ಶ್ರಾವಣ ಮಾಸದಲ್ಲಿ ಆಭರಣಗಳ ವಹಿವಾಟು ಹೆಚ್ಚಾಗೇ ಇರುತ್ತದೆ. ನೀವೂ ಸಹ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಇಂದಿನ ಚಿನ್ನ, ಬೆಳ್ಳಿಯ ಬೆಲೆ ವಿವರ ಹೀಗಿದೆ..

ಇತ್ತೀಚೆಗೆ ಚಿನ್ನ, ಬೆಳ್ಳಿ ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಶ್ರಾವಣ ಮಾಸದ ಕೊನೆ ವಾರದಲ್ಲಿಂದು ಮತ್ತೆ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. ಸದ್ಯ, ಸಾಲು ಸಾಲು ಹಬ್ಬಗಳು ಹಾಗೂ ಶುಭ ಸಮಾರಂಭಗಳ ಸಂಖ್ಯೆಯೂ ಹೆಚ್ಚಾಗಿದ್ದು, ಈ ಹಿನ್ನೆಲೆ ಚಿನ್ನದ ಬೆಲೆಯೂ ಹೆಚ್ಚಾಗುತ್ತಿದೆ. ಶುಭ ಸಮಾರಂಭಗಳು ಹೆಚ್ಚಿರುವ ಹಿನ್ನೆಲೆ ಆಭರಣ ಖರೀದಿ, ವಹಿವಾಟು ಸಹಜವಾಗೇ ಹೆಚ್ಚಿರುತ್ತದೆ. ಅಂದರೆ ಜೇಬಿಗೆ ಹೆಚ್ಚು ಹೊರೆಯಾದರೂ ಬಂಗಾರ (Gold), ಬೆಳ್ಳಿ (Silver) ಖರೀದಿ ಇದ್ದೇ ಇರುತ್ತದೆ. ನಿಮಗೂ ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಹಾಗಾದರೆ, ಇಂದು ಬೆಂಗಳೂರಿನಲ್ಲಿ (Bengaluru) ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. 

ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಇಂದಿನ ಬೆಲೆ ವಿವರ ಇಲ್ಲಿದೆ..

ಒಂದು ಗ್ರಾಂ ಚಿನ್ನ (1GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,755
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,187

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,040
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,496

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,550
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,870

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,75,550
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,18,700

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,550 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,300, ರೂ. 47,500, ರೂ. 47,500 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,650 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದಲ್ಲಿ ಬೆಳ್ಳಿ ದರದಲ್ಲಿ ಇಂದು ಮತ್ತಷ್ಟು ಗಗನಕ್ಕೇರಿದೆ. ಅದೇ ರೀತಿ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಹ ಬೆಳ್ಳಿ ದರದಲ್ಲಿ ತುಟ್ಟಿಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 611, ರೂ. 6,110 ಹಾಗೂ ರೂ. 61,100 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,100 ಆಗಿದ್ದರೆ, ಮುಂಬೈನಲ್ಲಿ ರೂ. 55,400 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 55,400 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 55,400 ಆಗಿದೆ.