್ಷಗಳಿಂದ ಈಚೆಗೆ 3 ಲಕ್ಷ ಕೋಟಿ ರು.ಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ಬಂದಿವೆ ಎಂದರು.

ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ: ಜರ್ಮನಿಯಲ್ಲಿ ಸಚಿವ ನಿರಾಣಿ ನಿಯೋಗ

ಗ್ರೀನ್‌ ಹೈಡ್ರೋಜನ್‌, ಎಲೆಕ್ಟ್ರಾನಿಕ್ಸ್‌ ಉತ್ಪಾದನೆ, ನವೀಕರಿಸಬಹುದಾದ ಇಂಧನಗಳು, ಏರೋಸ್ಪೇಸ್‌ ಮತ್ತು ಡಿಫೆನ್ಸ್‌, ಇ-ಮೊಬಿಲಿಟಿ ಮತ್ತು ಮೂಲಸೌಕರ್ಯಗಳಂತಹ ವಲಯಗಳಲ್ಲಿ 4 ಲಕ್ಷ ಕೋಟಿ ರು.ಗೂ ಅಧಿಕ ಮೌಲ್ಯದ ಯೋಜನೆಗಳಿಗೆ ಒಪ್ಪಂದ ಏರ್ಪಟ್ಟಿದೆ ಎಂದೂ ಹೇಳಿದರು. ಸಮಾವೇಶದ ಪೂರ್ವ ಸಿದ್ಧತೆಯಾಗಿ ಅಂತರಾಷ್ಟ್ರೀಯ ಹಾಗೂ ದೇಶೀಯ ರೋಡ್‌ ಶೋಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇವೆ. ದೆಹಲಿ, ಹೈದರಾಬಾದ್‌ ಹಾಗೂ ಮುಂಬಯಿ ರೋಡ್‌ ಶೋಗಳಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅಂತರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ಜಪಾನ್‌, ದಕ್ಷಿಣ ಕೊರಿಯಾ, ಅಮೆರಿಕ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿದೆ. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

Follow Us:
Download App:
  • android
  • ios