Asianet Suvarna News Asianet Suvarna News

Gold Silver Price: ಆಭರಣ ಪ್ರಿಯರಿಗೆ ಶುಭ ಸುದ್ದಿ: ಇಳಿಕೆಯಾದ ಬಂಗಾರ, ಬೆಳ್ಳಿ ದರ

ನೀವೂ ಸಹ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದು ಚಿನ್ನ, ಬೆಳ್ಳಿ ದರ ಕಡಿಮೆಯಾಗಿದ್ದು, ಬೆಲೆ ವಿವರ ಹೀಗಿದೆ..

gold and silver price 27th august 2022 in karnataka ash
Author
First Published Aug 27, 2022, 10:41 AM IST

ಇತ್ತೀಚೆಗೆ ಚಿನ್ನ(Gold), ಬೆಳ್ಳಿ (Silver) ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಸದ್ಯ, ಸಾಲು ಸಾಲು ಹಬ್ಬಗಳು ಹಾಗೂ ಶುಭ ಸಮಾರಂಭಗಳ ಸಂಖ್ಯೆ ಹೆಚ್ಚಾಗಿದೆ, ಆದರೂ, ಇಂದು ಬಂಗಾರ, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಇನ್ನು, ಶುಭ ಸಮಾರಂಭಗಳು ಹೆಚ್ಚಿರುವ ಹಿನ್ನೆಲೆ ಆಭರಣ (Jewellery) ಖರೀದಿ, ವಹಿವಾಟು ಸಹಜವಾಗೇ ಹೆಚ್ಚಿರುತ್ತದೆ..ನಿಮಗೂ ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಹಾಗಾದರೆ, ಇಂದು ಬೆಂಗಳೂರಿನಲ್ಲಿ (Bengaluru) ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. 
 
ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ಇಳಿಕೆಯಾಗಿದ್ದು, ಇಂದಿನ ಬೆಲೆ ವಿವರ ಇಲ್ಲಿದೆ..

ಇದನ್ನು ಓದಿ: Petrol, Diesel Price: ಶಿವಮೊಗ್ಗದಲ್ಲಿ ಏರಿಕೆ, ಬೆಳಗಾವಿಯಲ್ಲಿ ಇಳಿಕೆಯಾದ ಪೆಟ್ರೋಲ್‌ ದರ 

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,735
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,165

ಎಂಟು ಗ್ರಾಂ ಚಿನ್ನ (8GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,880
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,320

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,350
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,650

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,73,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,16,500

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,350 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,050, ರೂ. 47,300, ರೂ.  47,300 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,450 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶದಲ್ಲಿ ಬೆಳ್ಳಿ ದರದಲ್ಲಿ ಇಂದು ಇಳಿಕೆಯಾಗಿದೆ. ಅದೇ ರೀತಿ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಹ ಬೆಳ್ಳಿ ದರದಲ್ಲಿ ಕಡಿಮೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 607, ರೂ. 6,070 ಹಾಗೂ ರೂ. 60,700 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 60,700 ಆಗಿದ್ದರೆ, ಮುಂಬೈನಲ್ಲಿ ರೂ. 54,800 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 54,800 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 54,800 ಆಗಿದೆ.

Follow Us:
Download App:
  • android
  • ios